Breaking: ಹೆಣ್ಣು ಮಗುವಿನ ತಾಯಿಯಾದ ನಟಿ ಆಲಿಯಾ ಭಟ್
ಮುಂಬೈ, ನ.06: ಬಾಲಿವುಡ್ ನಟಿ ಆಲಿಯಾ ಭಟ್ ಭಾನುವಾರದಂದು ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ ಎಂದು ರಣಬೀರ್ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ಖಚಿತಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ, ಆಲಿಯಾ ಮತ್ತು ರಣಬೀರ್ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಆಗಮಿಸಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಆಲಿಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
''ಆಲಿಯಾ ಭಟ್ ಅವರಿಗೆ ಹೆಣ್ಣು ಮಗುವಾಗಿದೆ. ಅವರು ಬೆಳಗ್ಗೆ 7.30 ಕ್ಕೆ ಆಸ್ಪತ್ರೆಗೆ ಬಂದರು. ಅವರು ಕಳೆದ ಕೆಲವು ದಿನಗಳಿಂದ ನಿಯಮಿತವಾಗಿ 11 ರಿಂದ 12 ರವರೆಗೆ ಆಸ್ಪತ್ರೆಗೆ ಬರುತ್ತಿದ್ದಾರೆ" ಎಂದು ಆಸ್ಪತ್ರೆಯ ಒಳಗಿನವರು ತಿಳಿಸಿದರು.

ಭಾನುವಾರ ಚೊಚ್ಚಲ ಹೆಣ್ಣು ಮಗುವಿಗೆ ತಾಯಿಯಾಗಿರುವ ಬಗ್ಗೆ ಆಲಿಯಾ ಭಟ್ ಮುದ್ದಾದ ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಸಿದ್ಧ ಬಾಲಿವುಡ್ ಜೋಡಿ ಈ ವರ್ಷ ಏಪ್ರಿಲ್‌ನಲ್ಲಿ ತಮ್ಮ ಮುಂಬೈ ನಿವಾಸದಲ್ಲಿ ವಿವಾಹವಾಗಿದ್ದರು. ಬಳಿಕ ಜೂನ್‌ನಲ್ಲಿ ಆಲಿಯಾ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ತಾವು ಪೋಷಕರಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.












Click it and Unblock the Notifications