ಅಖಿಲೇಶ್ ಯಾದವ್, ಲಾಲು ಯಾದವ್ ಮಹತ್ವದ ಮೀಟಿಂಗ್
ಪಾಟ್ನಾ: ಬಿಜೆಪಿ ವಿರುದ್ಧ ವಿಪಕ್ಷಗಳು ಒಂದಾಗುವ ಮುನ್ಸೂಚನೆ ಸಿಗುತ್ತಿರುವಾಗಲೇ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ದೆಹಲಿಯಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರ ನಡುವೆ 20 ನಿಮಿಷಗಳ ಕಾಲ ಮಾತುಕತೆ ನಡೆದಿದೆ ಎನ್ನಲಾಗಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಈ ಭೇಟಿ ಕುತೂಹಲ ಕೆರಳಿಸಿದೆ.
ಕೆಲವು ದಿನಗಳ ಹಿಂದಷ್ಟೇ ಲಾಲು ಪ್ರಸಾದ್ ಯಾದವ್ ಅವರ ಪುತ್ರ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅಖಿಲೇಶ್ ಯಾದವ್ ಮಾತುಕತೆ ನಡೆಸಿದ್ದರು. 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಪ್ರಯತ್ನ ಸಾಗಿದೆ. ಇದರ ಮುಂದಾಳತ್ವ ವಹಿಸಿಕೊಂಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಜೊತೆಯಾಗಿ ಅಖಿಲೇಶ್ ಯಾದವ್ ಜೊತೆ ಚರ್ಚೆ ನಡೆಸಿದ್ದರು. ಇದೀಗ ಅಖಿಲೇಶ್ ನೇರವಾಗಿ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ಸೋಮವಾರ ಮಮತಾ ಬ್ಯಾನರ್ಜಿ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ತೇಜಸ್ವಿ ಯಾದವ್ ಕೂಡ ಇದ್ದರು. ಆಗ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ ಶೂನ್ಯವಾಗಬೇಕು ಎಂಬುದನ್ನು ಬಯಸುತ್ತೇನೆ. ಮಾಧ್ಯಮಗಳ ಬೆಂಬಲ ಮತ್ತು ಸುಳ್ಳುಗಳಿಂದ ದೊಡ್ಡ ಹೀರೋ ಆಗಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ಈ ಘಟನೆ ಬಳಿಕ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ದೊಡ್ಡ ಕೂಗು ಕೇಳಿಬಂದಿತ್ತು. ಇದೀಗ ಅಖಿಲೇಶ್ ಮತ್ತು ಲಾಲು ಭೇಟಿ ದೇಶದ ಗಮನ ಸೆಳೆದಿದೆ.
ಲಾಲು ಯಾದವ್‌ಗೆ ಅನಾರೋಗ್ಯ
ಅಂದಹಾಗೆ ಬಿಹಾರ ಮುಖ್ಯಮಂತ್ರಿಯಾಗಿ, ಕೇಂದ್ರ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅನುಭವ ಇರುವ ಲಾಲು ಪ್ರಸಾದ್ ಯಾದವ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಅಖಿಲೇಶ್ ಯಾದವ್ ತೆರಳಿದ್ದಾಗಿ ತಿಳಿದುಬಂದಿದೆ. ಆದರೆ ಇದೇ ವೇಳೆ ರಾಜಕೀಯ ವಿಚಾರಗಳು ಚರ್ಚೆಯಾಗಿವೆ ಎನ್ನಲಾಗುತ್ತಿದೆ. ಸುಮಾರು 20 ನಿಮಿಷಗಳ ಕಾಲ ಇಬ್ಬರ ನಡುವೆ ಮಾತುಕತೆ ನಡೆದಿದೆ. ಲಾಲು ಪ್ರಸಾದ್ ಯಾದವ್ ಜೊತೆಗಿನ ಮಾತುಕತೆಯ ಫೋಟೋವನ್ನ ಅಖಿಲೇಶ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶರದ್ ಪವಾರ್ & ರಾಹುಲ್ ಭೇಟಿ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮಧ್ಯೆ ಕೆಲದಿನಗಳ ಹಿಂದೆ ವಿಪಕ್ಷಗಳ ಒಗ್ಗಟ್ಟಿನ ವಿಚಾರವಾಗಿ ಗಂಭೀರ ಚರ್ಚೆ ನಡೆದಿತ್ತು. ಸಂಸತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ ಹೆಣೆಯುವ ಸಲುವಾಗಿ ಎನ್‌ಸಿಪಿ ವರಿಷ್ಠ ಪವಾರ್ ಭೇಟಿ ನೀಡಿ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದರು. ಸಮಾನ ಮನಸ್ಕ ಪಕ್ಷಗಳು ಒಗ್ಗೂಡಬೇಕು ಎಂಬ ವಿಷಯ ಮೊದಲಿನಿಂದ ಚರ್ಚೆಯಲ್ಲಿತ್ತು. ಇದಾದ ಬಳಿಕ ಮಮತಾ ಬ್ಯಾನರ್ಜಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ನಿತೀಶ್, ತೇಜಸ್ವಿ & ರಾಹುಲ್ ಭೇಟಿ
ಶರದ್ ಪವಾರ್ ಭೇಟಿಗೆ ಮೊದಲು ರಾಹುಲ್ ಗಾಂಧಿ ಜೊತೆ ಬಿಹಾರ ಸಿಎಂ ನಿತೀಶ್ ಕುಮಾರ್ ಚರ್ಚೆ ನಡೆಸಿದ್ದರು. ನಿತೀಶ್ ಕುಮಾರ್ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಒಟ್ಟಾಗಿ ರಾಹುಲ್ ಜೊತೆ ಮಾತುಕತೆ ನಡೆಸಿದ್ದರು. ಈ ಚರ್ಚೆ ನಡೆದು ಒಂದೆರಡು ದಿನ ಕಳೆಯುವ ಒಳಗೆ ಶರದ್ ಪವಾರ್ ಕೂಡ ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ಹೀಗೆ ವಿರೋಧ ಪಕ್ಷಗಳ ಮುಖ್ಯಸ್ಥರು ಒಗ್ಗೂಡಿ, ಎನ್‌ಡಿಎ ಸರ್ಕಾರದ ವಿರುದ್ಧ ಬಲ ಪ್ರದರ್ಶನ ಮಾಡಲು ತಯಾರಿ ನಡೆಸಿದ್ದಾರೆ. ಆದರೆ ಇದು ಚುನಾವಣೆಯಲ್ಲಿ ಯಾವ ರೀತಿಯ ಪ್ರಭಾವ ಬೀರಲಿದೆ ಎಂಬುದನ್ನ ಕಾದು ನೋಡಬೇಕು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications