ಜೂ. 12ರಂದು ವಿಚಾರಣೆಗೆ ಹಾಜರಾಗುವಂತೆ ಚಿದಂಬರಂಗೆ 'ಇಡಿ' ನೋಟಿಸ್
ನವದೆಹಲಿ, ಜೂನ್ 6: ಮತ್ತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರಿಗೆ ನೋಟಿಸ್ ನೀಡಲಾಗಿದೆ. ಜೂನ್ 12ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅವರಿಗೆ ನೋಟಿಸ್ ನೀಡಿದೆ.
ಮಂಗಳವಾರವಷ್ಟೇ ಪಿ. ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ ಆರು ಗಂಟೆ ತೀವ್ರ ವಿಚಾರಣೆ ನಡೆಸಿದ್ದರು.
ಏರ್ಸೆಲ್ - ಮ್ಯಾಕ್ಸಿಸ್ ಪ್ರಕರಣದಲ್ಲಿ ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಜೂನ್ 5 ರಂದು ಹಾಜರಾಗುವಂತೆ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ವಿಚಾರಣೆಗೆ ಹಾಜರಾಗಿದ್ದರು.

ಇದೀಗ ಮತ್ತೆ ಲೇವಾದೇವಿ ಕಾಯ್ದೆ ಅಡಿಯಲ್ಲಿ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಲಾಗಿದೆ.
ಏರ್ಸೆಲ್ - ಮಾಕ್ಸಿಸ್ ಪ್ರಕರಣದಲ್ಲಿ ತಮ್ಮನ್ನು ಜಾರಿ ನಿರ್ದೇಶನಾಲಯ ಬಂಧಿಸದಂತೆ ಕೋರಿ ಬುಧವಾರ ಎರಡನೇ ಬಾರಿಗೆ ಪಿ ಚಿದಂಬರಂ ಹೈಕೋರ್ಟ್ ಮೊರೆ ಹೋಗಿದ್ದರು. ಅವರಿಗೆ ನ್ಯಾಯಾಲಯ ಜುಲೈ 10ರವರೆಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಸದ್ಯಕ್ಕೆ ಅವರಿಗೆ ಬಂಧನ ಭೀತಿ ದೂರವಾಗಿದೆ.
ಇದರ ಮಧ್ಯೆಯೇ ನಿರೀಕ್ಷಣಾ ಜಾಮೀನು ಮುಗಿದ ಎರಡು ದಿನಗಳ ಬಳಿಕ ಅಂದರೆ ಜೂನ್ 12ರಂದು ವಿಚಾರಣೆಗೆ ಹಾಜರಾಗುವಂತೆ ಚಿದಂಬರಂ ಅವರಿಗೆ ನೋಟಿಸ್ ನೀಡಲಾಗಿದೆ.












Click it and Unblock the Notifications