ಅವಘಡಕ್ಕೀಡಾದ ಏರ್ ಇಂಡಿಯಾ, 102 ಪ್ರಯಾಣಿಕರು ಪಾರು
ಕೊಚ್ಚಿ, ಸೆಪ್ಟೆಂಬರ್ 05 : 102 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಇದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅವಘಡಕ್ಕೀಡಾಗಿದೆ.
ಆರು ಸಿಬ್ಬಂದಿ ಹಾಗೂ 102 ಪ್ರಯಾಣಿಕರಿದ್ದ ಬೋಯಿಂಗ್ 737-800 ವಿಮಾನದವು ಕೊಚ್ಚಿ ನಿಲ್ದಾಣದಲ್ಲಿ ಮಂಗಳವಾರ ಬೆಳಿಗ್ಗೆ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಟ್ಯಾಕ್ಸಿವೇಯಲ್ಲಿ ವಿಮಾನದ ಮುಂದಿನ ಟಯರ್ ಜಖಂಗೊಂಡಿದೆ.

ವಿಮಾನದಲ್ಲಿದ್ದ ಪ್ರಯಾಣಿಕರನ್ನು ಏಣಿ ಮೂಲಕ ಸುರಕ್ಷಿತವಾಗಿ ಕೆಳಗಿಸಲಾಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಕೊಚ್ಚಿ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆ ವಕ್ತಾರರು ತಿಳಿಸಿದ್ದಾರೆ.












Click it and Unblock the Notifications