ವಿಚಾರಣೆಗೆ ಹಾಜರಾಗುವಂತೆ ಚಿದಂಬರಂಗೆ 'ಇಡಿ' ನೋಟಿಸ್
ನವದೆಹಲಿ, ಜೂನ್ 4: ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ಏರ್ಸೆಲ್ - ಮ್ಯಾಕ್ಸಿಸ್ ಪ್ರಕರಣದಲ್ಲಿ ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ನಾಳೆ (ಜೂನ್ 5) ರಂದು ಹಾಜರಾಗುವಂತೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಈ ಹಿಂದೆ ಮೇ 30ರಂದು ಏರ್ಸೆಲ್ - ಮಾಕ್ಸಿಸ್ ಪ್ರಕರಣದಲ್ಲಿ ತಮ್ಮನ್ನು ಜಾರಿ ನಿರ್ದೇಶನಾಲಯ ಬಂಧಿಸದಂತೆ ಕೋರಿ ಚಿದಂಬರಂ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಸಂದರ್ಭ ಹೈಕೋರ್ಟ್ ಜೂನ್ 5ರ ವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ನಿರ್ದೇಶನ ನೀಡಿತ್ತು.

ಇದೇ ರೀತಿ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐನಿಂದ ಚಿದಂಬರಂ ಬಂಧನ ಭೀತಿ ಎದುರಿಸುತ್ತಿದ್ದು, ಜುಲೈ 3ರವರೆಗೆ ಬಂಧಿಸದಂತೆ ದೆಹಲಿ ಹೈಕೋರ್ಟ್ ಮಧ್ಯಂತರ ಭದ್ರತೆ ನೀಡಿದೆ.












Click it and Unblock the Notifications