ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಕಾರಣಿಗಳೇ, ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿ!

|
Google Oneindia Kannada News

ಅಲಹಬಾದ್, ಆಗಸ್ಟ್ 19 : ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಕಂಡು ಕೆಂಡಾಮಂಡಲವಾಗಿರುವ ಅಲಹಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಸರ್ಕಾರಿ ನೌಕರರು, ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಕಳಿಸಿ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದೆ.

ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿದರೆ ಮಾತ್ರ ಜನಪ್ರತಿನಿಧಿಗಳಿಗೆ ಪರಿಸ್ಥಿತಿಯ ಅರಿವಾಗುತ್ತದೆ. ಇಲ್ಲವಾದಲ್ಲಿ ಬದಲಾವಣೆ ಸಾಧ್ಯವೇ ಇಲ್ಲ ಎಂದು ಹೇಳಿದೆ. ಆಗ ಮಾತ್ರ ಉತ್ತರ ಪ್ರದೇಶದಲ್ಲಿನ ಶಾಲೆಗಳ ಸ್ಥಿತಿ-ಗತಿಯಲ್ಲಿ ಏನಾದರೂ ಬದಲಾವಣೆ ಆಗಬಹುದು ಎಂದು ಹೇಳಿದೆ.

school

ಸಾವರ್ನಜನಿಕ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ಅಲಹಬಾದ ಹೈಕೋರ್ಟ್ ನ ಸುಧೀರ ಅಗರವಾಲ ಅವರು ತಮ್ಮ ತೀರ್ಪಿನಲ್ಲಿ ಉತ್ತರ ಪ್ರದೇಶದ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಸ್ಥಿತಿ ಸುಧುರಾಣೆಗೆ ಆರು ತಿಂಗಳ ಕಾಲಾವಧಿ ನೀಡುತ್ತೇವೆ ಎಂದು ಕಟ್ಟು ನಿಟ್ಟಾಗಿ ಹೇಳಿದೆ.

ಉತ್ತರ ಪ್ರದೇಶದ ಶೇ. 90 ಶಾಲೆಗಳ ಪರಿಸ್ಥಿತಿ ಹೀಗೆ ಇದೆ. ಇಲ್ಲಿ ಯಾವ ಮಟ್ಟದ ಶಿಕ್ಷಣ ಸಿಗುತ್ತಿದೆ ಎಂಬುದನ್ನು ಊಹಿಸಲು ಅಸಾಧ್ಯ. ಆರು ತಿಂಗಳಲ್ಲಿ ಯಾವ ಸುಧಾರಣಾ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ವರದಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಲ್ಲಿಕೆ ಮಾಡಬೇಕು. ಯಾವುದೇ ಪ್ರಗತಿ ಕಂಡುಬರದಿದ್ದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದೆ.

English summary
The Allahabad high court on Tuesday took a serious note of the pathetic condition of primary schools in Uttar Pradesh. The court directed the chief secretary to ensure that children/wards of government officials/servants, those serving in the local bodies, representatives of people and judiciary send their wards to these schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X