ಇಸ್ರೇಲ್‌ಗೆ ಹೋಗುವ, ಬರುವ ಏರ್ ಇಂಡಿಯಾ ವಿಮಾನ ರದ್ದು
ನವದೆಹಲಿ, ಅಕ್ಟೋಬರ್ 08; ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಕಾಳಗ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ತಲ್ಲಣ ಉಂಟು ಮಾಡಿದೆ. ಇಸ್ರೇಲ್‌ನಲ್ಲಿ ನೆಲೆಸಿರುವ ವಿವಿಧ ದೇಶಗಳ ಜನರ ಸುರಕ್ಷತೆ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ.
ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ದಾಳಿಯ ಪರಿಣಾಮ ಭಾರತದ ಏರ್ ಇಂಡಿಯಾ ಇಸ್ರೇಲ್‌ಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನಗಳನ್ನು ಅಕ್ಟೋಬರ್ 14ರ ತನಕ ಸ್ಥಗಿತಗೊಳಿಸಿದೆ. ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಕಾಳಗದಲ್ಲಿ ಇರುವರೆಗೂ 500 ಜನರು ಸಾವನ್ನಪ್ಪಿದ್ದಾರೆ.

ಭಾನುವಾರ ಏರ್ ಇಂಡಿಯಾ ಈ ಕುರಿತು ಆದೇಶ ಹೊರಡಿಸಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ಗೆ ಹೋಗುವ ಮತ್ತು ಅಲ್ಲಿಂದ ಬರುವ ವಿಮಾನವನ್ನು ಅಕ್ಟೋಬರ್ 14ರ ತನಕ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಇಸ್ರೇಲ್‌ಗೆ ವಿಮಾನವನ್ನು ರದ್ದುಗೊಳಿಸಿರುವ ಏರ್ ಇಂಡಿಯಾ, "ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ 2023ರ ಅಕ್ಟೋಬರ್ 14ರ ತನಕ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು ಸ್ಥಗಿತಗೊಳಿಸಲಾಗುತ್ತದೆ" ಎಂದು ಹೇಳಿದೆ.
ಏರ್ ಇಂಡಿಯಾ ಇಸ್ರೇಲ್‌ಗೆ ವಿಮಾನವನ್ನು ರದ್ದುಗೊಳಿಸಿದೆ. ಅಲ್ಲದೇ ಈ ಅವಧಿಯಲ್ಲಿ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕಗೆ ಸಂಸ್ಥೆ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದೆ. ಅಕ್ಟೋಬರ್ 14ರ ತನಕ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನದಲ್ಲಿ ಹೋಗಲು ಮತ್ತು ಬರಲು ಸಾಧ್ಯವಿಲ್ಲ.
ಭಾರತದ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶನಿವಾರ ಅವರು ಇಸ್ರೇಲ್‌ಗೆ ಸಂಪೂರ್ಣ ಬೆಂಬಲವನ್ನು ಘೋಷಣೆ ಮಾಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರಧಾನಿ ನರೇಂದ್ರ ಮೋದಿ ಆಪ್ತ ಸ್ನೇಹಿತರಲ್ಲಿ ಒಬ್ಬರು.
ವಾರದಲ್ಲಿ 5 ದಿನಗಳ ಕಾಲ ನವದೆಹಲಿ ಮತ್ತು ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ಗೆ ಏರ್ ಇಂಡಿಯಾ ವಿಮಾನ ಸಂಚಾರ ನಡೆಸುತ್ತಿತ್ತು. ಆದರೆ ಈಗ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನಲೆಯಲ್ಲಿ ವಿಮಾನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಸಹಾಯವಾಣಿ ಆರಂಭ; ವಿವಿಧ ರಾಷ್ಟ್ರಗಳು ಇಸ್ರೇಲ್‌ನಲ್ಲಿ ನೆಲೆಸಿರುವ ತಮ್ಮ ದೇಶದ ಜನರ ಸುರಕ್ಷತೆ ಬಗ್ಗೆ ಕಾಳಜಿ ವ್ಯಕ್ತಪಡಿಸಿವೆ. ಭಾನುವಾರ ಕರ್ನಾಟಕ ಸರ್ಕಾರ ಸಹ ಇಸ್ರೇಲ್‌ನಲ್ಲಿ ನೆಲೆಸಿರುವ ಕನ್ನಡಿಗರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಿದೆ.
ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯು ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ ಎಂದು ಹೇಳಿದೆ.
ದಯವಿಟ್ಟು ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಾ, ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ (Bomb Shelter) ಹತ್ತಿರ ಇರಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಇಸ್ರೇಲಿ ಹೋಮ್ ಫಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ ಎಂದು ಮನವಿ ಮಾಡಿದೆ.
ತುರ್ತು ಸಂದರ್ಭದಲ್ಲಿ, ದಯವಿಟ್ಟು ನಮ್ಮನ್ನು +97235226748 ನಲ್ಲಿ ಸಂಪರ್ಕಿಸಿ ಅಥವಾ [email protected] ನಲ್ಲಿ e-ಮೇಲ್ ಸಂದೇಶವನ್ನು ಕಳುಹಿಸಿ, ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ ಎಂದು ತಿಳಿಸಿದೆ.
ಹಮಾಸ್ ಬಂಡುಕೋರರು ಇಸ್ರೇಲ್‌ನ ಜನರನ್ನು, ಅಧಿಕಾರಿಗಳನ್ನು ಅಪಹರಣ ಮಾಡಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಬಂಡುಕೋರರು ಇಸ್ರೇಲ್ ತೊರೆಯಬೇಕು ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. 'ಹಮಾಸ್ ನಿಯೋಜಿಸಿರುವ, ಅಡಗಿಕೊಂಡು ಕಾರ್ಯ ನಿರ್ವಹಣೆ ಮಾಡುತ್ತಿರುವ ಎಲ್ಲಾ ಸ್ಥಳಗಳನ್ನು ನಾವು ಅವಶೇಷಗಳಾಗಿ ಮಾಡುತ್ತೇವೆ" ಎಂದು ಟ್ವೀಟ್ ಮಾಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications