ಅಜಿತ್ ಪವಾರ್ ಸಾವಿನ ಸುತ್ತ ಅನುಮಾನ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಫೋಟಕ ಹೇಳಿಕೆ! Ajit Pawar
ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದ ವಿಮಾನ ಏರ್ಪೋರ್ಟ್ ರನ್‌ವೇಗೆ ಎಂಟ್ರಿ ಕೊಟ್ಟು ಲ್ಯಾಂಡ್ ಆಗುವಾಗ ದಿಢೀರ್ ಸ್ಪೋಟಗೊಂಡಿದೆ. ಈ ಘಟನೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 5 ಜನರು ಮೃತಪಟ್ಟಿದ್ದಾರೆ. ಹೀಗಿದ್ದಾಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ವಿಚಾರ ಇಡೀ ಇಂಡಿಯಾದಲ್ಲಿ ಭಾರಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಹೀಗೆ ಇದ್ದಾಗಲೇ ಅಜಿತ್ ಪವಾರ್ ಸಾವಿನ ಘಟನೆ ಬಗ್ಗೆ ಅನುಮಾನ ಕೂಡ ವ್ಯಕ್ತಪಡಿಸಲಾಗುತ್ತಿದೆ. ಅದ್ರಲ್ಲೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಜಿತ್ ಪವಾರ್ ಚುನಾವಣೆ ಪ್ರಚಾರಕ್ಕೆ ಹೊರಟಿದ್ದ ಸಮಯದಲ್ಲೇ ಈ ಘೋರ ದುರಂತ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಚುನಾವಣೆಗಾಗಿ ಪ್ರಚಾರ ಮಾಡಲು ಎನ್‌ಸಿಪಿ ನಾಯಕ & ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಅಜಿತ್ ಪವಾರ್ ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು.

ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಇಂದು ಮುಂಬೈ ನಗರದಿಂದ ಪುಣೆ ಕಡೆಗೆ ಅವರು ಪ್ರಯಾಣ ಬೆಳೆಸಿದ್ದರು. ಆದರೆ ಹೀಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಅಜಿತ್ ಪವಾರ್ ಅವರು ಇದ್ದ ವಿಮಾನ ರನ್‌ವೇ ಹಾದಿಯಲ್ಲೇ ಸ್ಫೋಟಗೊಂಡಿದೆ. ಈ ಭೀಕರ ವಿಮಾನ ದುರಂತದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅನುಮಾನ ವ್ಯಕ್ತಪಡಿಸಿದ್ದು, ಗಂಭೀರ ಆರೋಪಗಳನ್ನು ಕೂಡ ಮಾಡಿದ್ದಾರೆ.
ಅಜಿತ್ ಪವಾರ್ ಸಾವಿನ ಸುತ್ತ ಅನುಮಾನ?
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವಿಗೆ ಕಾರಣ ಆಗಿರುವ, ಬಾರಾಮತಿ ವಿಮಾನ ನಿಲ್ದಾಣ ಘಟನೆಯ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಈಗ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಇದು ದೇಶದ ರಾಜಕೀಯ ನಾಯಕರ ಸುರಕ್ಷತೆ ಪ್ರಶ್ನಿಸುವ ಮತ್ತು ಅಕ್ರಮದ ಸಾಧ್ಯತೆ ಸೂಚಿಸುತ್ತದೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಮಮತಾ ಬ್ಯಾನರ್ಜಿ. ಪವಾರ್ ಅವರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೆ ಒಳಗಾಗಿದ್ದೇನೆ ಎಂದು ಬೇಸರ ಹೊರ ಹಾಕಿರುವ ಮಮತಾ ಬ್ಯಾನರ್ಜಿ ಈ ಘಟನೆಯನ್ನ ರಾಷ್ಟ್ರಕ್ಕೆ ಗಂಭೀರ ನಷ್ಟ ಎಂದಿದ್ದಾರೆ. ಅಲ್ಲದೇ ರಾಜಕೀಯ ನಾಯಕರಿಗೂ ಸುರಕ್ಷತೆ ಮತ್ತು ಭದ್ರತೆ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
'ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ನಂಬಿಕೆ'
ಇದೇ ಸಮಯದಲ್ಲಿ ಮತ್ತೊಂದು ಆರೋಪ ಕೂಡ ಮಾಡಿರುವ ಮಮತಾ ಬ್ಯಾನರ್ಜಿ, ಅಜಿತ್ ಪವಾರ್ ಬಿಜೆಪಿ ತೊರೆಯಲು ಯೋಚಿಸುತ್ತಿದ್ದಾರೆ ಎಂದು ಸೂಚಿಸುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಇತ್ತೀಚೆಗೆ ವೈರಲ್ ಆಗಿದ್ದವು ಎಂದು ಉಲ್ಲೇಖಿಸಿದ್ದಾರೆ. ಈ ಮೂಲಕ ಅಜಿತ್ ಪವಾರ್ ಸಾವಿನ ವಿಚಾರ ಕೂಡ ರಾಜಕೀಯ ರೂಪ ಪಡೆಯುತ್ತಿದೆ. ಮತ್ತೊಂದು ಕಡೆ ನಮಗೆ ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ನಂಬಿಕೆ ಇದ್ದು, ಬೇರೆ ಯಾವುದೇ ಸಂಸ್ಥೆಯ ಮೇಲೆ ಅಲ್ಲ ಎಂದಿದ್ದಾರೆ ಮಮತಾ ಬ್ಯಾನರ್ಜಿ ಅವರು. ಮಮತಾ ಬ್ಯಾನರ್ಜಿ ಮಾಡಿರುವ ಆರೋಪಗಳು ಇದೀಗ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತಕ್ಕೆ ಭಾರಿ ದೊಡ್ಡ ತಿರುವು ನೀಡುತ್ತಿದೆ.












Click it and Unblock the Notifications