ಹೈದರಾಬಾದ್‌ನಲ್ಲಿ ಅಖಿಲೇಶ್ ಯಾದವ್-ಕೆಸಿಆರ್ ಭೇಟಿ : ಬಿಜೆಪಿಯನ್ನು ಸೋಲಿಸಲು ರಣತಂತ್ರ
ಹೈದರಾಬಾದ್, ಜುಲೈ 3: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಸೋಮವಾರ ಹೈದರಾಬಾದ್‌ನಲ್ಲಿ ಭೇಟಿಯಾದರು.
ವಿಶೇಷ ವಿಮಾನದ ಮೂಲಕ ಹೈದರಾಬಾದ್‌ಗೆ ಆಗಮಿಸಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ರನ್ನು ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ರಾಜ್ಯ ಸಚಿವ ಟಿ.ಶ್ರೀನಿವಾಸ್ ಯಾದವ್ ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಪ್ರಗತಿ ಭವನಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಕೆಸಿಆರ್ ಸ್ವಾಗತಿಸಿದರು

ಇಬ್ಬರು ನಾಯಕರು ಊಟದ ವೇಳೆ ಭೇಟಿಯಾಗಿದ್ದರು. ಭೇಟಿಯ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸುತ್ತಿವೆ.
ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸಬೇಕು
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಕೆಸಿಆರ್ ಅವರನ್ನು ಭೇಟಿಯಾದ ನಂತರವಷ್ಟೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಎಲ್ಲಾ ಪಕ್ಷಗಳು ಒಂದೇ ಗುರಿಯನ್ನು ಹೊಂದಿದೆ ಮತ್ತು ಅದು ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕುವುದು ಎಂದು ಪ್ರಶ್ನೆಗಳಿಗೆ ಉತ್ತರ ಕೊಡುವುದರಿಂದ ತಪ್ಪಿಸಿಕೊಂಡರು.
ನಾವೆಲ್ಲರೂ ಒಟ್ಟಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಬಯಸುತ್ತೇವೆ ಎಂದು ಅಖಿಲೇಶ್ ಯಾದವ್ ಹೇಳಿದರು. ಈ ಸಮಯದಲ್ಲಿ ನಾನು ಹೇಳಲು ಏನೂ ಇಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರಕಾರವನ್ನು ಕಿತ್ತೊಗೆಯಬೇಕಾದರೆ ಅದಕ್ಕೊಂದು ದಾರಿ ಹುಡುಕಬೇಕು ಎಂದರು.
ವಿರೋಧ ಪಕ್ಷಗಳ ಸಭೆಗೆ ಗೈರಾಗಿದ್ದ ಕೆಸಿಆರ್
ಕಳೆದ ತಿಂಗಳು ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಗೆ ಬಿಆರ್‌ಎಸ್ ಗೈರಾಗಿದ್ದರು. ಜನರು ಒಂದಾಗಬೇಕೇ ಹೊರತು ಪಕ್ಷಗಳಲ್ಲ ಎಂದು ಕೆ ಚಂದ್ರಶೇಖರ್ ರಾವ್ ಹೇಳಿದ್ದರು. ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಮೈತ್ರಿಕೂಟದ ಕೇಂದ್ರ ಸ್ಥಾನದಲ್ಲಿರಬೇಕು ಎಂಬ ಅಭಿಪ್ರಾಯಕ್ಕೆ ತಮ್ಮ ಪಕ್ಷ ಬದ್ಧವಾಗಿಲ್ಲ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಹೇಳಿದ್ದಾರೆ.
ಬಿಆರ್‌ಎಸ್‌ಗೆ ಆಹ್ವಾನವಿರುವ ಯಾವುದೇ ಸಭೆಗೆ ಹಾಜರಾಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಿದೆ ಎಂದು ಖಮ್ಮಮ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ ಒಂದು ದಿನದ ನಂತರ ಕೆ. ಚಂದ್ರಶೇಖರ್ ರಾವ್ ಅವರನ್ನು ಅಖಿಲೇಶ್ ಯಾದವ್ ಭೇಟಿ ಮಾಡಿದ್ದಾರೆ.












Click it and Unblock the Notifications