24 ತಾಸಿಗಿಂತ ಹೆಚ್ಚು ಮೇಘಾಲಯದಲ್ಲಿ ಇರಬೇಕಾದರೆ ಹೀಗೆ ಮಾಡಬೇಕು

ಶಿಲ್ಲಾಂಗ್, ನವೆಂಬರ್ 2: ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಕೊಳ್ಳಬೇಕು.

ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ.

2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ.

All Outsiders Who Entering Meghalaya Register With Government

ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು.ತಕ್ಷಣದಿಂದ ಜಾರಿಗೆ ಬರಲಿದೆ. ರಾಜ್ಯ ವಿಧಾನಸಭೆಯ ಮುಂದಿನ ಅಧಿವೇಶನದಲ್ಲಿ ಇದನ್ನು ಕ್ರಮಬದ್ಧಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ಮತ್ತು ಎನ್‌ಜಿಒಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಮೇಘಾಲಯದ ನಿವಾಸಿಯಲ್ಲದ ಮತ್ತು ರಾಜ್ಯದಲ್ಲಿ 24 ಗಂಟೆಗಳಿಗಿಂತ ಹೆಚ್ಚು ಕಾಲ ಇರಲು ಉದ್ದೇಶಿಸಿರುವ ಯಾವುದೇ ವ್ಯಕ್ತಿ ಸರ್ಕಾರಕ್ಕೆ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಇದನ್ನು ಅವರ ಸ್ವಂತ ಹಿತಾಸಕ್ತಿಗಾಗಿ ಹಾಗೂ ಸರ್ಕಾರ ಮತ್ತು ಮೇಘಾಲಯದ ಜನರ ಹಿತದೃಷ್ಟಿಯಿಂದ ಮಾಡಲಾಗುತ್ತದೆ. ಅವರು ಹೆಚ್ಚು ಸುರಕ್ಷಿತವಾಗಿರುತ್ತಾರೆ ಎಂದರು.
ಕೇಂದ್ರ, ರಾಜ್ಯ ಮತ್ತು ಜಿಲ್ಲಾ ಮಂಡಳಿಗಳ ನೌಕರರನ್ನು ಕಾಯಿದೆಯ ವ್ಯಾಪ್ತಿಯಿಂದ ಮುಕ್ತಗೊಳಿಸಲಾಗಿದೆ ಎಂದರು.

ಮೇಘಾಲಯ ನಿವಾಸಿಗಳು, ಸುರಕ್ಷತೆ ಮತ್ತು ಭದ್ರತಾ ಕಾಯ್ದೆ, 2016 (ಎಂಆರ್‌ಎಸ್‌ಎಸ್‌ಎ) ಯನ್ನು ಆಗಿನ ಕಾಂಗ್ರೆಸ್ ನೇತೃತ್ವದ ಎಂಯುಎ- II ಸರ್ಕಾರವು ಅಕ್ರಮ ವಲಸೆಯನ್ನು ಪರಿಶೀಲಿಸುವ ಸಮಗ್ರ ಕಾರ್ಯವಿಧಾನಗಳ ಭಾಗವಾಗಿ ಅಂಗೀಕರಿಸಿತು.

ಆಯಾ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಕಾರ್ಯಪಡೆಗಳು ಹೆಚ್ಚು ಕಾರ್ಯಪ್ರವೃತ್ತರಾಗಬೇಕಾಗುತ್ತದೆ.ಮಾಹಿತಿಯನ್ನು ನೀಡಲು ನಿರಾಕರಿಸಿದರೆ ಅಥವಾ ಸುಳ್ಳು ದಾಖಲೆಗಳನ್ನು ನೀಡಲು ಉದ್ದೇಶಪೂರ್ವಕವಾಗಿ ಸೃಷ್ಟಿ ಮಾಡಿದರೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಹೇಳಿದರು.

ಏತನ್ಮಧ್ಯೆ, ಅರಣ್ಯ ಮತ್ತು ಪರಿಸರ ಇಲಾಖೆ ಪ್ರಸ್ತಾಪಿಸಿರುವ ಮೇಘಾಲಯ ಇದ್ದಿಲು (ಉತ್ಪಾದನೆ, ಸಂಗ್ರಹಣೆ, ವ್ಯಾಪಾರ ಮತ್ತು ಸಾಗಣೆ ನಿಯಂತ್ರಣ) ತಿದ್ದುಪಡಿ ನಿಯಮಗಳು 2019 ಕ್ಕೆ ಸಂಪುಟ ಅನುಮೋದನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+