• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೋವಲ್-ಬ್ಲಿಂಕೆನ್ ಭೇಟಿ: ಯಾವ್ಯಾವ ವಿಷಯಗಳ ಕುರಿತು ಚರ್ಚೆ

|
Google Oneindia Kannada News

ನವದೆಹಲಿ, ಜುಲೈ 28: ಅಮೆರಿಕ ವಿಶಾಂಗ ಕಾರ್ಯದರ್ಶಿ ಬ್ಲಿಂಕೆನ್ ಭಾರತಕ್ಕೆ ಭೇಟಿ ನೀಡಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾರತ-ಅಮೆರಿಕವನ್ನೂ ಜತೆಯಾಗಿ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವುದು ಹೇಗೆ ಎನ್ನುವ ಕುರಿತು ಚರ್ಚೆ ನಡೆದಿದೆ. ಒಂದು ಗಂಟೆಯ ಮಾತುಕತೆಯಲ್ಲಿ ಅಫ್ಘಾನಿಸ್ತಾನದ ಪರಿಸ್ಥಿತಿ, ಇಂಡೋ ಪೆಸಿಫಿಕ್ ಕುರಿತು ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಭದ್ರತೆ, ರಕ್ಷಣಾ ವ್ಯವಸ್ಥೆ, ಆರ್ಥಿಕತೆ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಗಿದೆ. ಹಾಗೆಯೇ ಎರಡೂ ದೇಶಗಳ ಸಂಬಂಧವನ್ನು ಮುಂದಿನ ಹಂತಕ್ಕೆ ಕರೆದೊಯ್ಯಲು ಬೇಕಾದ ದೀರ್ಘಾವಧಿಯ ಕ್ರಮಗಳ ಬಗ್ಗೆಯೂ ವಿಶೇಷ ಗಮನ ನೀಡಲಾಯಿತು.

ಪ್ರಾದೇಶಿಕ ಮತ್ತು ಜಾಗತಿಕ ಭದ್ರತೆಗೆ ಸಂಬಂಧಿಸಿದ ಸಮಕಾಲೀನ ಮತ್ತು ಭವಿಷ್ಯದ ವಿಷಯಗಳ ಬಗ್ಗೆ ವಿಷಯ ವಿನಿಮಯ ಮಾಡಿಕೊಳ್ಳಲಾಗಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಲಿಂಕನ್ ಅವರ ಮೊದಲ ಭಾರತ ಭೇಟಿ ಇದಾಗಿದೆ.

ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಮಾರ್ಚ್‌ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ, ಹವಾಮಾನ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಅಮೆರಿಕ ರಾಯಭಾರಿ ಜಾನ್ ಏಪ್ರಿಲ್‌ನಲ್ಲಿ ದೆಹಲಿಗೆ ಆಗಮಿಸಿದ್ದರು.

ಭಾರತ ಪ್ರವಾಸದ ಸಂದರ್ಭದಲ್ಲಿ ಆಂಟೋನಿ ಬ್ಲಿಂಕೆನ್ ಅವರು ಅಧಿಕಾರಿಗಳ ಜತೆ ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

'ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳು ಸಾರ್ವತ್ರಿಕ ಹಾಗೂ ನಿರ್ದಿಷ್ಟ ದೇಶ ಅಥವಾ ಸಂಸ್ಕೃತಿಯಾಚೆ ವಿಸ್ತರಿಸಿದೆ. ಭಾರತವು ಎರಡೂ ಕ್ಷೇತ್ರಗಳಲ್ಲಿನ ತನ್ನ ಸಾಧನೆ ಬಗ್ಗೆ ಹೆಮ್ಮೆ ಹೊಂದಿದೆ ಹಾಗೂ ಅನುಭವಗಳನ್ನು ಹಂಚಿಕೊಳ್ಳಲು ಸದಾ ಹರ್ಷಿಸುತ್ತದೆ' ಎಂದು ಸರಕಾರದ ಮೂಲಗಳು ಹೇಳಿವೆ.

English summary
US Secretary of State Antony Blinken on Wednesday held talks with National Security Advisor Ajit Doval on a range of bilateral and regional issues with a focus on taking the relationship to the "next level".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X