ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಭಾರತೀಯ ಗಡಿ ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಏಪ್ರಿಲ್ 10 : ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಭಾರತೀಯ ಗಡಿ ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.

ಗಡಿಯಲ್ಲಿ ಕಾವಲು ಕಾಯುತ್ತಿದ್ದ ಯೋಧರು ಉಗ್ರರು ಗಡಿ ನುಸುಳುತ್ತಿದ್ದನ್ನು ಗಮನಿಸಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರು ಉಗ್ರರು ಮೃತಪಟ್ಟಿದ್ದಾರೆ.

Alert Indian Army kills 4 terrorists who tried to infiltrate into Kashmir

ಶ್ರೀನಗರದ ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷವನ್ನು ಅಸ್ತ್ರವಾಗಿಸಿಕೊಂಡು ಮತ್ತೊಷ್ಟು ಗಲಭೆ ಸೃಷ್ಟಿಸಲು ಈ ಉಗ್ರರು ಗಡಿ ನುಸುಳುತ್ತಿದ್ದರು ಎನ್ನಲಾಗಿದೆ.

ಮೃತ ಉಗ್ರರು ಲಷ್ಕರ್ ಎ ತೋಯ್ಬಾ ಸಂಘಟನೆಯ ಉಗ್ರರು ಎಂದು ಹೇಳಲಾಗುತ್ತಿದ್ದು ಭಾರತೀಯ ಸೇನೆ ಕಾರ್ಯಾಚರಣೆಯನ್ನು ಮುಂದುವರೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+