ಇಂಡಿಗೋ ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ 'ಮದ್ಯ'
ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯನ್ನು ರಾಜಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ವಿಮಾನ ಸಂಖ್ಯೆ 6E 1428 ರಲ್ಲಿ ದುಬೈನಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದರು. ಅವರನ್ನು ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ತಕ್ಷಣ ಬಂಧಿಸಲಾಗಿದೆ.
ಬಂಧಿತ ಪ್ರಯಾಣಿಕ ಪಂಜಾಬ್‌ನ ಜಲಂಧರ್‌ನ ಕೋಟ್ಲಿ ಗ್ರಾಮದ ನಿವಾಸಿಯಾಗಿದ್ದು, ವಿಮಾನದಲ್ಲಿ ಹೆಚ್ಚಿನ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮದ್ಯದ ಅಮಲಿನಲ್ಲಿ ಅವರು ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ವಿಮಾನದಲ್ಲಿದ್ದ ಸಿಬ್ಬಂದಿಯೇ ಪರಿಸ್ಥಿತಿ ನಿಭಾಯಿಸಿದರು. ಲ್ಯಾಂಡ್ ಆದ ಬಳಿಕ ವಿಮಾನ ಭದ್ರತಾ ವ್ಯವಸ್ಥಾಪಕರು ಪೊಲೀಸರಿಗೆ ಸಮಸ್ಯೆಯನ್ನು ತಿಳಿದಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಆಕ್ಷೇಪಾರ್ಹ ವರ್ತನೆಯ ಘಟನೆಗಳು ಕಳೆದ ಕೆಲವು ತಿಂಗಳುಗಳಲ್ಲಿ ಸಾಮಾನ್ಯವಾಗಿದೆ. ಕಳೆದ ತಿಂಗಳು, ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಭಾರತೀಯ ವ್ಯಕ್ತಿಯೊಬ್ಬರು ಮದ್ಯದ ಅಮಲಿನಲ್ಲಿ, ವಾಗ್ವಾದದ ಸಮಯದಲ್ಲಿ ಇನ್ನೊಬ್ಬ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.
ಕಳೆದ ವರ್ಷ ನವೆಂಬರ್‌ನಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಶಂಕರ್ ಮಿಶ್ರಾ ಎಂಬ ವ್ಯಕ್ತಿ, ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಸ್ಥಿತಿಯಲ್ಲಿದ್ದಾಗ ವೃದ್ಧೆಯೊಬ್ಬಳ ಮೇಲೆ ಮೂತ್ರ ವಿಸರ್ಜಿಸಿದ್ದಾನೆ ಎಂದು ಆರೋಪಿಸಲಾಗಿತ್ತು. ಆತನನ್ನು ಬಂಧಿಸಿ ನಂತರ ಜಾಮೀನು ನೀಡಲಾಗಿತ್ತು.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಡೇವಿಡ್ ಅಲನ್ ಬರ್ಕ್ ಎಂಬ 61 ವರ್ಷದ ಪ್ರಯಾಣಿಕ ಕೆಟ್ಟದಾಗಿ ವರ್ತಿಸಿದ್ದನು. ತನ್ನ ಪ್ರಯಾಣದ ಸಮಯದಲ್ಲಿ ಹೆಚ್ಚು ಮದ್ಯಪಾನ ಮಾಡಿ ಕ್ಯಾಬಿನ್ ಸಿಬ್ಬಂದಿಯೊಬ್ಬರಿಗೆ ಬಲವಾಂತವಾಗಿ ಚುಂಬಿಸಿದ್ದನು ಡೆಲ್ಟಾ ಫ್ಲೈಟ್‌ನಲ್ಲಿ ಏಪ್ರಿಲ್ 10 ರಂದು ಈ ಘಟನೆ ನಡೆದಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
ಇನ್ನೂ ಏಪ್ರಿಲ್‌ನಲ್ಲಿ ಏರ್ ಇಂಡಿಯಾ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನು ವಿಮಾನದಲ್ಲಿ ಅಶಿಸ್ತಿನಿಂದ ವರ್ತಿಸಿದ್ದಕ್ಕೆ ಎಫ್‌ಐಆರ್ ದಾಖಲಿಸಲಾಗಿತ್ತು. ದೆಹಲಿ-ಲಂಡನ್ AI 111 ವಿಮಾನದಲ್ಲಿ ಈ ಘಟನೆ ನಡೆದಿತ್ತು. ಈ ಕಾರಣದಿಂದ ಏರ್ ಇಂಡಿಯಾ ದೆಹಲಿ-ಲಂಡನ್ ವಿಮಾನವನ್ನು ದೆಹಲಿಗೆ ಹಿಂದಿರುಗಿಸಲಾಗಿತ್ತು. ಅಶಿಸ್ತಿನ ಪುರುಷ ಪ್ರಯಾಣಿಕರಿದ್ದ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (IGIA) ಮರಳಿತ್ತು.












Click it and Unblock the Notifications