Deepfake: ರಶ್ಮಿಕಾ ಆಯ್ತು ಇದೀಗ ಆಲಿಯಾ ಭಟ್‌ ಡೀಪ್‌ಫೇಕ್‌ ವಿಡಿಯೋ ವೈರಲ್‌

ದೆಹಲಿ, ನವೆಂಬರ್‌ 27: ತಂತ್ರಜ್ಞಾನ ಅಭಿವೃದ್ಧಿ ಎಷ್ಟು ಉಪಯೋಗಕಾರಿಯೋ ಅಷ್ಟೇ ಅಪಾಯಕಾರಿ ಎನ್ನುವುದಕ್ಕೆ ಡೀಪ್‌ಫೇಕ್ ವಿಡಿಯೋಗಳು ಸಾಕ್ಷಿಯಾಗುತ್ತಿದೆ. ಡೀಪ್‌ಫೇಕ್ ವಿಡಿಯೋಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಇದೀಗ ಡೀಪ್‌ಫೇಕ್ ಮಾಡಿದ ಬಾಲಿವುಡ್‌ ನಟಿ ಆಲಿಯಾ ಭಟ್‌ ವಿಡಿಯೋಗಳು ವೈರಲ್‌ ಆಗುತ್ತಿದೆ.

ರಶ್ಮಿಕಾ ಮಂದಣ್ಣ, ಕಾಜೋಲ್, ಕತ್ರಿನಾ ಕೈಫ್ ಮತ್ತು ಸಾರಾ ತೆಂಡೂಲ್ಕರ್ ಸೇರಿದಂತೆ ಹಲವಾರು ಜನಪ್ರಿಯ ನಟಿಯರ ಡೀಪ್‌ಫೇಕ್‌ಗಳು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಇದೀಗ ಆ ಸಾಲಿಗೆ ನಟಿ ಆಲಿಯಾ ಭಟ್‌ ಸೇರಿದ್ದು, ಕೃತಕ ಬುದ್ಧಿಮತ್ತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಕಿಡಿಗೇಡಿಗಲ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ.

Alia Bhatt Deepfake Photos And Video Goes Viral

ಆಲಿಯಾ ಭಟ್ ಮುಖ ಡೀಪ್‌ಫೇಕ್‌ ಮಾಡಿ ಮಹಿಳೆ ಅಶ್ಲೀಲ ಸನ್ನೆಗಳನ್ನು ತೋರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಜನಪ್ರಿಯ ನಟ-ನಟಿಯರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಡೀಪ್‌ಫೇಕ್ ಮೂಲಕ ನಕಲಿ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಬೆಳವಣಿಗೆ ಭಾರೀ ಆತಂಕ ಹುಟ್ಟು ಹಾಕಿದೆ.

ಕೆಲ ದಿನಗಳ ಹಿಂದೆ ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ದೇಶಾದ್ಯಂತ ಡೀಪ್‍ಫೇಕ್‌ ಕುರಿತು ಸಾಕಷ್ಟು ಚರ್ಚೆಗಳು ಆರಂಭವಾಗಿತ್ತು. ಡೀಪ್‍‌ಫೇಕ್ ವಿಡಿಯೋಗಳ ಹಾವಳಿಗೆ ಕಡಿವಾಣ ಹಾಕುವಂತೆ ಸಾಕಷ್ಟು ಆಗ್ರಹಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಭಾರತದಲ್ಲಿ ಸಕ್ರಿಯವಾಗಿರುವ ಸೋಷಿಯಲ್ ಮೀಡಿಯಾಗಳುಕಂಪನಿಗಳ ಜೊತೆ ಸಭೆ ನಡೆಸಿತ್ತು.

ಸೋಷಿಯಲ್ ಮೀಡಿಯಾಗಳಲ್ಲಿ, ಆನ್‌ಲೈನ್‌ ವೇದಿಕೆಗಲ್ಲಿ ಡೀಪ್‌ಫೇಕ್‌ ವಿಡಿಯೋಗಳ ಕುರಿತು ತನಿಖೆ ನಡೆಸುವ ಬಗ್ಗೆ ವಿಶೇಷ ಅಧಿಕಾರಿಗೆ ಜವಾಬ್ದಾರಿಯನ್ನು ಸರ್ಕಾರ ವಹಿಸಲಿದೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದರು. ಅಲ್ಲದೇ ಡೀಪ್‌ಫೇಕ್‌ಗಳನ್ನು ಸೃಷ್ಟಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡಿದರೆ ₹1 ಲಕ್ಷ ದಂಡ ಮತ್ತು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ರಿಕೆ ಸಹ ನೀಡಿದ್ದರು.

ಇಂಟರ್ನೆಟ್ ಸುರಕ್ಷತೆ ಮತ್ತು ಡೀಪ್‌ಫೇಕ್‌ ವಿಡಿಯೋ ಪ್ರಸರಣವನ್ನು ತಡೆಯುವುದು ಸೋಷಿಯಲ್ ಮೀಡಿಯಾ ಕಂಪನಿಗಳ ಜವಾಬ್ದಾರಿಯಾಗಿದೆ. ಹಾಗಾಗಿ, ಭಾರತೀಯ ಕಾನೂನಿಗೆ ಅನುಗುಣವಾಗಿ ಕಂಪನಿಗಳು ತಮ್ಮ ಕಂಟೆಂಟ್ ಅನ್ನು ನಿಯಂತ್ರಿಸಬೇಕು. ಒಂದು ವೇಳೆ ಡೀಪ್‌ಫೇಕ್‌ ವಿಡಿಯೋಗಳನ್ನು ಕಿತ್ತುಹಾಕಲು ಕಂಪನಿ ವಿಫಲರಾದರೆ, ಅಂತಹ ಕಂಪನಿಗಳ ವಿರುದ್ಧ ವಿಚಾರಣೆ ಮತ್ತು ಡೀಪ್‌ಫೇಕ್ ವಿಡಿಯೋ ರಿಮೂವ್ ಮಾಡಲು ಬೇಕಾದ ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರವು ಕೈಗೊಳ್ಳಲಿದೆ ಎಂದು ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+