ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಾಕ್‌ಡೌನ್: ಮೇ 3ರ ವರೆಗೆ ಎಲ್ಲಾ ವಿಮಾನಗಳ ಹಾರಾಟ ರದ್ದು

|
Google Oneindia Kannada News

ನವದೆಹಲಿ, ಏಪ್ರಿಲ್ 14: ಲಾಕ್‌ಡೌನ್ ವಿಸ್ತರಣೆಯಾದ ಹಿನ್ನೆಲೆಯಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಮೇ 3ರವರೆಗೂ ನಿರ್ಬಂಧಿಸಲಾಗಿದೆ ಎಂದು ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟ ಕಮಿಷನರ್ ಭಾಸ್ಕರ್ ರಾವ್ | Bhaskar Rao | Bengaluru | Oneindia kannada

ಅಂದು ರಾತ್ರಿ 11.59ರವರೆಗೆ ಅನ್ವಯವಾಗುವಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೂ ಮುನ್ನ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗುತ್ತಿದ್ದಂತೆಯೇ ಡೊಮೆಸ್ಟಿಕ್ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನವನ್ನು ಸ್ಥಗಿತಗೊಳಿಸಲಾಗಿತ್ತು. ಕೇವಲ ಬೇರೆ ದೇಶದಲ್ಲಿರುವ ಭಾರತೀಯರನ್ನಯ ಕರೆ ತರಲು ಮಾತ್ರ ವಿಶೇಷ ವಿಮಾನವನ್ನು ಬಳಸಲಾಗಿತ್ತು.

ಮೇ 3ರ ತನಕ ಪ್ರಯಾಣಿಕ ರೈಲು ಸಂಚಾರ ರದ್ದು ಮೇ 3ರ ತನಕ ಪ್ರಯಾಣಿಕ ರೈಲು ಸಂಚಾರ ರದ್ದು

ಇದೀಗ ಇನ್ನೂ 19ದಿನಗಳ ಕಾಲ ವಿಮಾನ ಹಾರಾಟ ಬಂದ್ ಮಾಡಿ ಆದೇಶಿಸಲಾಗಿದೆ. ಮೇ 4ರಿಂದ ಮೊದಲು ದೇಶೀಯ ವಿಮಾನ ಹಾರಾಟ ನಡೆಸಲಿದೆಯೇ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ದೊರೆತಿಲ್ಲ.

All Domestic And International Flights Suspended Till May 3

ಹಾಗೆಯೇ ಮೇ 3ರವರೆಗೆ ರೈಲು ಸಂಚಾರವನ್ನೂ ವಿಸ್ತರಣೆ ಮಾಡಿ ಭಾರತೀಯ ರೈಲ್ವೆ ಪ್ರಕಟಣೆ ಹೊರಡಿಸಿದೆ.

ಅಗತ್ಯ ವಸ್ತುಗಳ ಸಾಗಣೆಗೆ ಗೂಡ್ಸ್ ರೈಲು, ಕೆಲವು ವಿಶೇಷ ರೈಲುಗಳು ಎಂದಿನಂತೆ ಸಂಚಾರ ನಡೆಸಲಿದೆ ಎಂದು ಭಾರತೀಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಮೇ 4ರಿಂದ ರೈಲು ಸಂಚಾರ ಆರಂಭವಾಗಲಿದೆಯೇ? ಎಂಬುದಕ್ಕೆ ಇನ್ನೂ ಉತ್ತರ ದೊರೆತಿಲ್ಲ.

English summary
All domestic and international scheduled airline operations shall remain suspended till 11.59 pm, 3rd May: Ministry of Civil Aviation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X