ಕಳ್ಳತನದ ಆರೋಪ: ಮಧ್ಯಪ್ರದೇಶದ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಪೈಪ್‌ಗಳಿಂದ ಥಳಿತ!

ಭೋಪಾಲ್ ಜುಲೈ 9: ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಪುರುಷರ ಗುಂಪೊಂದು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಳ್ಳತನದ ಆರೋಪ ಹೊರಿಸಿ ಕೆಲವರು ವ್ಯಕ್ತಿಯೊಬ್ಬನನ್ನು ಥಳಿಸುತ್ತಿರುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ. ಮಧ್ಯಪ್ರದೇಶದ ಸಾಗರ್ ನಗರದಲ್ಲಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ ಬೆತ್ತಲೆ ವ್ಯಕ್ತಿಯೊಬ್ಬ ಗೋಡೆಗೆ ಒರಗಿಕೊಂಡು ಕುಳಿತಿರುವುದು ಮತ್ತು ಅವನ ಬಟ್ಟೆಗಳು ಅವನ ಪಕ್ಕದಲ್ಲಿ ಬಿದ್ದಿರುವುದು ಕಂಡುಬಂದಿದೆ. ಆ ವ್ಯಕ್ತಿಯನ್ನು ಕಳ್ಳತನದ ಆರೋಪ ಹೊರಿಸಿ ಪೈಪ್ ತುಂಡುಗಳಿಂದ ಥಳಿಸುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ಅವರು ಪದೇ ಪದೇ ಪೈಪ್‌ಗಳಿಂದ ಕೈಗೆ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

Madhya Pradesh

ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ತನ್ನ ಮೊಣಕೈಯಿಂದ ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಮೋತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಧರಮ್ ಕಾಂತಾ ಪ್ರದೇಶದಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಎಸ್ಪಿ ವಿಕ್ರಮ್ ಸಿಂಗ್ ಕುಶ್ವಾಹಾ, ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗಿದೆ ಮತ್ತು ವೀಡಿಯೊಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ, ಎಲ್ಲಿ ಘಟನೆ ನಡೆದಿದೆ ಮತ್ತು ವಿಡಿಯೋದಲ್ಲಿ ಕಾಣುತ್ತಿರುವ ಆರೋಪಿಗಳು ಯಾರು ಎಂಬುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಕೆಲವು ಹುಡುಗಿಯರಿಗೆ ಕಿರುಕುಳ ನೀಡಿ ಚಿತ್ರೀಕರಿಸಿದ್ದಾರೆ ಎಂಬ ಶಂಕೆಯ ಮೇಲೆ ಜೂನ್ 30 ರಂದು ಇಬ್ಬರು ದಲಿತ ಪುರುಷರನ್ನು ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಥಳಿಸಿದ್ದಾರೆ.

ಇಂದೋರ್‌ನ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರು ಬುಡಕಟ್ಟು ಜನರನ್ನು ಕನಿಷ್ಠ ಎಂಟು ಗಂಟೆಗಳ ಕಾಲ ಸೆರೆಯಲ್ಲಿಟ್ಟು ರಸ್ತೆಯಲ್ಲಿ ಜಗಳವಾಡಿದ ನಂತರ ಥಳಿಸಿದ ಮೂವರನ್ನು ಬಂಧಿಸಿದ್ದರು.

ಕೆಲವೇ ದಿನಗಳ ಹಿಂದೆ, ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಕಾರ್ಮಿಕರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದು ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿ ಪ್ರವೇಶ್ ಶುಕ್ಲಾ ಅವರನ್ನು ಬಂಧಿಸಿ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಧ್ಯಪ್ರದೇಶ ಸರ್ಕಾರವು ಆರೋಪಿಯ ವಿರುದ್ಧ ಬುಲ್ಡೋಜರ್ ಕ್ರಮವನ್ನು ತೆಗೆದುಕೊಂಡಿತು ಮತ್ತು ಆರೋಪಿಯ ಕುಟುಂಬದ ಮನೆಯನ್ನು ಕೆಡವಲಾಯಿತು.

ಬುಡಕಟ್ಟು ಸಮುದಾಯಕ್ಕೆ ಸೇರಿದ ದಶ್ಮತ್ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಪ್ರವೇಶ್ ಶುಕ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಐಪಿಸಿ ಮತ್ತು ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಶುಕ್ಲಾ ವಿರುದ್ಧ ಕೇಸ್ ದಾಖಲಿಸಲಾಗಿದೆ ಮತ್ತು ಪ್ರಸ್ತುತ ಜೈಲಿನಲ್ಲಿರುವ ಆರೋಪಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲಾಗಿದೆ. ಸಿಧಿಯಲ್ಲಿ ಶುಕ್ಲಾ ಅವರಿಗೆ ಸೇರಿದ ಮನೆಯ ಅಕ್ರಮ ಭಾಗವನ್ನು ಧ್ವಂಸಗೊಳಿಸಲಾಗಿದೆ. ಆದರೆ ಸರ್ಕಾರದ ಈ ಕ್ರಮವನ್ನು ಮಧ್ಯ ಪ್ರದೇಶದ ಬ್ರಾಹ್ಮಣ ಸಮುದಾಯ ವಿರೋಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+