ವಾಯು ಮಾಲಿನ್ಯ: ನೋಯ್ಡಾದ ಎಲ್ಲಾ ಶಾಲೆಗಳಿಗೆ ನ.8 ರವರೆಗೆ ಆನ್‌ಲೈನ್ ಕ್ಲಾಸ್

ನವದೆಹಲಿ, ನವೆಂಬರ್ 4: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೀಗಾಗಿ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಶಾಲೆಗಳಿಗೆ ಆನ್‌ಲೈನ್ ಕ್ಲಾಸ್ ತೆಗೆದುಕೊಳ್ಳಲು ಸೂಚಿಸಲಾಗಿದೆ. 8ನೇ ತರಗತಿಯವರೆಗಿನ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ನವೆಂಬರ್ 8 ರವರೆಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸಲು ಗುರುವಾರ ತಿಳಿಸಲಾಗಿದೆ.

ಜೊತೆಗೆ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುವಂತೆ ಶಾಲೆಗಳಿಗೆ ತಿಳಿಸಲಾಗಿದೆ ಎಂದು ಗೌತಮ್ ಬುದ್ಧ ನಗರದ ಶಾಲೆಗಳ ಜಿಲ್ಲಾ ಇನ್ಸ್‌ಪೆಕ್ಟರ್ (ಡಿಐಒಎಸ್) ಧರ್ಮವೀರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ. ಮಾತ್ರವಲ್ಲದೆ ವಿದ್ಯಾರ್ಥಿಗಳಿಗೆ ಕ್ರೀಡೆ ಅಥವಾ ಸಭೆಗಳಂತಹ ಹೊರಾಂಗಣ ಚಟುವಟಿಕೆಗಳನ್ನು ಎಲ್ಲಾ ಶಾಲೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

"ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಬೋಧನೆಗಾಗಿ ಆನ್‌ಲೈನ್ ಕ್ಲಾಸ್ ತೆಗೆದುಕೊಳ್ಳಲು ಸೂಚಿಸಲಾಗಿದೆ. 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆನ್‌ಲೈನ್ ಮೋಡ್‌ಗೆ ಬದಲಾಯಿಸಲು ಸೂಚಿಸಲಾಗಿದೆ" ಎಂದು ಸಿಂಗ್ ಹೇಳಿದರು. ಜೊತೆಗೆ ಶಾಲೆಗಳಲ್ಲಿ ಕ್ರೀಡೆಗಳಂತಹ ಯಾವುದೇ ಹೊರಾಂಗಣ ಚಟುವಟಿಕೆಗಳನ್ನು ನವೆಂಬರ್ 8 ರವರೆಗೆ ಅನುಮತಿಸಲಾಗುವುದಿಲ್ಲ ಎಂದು ಡಿಐಒಎಸ್ ಪಿಟಿಐಗೆ ತಿಳಿಸಿದ್ದಾರೆ.

Air pollution: Online class till Nov 8 for all schools in Noida

ಗೌತಮ್ ಬುದ್ಧ ನಗರ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ಉನ್ನತ ಶಿಕ್ಷಣ ಕೇಂದ್ರಗಳನ್ನು ಒಳಗೊಂಡಂತೆ ಸುಮಾರು 1,800 ಶಾಲೆಗಳಿವೆ. ಗುರುವಾರ ವಾಯು ಗುಣಮಟ್ಟ ಸೂಚ್ಯಂಕ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ತೀವ್ರ ಮಟ್ಟವನ್ನು ತಲುಪಿದೆ. ಪಶ್ಚಿಮ ಉತ್ತರ ಪ್ರದೇಶದ ದೆಹಲಿಗೆ ಹೊಂದಿಕೊಂಡಿರುವ ಜಿಲ್ಲೆಯ ಭಾಗಗಳಲ್ಲಿ ದಟ್ಟವಾದ ಹೊಗೆ ಆವರಿಸಿದೆ.

Air pollution: Online class till Nov 8 for all schools in Noida

ಗಾಳಿ ಗುಣಮಟ್ಟ ಸೂಚ್ಯಂಕ 61 ಮತ್ತು 120 ರ ನಡುವೆ ಇದ್ದಾಗ ಅದನ್ನು 'ಮಧ್ಯಮದಿಂದ ಕಳಪೆ' AQI ಎಂದು ಪರಿಗಣಿಸಲಾಗುತ್ತದೆ. 121 ರಿಂದ 250 'ಅತ್ಯಂತ ಕಳಪೆ', 251 ರಿಂದ 350 'ತೀವ್ರ' ಮತ್ತು 350 ಕ್ಕಿಂತ ಹೆಚ್ಚು 'ತೀವ್ರ ಪ್ಲಸ್' ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+