ದೇಶದಲ್ಲಿ 58 ಇಂಜಿನಿಯರಿಂಗ್ ಕಾಲೇಜುಗಳು ಬಂದ್, ಕರ್ನಾಟಕದಲ್ಲಿ ಎಷ್ಟು? ಇಲ್ಲಿದೆ ಮಾಹಿತಿ

Engineering Colleges Close: ದೇಶದಲ್ಲಿ 58 ಇಂನಿಯರಿಂಗ್ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಹಂತ-ಹಂತವಾಗಿ ಮುಚ್ಚಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧಿಕೃತವಾಗಿ ಅನುಮತಿ ನೀಡಿದೆ. ಹಾಗಾದ್ರೆ ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯದ ಎಷ್ಟು ಕಾಲೇಜುಗಳು ಸೇರಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದೇಶದಲ್ಲಿ ತಾಂತ್ರಿಕ ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮತ್ತು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಮಹತ್ವದ ಕ್ರಮ ಕೈಗೊಂಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದೇಶಾದ್ಯಂತ ಒಟ್ಟು 58 ಇಂನಿಯರಿಂಗ್ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಹಂತ-ಹಂತವಾಗಿ ಮುಚ್ಚಲು ಅಧಿಕೃತವಾಗಿ ಅನುಮತಿ ನೀಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಎರಡು ಪ್ರಮುಖ ಕಾಲೇಜುಗಳು ಸೇರಿವೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲೇ ಅತಿ ಹೆಚ್ಚು ತಾಂತ್ರಿಕ ಕಾಲೇಜುಗಳು ಮುಚ್ಚಿರುವುದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ. ಈ ಎರಡೂ ರಾಜ್ಯಗಳಲ್ಲಿ ತಲಾ 12 ಕಾಲೇಜುಗಳು ಬಂದ್ ಆಗಿವೆ. ಉಳಿದಂತೆ ಮಧ್ಯಪ್ರದೇಶದಲ್ಲಿ 8, ತೆಲಂಗಾಣದಲ್ಲಿ 4, ಪಂಜಾಬ್‌ನಲ್ಲಿ 4, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಕಾಲೇಜುಗಳು ಮುಚ್ಚಲ್ಪಟ್ಟಿವೆ.

AICTE Approves Closure of 58 Engineering Colleges Across India 2 Karnataka Institutions on List

ಕರ್ನಾಟಕದಲ್ಲೂ ಕಾಲೇಜುಗಳು ಬಂದ್

ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡಿನಲ್ಲಿ ತಲಾ 2 ಕಾಲೇಜುಗಳು ಬಂದ್ ಆಗಿದ್ದರೆ, ಹರಿಯಾಣ, ಒಡಿಶಾ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಕಾಲೇಜು ಮುಚ್ಚಲ್ಪಟ್ಟಿದೆ. ವಿಶೇಷ ಅಂದ್ರೆ ಮುಚ್ಚಲಾದ ಈ 58 ಸಂಸ್ಥೆಗಳಲ್ಲಿ ಕೇವಲ 3 ಮಾತ್ರ ಸರ್ಕಾರಿ ಅನುದಾನಿತ ಕಾಲೇಜುಗಳಾಗಿದ್ದು, ಉಳಿದ 55 ಕಾಲೇಜುಗಳು ಖಾಸಗಿ ಒಡೆತನದ ಸಂಸ್ಥೆಗಳಾಗಿವೆ.

ಕಾಲೇಜುಗಳ ಮುಚ್ಚುವಿಕೆಗೆ ಮುಖ್ಯ ಕಾರಣಗಳೇನು?

* ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಗಣನೀಯವಾಗಿ ಕುಸಿದಿರುವುದು.

* ನಿಯಮಾವಳಿಗಳ ಪ್ರಕಾರ ಇರಬೇಕಾದ ಅರ್ಹ ಬೋಧಕ ಸಿಬ್ಬಂದಿ ಮತ್ತು ಪ್ರೊಫೆಸರ್‌ಗಳ ಕೊರತೆ.

* AICTE ನಿಗದಿಪಡಿಸಿದ ಮೂಲಸೌಕರ್ಯಗಳು ಮತ್ತು ಕಾರ್ಯಾಚರಣೆಯ ಮಾನದಂಡಗಳನ್ನು ಪಾಲಿಸದಿರುವುದು.

ಕಾಲೇಜುಗಳ ಮುಚ್ಚುವಿಕೆಯ ಜೊತೆಗೆ ದೇಶದ ವಿವಿಧ ತಾಂತ್ರಿಕ ಸಂಸ್ಥೆಗಳಲ್ಲಿ ಬೇಡಿಕೆಯಿಲ್ಲದ ಅಥವಾ ಮೂಲಸೌಕರ್ಯ ಕೊರತೆ ಎದುರಿಸುತ್ತಿದ್ದ ಸುಮಾರು 950ಕ್ಕೂ ಹೆಚ್ಚು ಕೋರ್ಸ್‌ಗಳನ್ನು ಸಹ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ನಿರ್ಧಾರದಿಂದ ಈಗಾಗಲೇ ಆಯಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಳೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಇಲಾಖೆಯು ಹಂತ ಹಂತದ ಸ್ಥಗಿತ ನಿಯಮದಡಿ ಈ ಕ್ರಮ ಕೈಗೊಂಡಿದೆ. ಅಂದರೆ, ಈ ಕಾಲೇಜುಗಳಿಗೆ ಪ್ರಸಕ್ತ ವರ್ಷದಿಂದ ಹೊಸ ದಾಖಲಾತಿಗಳನ್ನು ಮಾಡಿಕೊಳ್ಳುವುದನ್ನು ಮಾತ್ರ ನಿಷೇಧಿಸಲಾಗಿದೆ. ಆದರೆ ಈಗಾಗಲೇ ದ್ವಿತೀಯ, ತೃತೀಯ ಹಾಗೂ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಗಿಯುವವರೆಗೆ ಅದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಮತ್ತು ಪದವಿ ಪಡೆಯಲು ಪೂರ್ಣ ಅವಕಾಶ ಕಲ್ಪಿಸಲಾಗಿದೆ. ಪೂರ್ಣ ಪ್ರಮಾಣದ ಮುಚ್ಚುವಿಕೆ ಸಂದರ್ಭದಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಲಾಗುತ್ತದೆ. ಆದರೆ ಇಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ರಕ್ಷಿಸಲು ಹಂತ-ಹಂತವಾಗಿ ಮುಚ್ಚುವ ಪ್ರಕ್ರಿಯೆ ಅನುಸರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+