ಆಪರೇಷನ್ ಸಿಂಧೂರ್ ಬಗ್ಗೆ ಅಖಿಲೇಶ್ ಯಾದವ್, ಮಾಯಾವತಿ ಏನ್ ಹೇಳಿದ್ರು ಗೊತ್ತಾ?
ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಮೂಲಕ ಉಗ್ರರ 6 ನೆಲೆಗಳನ್ನು ಧ್ವಂಸ ಮಾಡಿದೆ. ಈ ಮೂಲಕ ಪಾಕ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ತಿರುಗೇಟು ಕೊಟ್ಟಿದೆ. ಇದಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಹಾಗೆಯೇ ಈ ಕಾರ್ಯಾಚರಣೆಯನ್ನು ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಶ್ಲಾಘಿಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭದ್ರತಾ ಪಡೆಗಳು ಪ್ರಾರಂಭಿಸಿದ 'ಆಪರೇಷನ್ ಸಿಂಧೂರ್' ಅನ್ನು ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಬುಧವಾರ ಶ್ಲಾಘಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಮಂಗಳವಾರ ತಡರಾತ್ರಿ ಸುಮಾರು1:44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ಪ್ರತ್ಯುತ್ತರ ನೀಡಿದೆ.

"ಧೈರ್ಯಶಾಲಿ ವಿಜಯಶಾಲಿಯಾಗು" ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಸಶಸ್ತ್ರ ಪಡೆಗಳ ಕ್ರಮವನ್ನು ಶ್ಲಾಘಿಸಿದ್ದಾರೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, "ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ನಾಶಪಡಿಸುವ ಭಾರತೀಯ ಸೇನೆಯ 'ಆಪರೇಷನ್ ಸಿಂಧೂರ್' ಕ್ರಮ ಅದ್ಭುತ ಮತ್ತು ಶ್ಲಾಘನೀಯ" ಎಂದು ಹೇಳಿದ್ದಾರೆ.
ಪಾಕಿಸ್ತಾನ ಸೇನೆ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆಗಳನ್ನು ಭಾರತೀಯ ಸೇನೆಯು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಕ್ಷಣಾ ಅಧಿಕಾರಿಗಳ ಪ್ರಕಾರ, ಭಾರತೀಯ ಸೇನಾ ಮುಖ್ಯಸ್ಥರು ಈ ಪ್ರದೇಶದಲ್ಲಿ ಪಾಕಿಸ್ತಾನ ಸೇನೆಯ ಕ್ರಮಗಳ ಬಗ್ಗೆ ಸ್ಥಳೀಯ ಸೇನಾ ಪಡೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆಯು ಫಿರಂಗಿ ಬಂದೂಕುಗಳನ್ನು ಬಳಸುತ್ತಿರುವ ಹಿನ್ನೆಲೆ ಸೂಕ್ತ ಪ್ರತಿಕ್ರಿಯೆ ನೀಡುವಂತೆ ಸೇನಾ ಪಡೆಯವರಿಗೆ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ನೀಡಲಾಗಿದೆ.
ಮೇ 07ರಂದು ಪಾಕಿಸ್ತಾನ ಸೇನೆಯ ಶೆಲ್ ದಾಳಿಯ ವೇಳೆ ತಮ್ಮ ಪ್ರಾಣವನ್ನು ಪಣಕ್ಕಿಟ್ಟ 5 ಎಫ್‌ಡಿ ರೆಜಿಸ್ಟ್ರೇಟರ್‌ನ ಲೆಫ್ಟಿನೆಂಟ್ ಎನ್.ಕೆ.ದಿನೇಶ್ ಕುಮಾರ್ ಅವರ ತ್ಯಾಗಕ್ಕೆ ಜಿಒಸಿ ಮತ್ತು ವೈಟ್ ನೈಟ್ ಕಾರ್ಪ್ಸ್‌ನ ಎಲ್ಲಾರೂ ಗೌರವ ಸಲ್ಲಿಸಿದ್ದಾರೆ. ಪೂಂಚ್‌ನಲ್ಲಿ ಅಮಾಯಕ ನಾಗರೀಕರರ ಮೇಲೆ ಗುಂಡಿನ ದಾಳಿ ನಡೆಸಿದ ಎಲ್ಲಾ ಬಲಿಪಶುಗಳೊಂದಿಗೆ ಕಾರ್ಪ್ಸ್ ಸಹ ಒಗ್ಗಟ್ಟನ್ನು ವ್ಯಕ್ತಪಡಿಸಿದೆ.
ಇದೀಗ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ 2ನೇ ದಾಳಿಗೆ ಭಾರತೀಯ ವಾಯುಪಡೆ ಸಜ್ಜಾಗಿದೆ. ಯಾವುದೇ ಕ್ಷಣದಲ್ಲಾದರೂ ದಾಳಿ ನಡೆಯುವ ಸಾಧ್ಯತೆಯಿದೆ. ಭಾರತದ ವಾಯುದಾಳಿಗೆ ಉಗ್ರ ಪೋಷಕ ಪಾಕಿಸ್ತಾನ ಅಕ್ಷರಸಹ ತತ್ತರಿಸಿ ಹೋಗಿದೆ. ಭಾರತೀಯ ಸಹೋದರಿ-ತಾಯಂದಿರ ಸಿಂಧೂರ ಅಳಿಸಿದವರ ವಿರುದ್ಧವೇ 'ಆಪರೇಷನ್ ಸಿಂಧೂರ್' ಮೂಲಕ ತಕ್ಕಪಾಠ ಕಲಿಸಲಾಗಿದೆ. ಇದೀಗ ಮತ್ತೊಂದು ಸುತ್ತಿನ ಕ್ಷಿಪಣಿ ದಾಳಿಗೆ ಭಾರತೀಯ ಸೇನಾಪಡೆ ಸಿದ್ಧವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ಕ್ಷಿಪಣಿ ದಾಳಿಯ ನಂತರ ಭಾರೀ ಬೆಳವಣಿಗಳು ಆಗುತ್ತಿದೆ. ಇವುಗಳ ಮೇಲ್ವಿಚಾರಣೆಗೆ ಶ್ರೀನಗರದ ಅಧಿಕಾರಿಗಳು ಕಾಶ್ಮೀರದಾದ್ಯಂತ ಕೇಂದ್ರ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದ್ದಾರೆ.
"ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಶ್ರೀನಗರದ ಉಪ ಆಯುಕ್ತರ ಕಚೇರಿಯ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಜಂಟಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಇದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಶ್ರೀನಗರದ ಒಟ್ಟಾರೆ ಮೇಲ್ವಿಚಾರಣೆಯಲ್ಲಿದೆ ಎಂದು ಸ್ಥಳೀಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕೃತ ಆದೇಶದಲ್ಲಿ ತಿಳಿಸಿದ್ದಾರೆ. ಕಾಶ್ಮೀರದ 10 ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.












Click it and Unblock the Notifications