Air India Flight: 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ

Air India Flight: ಕಳೆದ ವರ್ಷವಷ್ಟೇ ಸಂಭಂವಿಸಿದ್ದ ಏರ್ ಇಂಡಿಯಾ ದುರಂತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಇದೇ ಸಂಸ್ಥೆಯ ವಿಮಾನವು ಅಪಾಯಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ AI-171 ವಿಮಾನ ದುರಂತದ ( Ahmedabad Plane Crash ) ತನಿಖೆ ಅಂತಿಮ ಹಂತ ತಲುಪಿದ್ದು, ವಿಮಾನದ ಪ್ರಮುಖ ಭಾಗವಾದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಯಾವುದೇ ದೋಷವಿರಲಿಲ್ಲ ಎಂಬ ಅಂಶ ವರದಿಯಿಂದ ಬಹಿರಂಗಗೊಂಡಿದೆ.

Air India Flight Drops 300 Feet Mid-Air Near Delhi 12 Injured today AI379 Turbulence Incident

ಥೈಲ್ಯಾಂಡ್‌ನ ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ (ಆಗಸ್ಟ್ 4) ತೀವ್ರ ಗಾಳಿ, ಟರ್ಬುಲೆನ್ಸ್‌ಗೆ ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕೆಳಕ್ಕೆ ಕುಸಿದಿದೆ. ಈ ವೇಳೆ ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಫುಕೆಟ್‌ನಿಂದ ದೆಹಲಿಗೆ ಹೊರಟಿದ್ದ AI379 ವಿಮಾನವು ಹಾರಾಟ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ದಿಢೀರ್ 300 ಅಡಿ ಕೆಳಕ್ಕೆ ಕುಸಿದಿತು. ಈ ವೇಳೆ ವಿಮಾನದಲ್ಲಿದ್ದ 134 ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಈ ಘಟನೆಗೆ ಕಾರಣ ಏನು?

AI2379 ವಿಮಾನವು ಮಂಗಳವಾರ ಬೆಳಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಇನ್ನೂ ಈ ಘಟನೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಕ್ಲಿಯರ್ ಏರ್ ಟರ್ಬುಲೆನ್ಸ್ ಕಾರಣ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಏರ್ ಇಂಡಿಯಾ ಪ್ರಕಟಣೆಯಲ್ಲಿ ಏನಿದೆ?

ವಿಮಾನವು ಸುರಕ್ಷಿತವಾಗಿ ಕೆಳಗಿಳಿದ ಬಳಿಕ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ತೊಂದರೆ ಇಲ್ಲದೆ ವಿಮಾನದಿಂದ ಹೊರಗಡೆ ಬಂದಿದ್ದಾರೆ. ಕೆಲ ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅವರನ್ನು ತಕ್ಷಣ ವಿಮಾನ ನಿಲ್ದಾಣದ ಅಂಬುಲೆನ್ಸ್ ಹಾಗೂ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಅಧಿಕಾರಿಗಳಿಂದ ಪರಿಶೀಲನೆ

ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ಸಂಸ್ಥೆಯ ಮೊದಲ ಆದ್ಯತೆ ಆಗಿದ್ದು, ಗಾಯಗೊಂಡವರಿಗೆ ಅಗತ್ಯ ಇರುವ ಎಲ್ಲಾ ವೈದ್ಯಕೀಯ ನೆರವು ನೀಡಲಾಗಿದೆ. ವಿಮಾನದಲ್ಲಿ ಉಂಟಾದ ಈ ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ ವಿಮಾನವು ಯಾವುದೇ ಅಪಾಯ ಇಲ್ಲದೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಎಲ್ಲಾ 134 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿದಿದ್ದಾರೆ ಎಂದು ಸಂಸ್ಥೆ ತಿಳಿಸಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+