• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವೈರಸ್, ಉಗ್ರರ ಭೀತಿ ನಡುವೆ ಜುಲೈ 21 ರಿಂದ ಅಮರನಾಥ್ ಚಲೋ!

|

ನವದೆಹಲಿ, ಜೂನ್ 5: ಕೊರೊನಾವೈರಸ್ ಸೋಂಕು ಭೀತಿ ಹಿನ್ನಲೆಯಲ್ಲಿ ರದ್ದುಗೊಂಡಿದ್ದ ಈ ವರ್ಷದ ಅಮರನಾಥ ಯಾತ್ರೆ ಮತ್ತೆ ಆರಂಭವಾಗುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಅಮರನಾಥ ಹಿಮಲಿಂಗಕ್ಕೆ ಪ್ರಥಮ ಪೂಜೆ ಸಲ್ಲಿಸಲಾಗಿದೆ. ಜುಲೈ 21 ರಿಂದ ಬಹುತೇಕ ಮತ್ತೆ ಯಾತ್ರೆ ಕೈಗೊಳ್ಳಬಹುದು ಎಂದು ಅಮರನಾಥ ದೇವಸ್ಥಾನ ಮಂಡಳಿಯ ಸಿಇಒ ಬುಲ್ ಪಾಠಕ್ ಹೇಳಿದ್ದಾರೆ.

   ಪ್ರತಿನಿತ್ಯ ಸೈಕಲ್ ತುಳಿಯೋದ್ರಿಂದ ಪರಿಸರ ಹಾಗೂ ಆರೋಗ್ಯಕ್ಕೂ ಪ್ರಯೋಜನ | Oneindia Kannada

   2020ನೇ ಸಾಲಿನಲ್ಲಿ ಜೂನ್ 23 ರಿಂದ ಆಗಸ್ಟ್ 3ರ ತನಕ ನಡೆಯಬೇಕಿದ್ದ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು. ಲೆಫ್ಟಿನೆಂಟ್ ಗೌರ್ನರ್ ಜಿ. ಸಿ. ಮುರ್ಮು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಾತ್ರೆ ಸ್ಥಗಿತಗೊಳಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಈಗ ಹಿಮಲಿಂಗದ ರಕ್ಷಣೆ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್​ಜಿಟಿ) ನೀಡಿರುವ ಆದೇಶಗಳ ಅನುಸಾರ ಅಮರನಾಥ ದೇವಸ್ಥಾನ ಮಂಡಳಿಯ ಸದಸ್ಯರು ಸಭೆ ನಡೆಸಿ, ಯಾತ್ರಾ ದಿನಾಂಕ ನಿರ್ಧರಿಸಿದ್ದಾರೆ.

   ಹಲವು ಯಾತ್ರಿಗಳ ಪ್ರಾಣ ಉಳಿಸಿದ ಬಸ್ ಚಾಲಕ ಸಲೀಂ

   42 ದಿನಗಳ ಯಾತ್ರೆಯನ್ನು ಕೇವಲ 14 ದಿನಗಳಿಗೆ ಮೊಟಕುಗೊಳಿಸಲಾಗಿದೆ. ಸದ್ಯ ಅಮರನಾಥ ಯಾತ್ರೆ ರದ್ದುಗೊಂಡಿದ್ದರೂ ಪ್ರಥಮ ಪೂಜೆ ಮತ್ತು ಸಂಪನ್ನ ಪೂಜೆಯನ್ನು ಸಂಪ್ರದಾಯದ ಪ್ರಕಾರವಾಗಿಯೇ ನಡೆಸಲಾಗುತ್ತಿದೆ. ಜುಲೈ 21ರಿಂದ ಆರಂಭವಾಗಲಿರುವ ಯಾತ್ರೆಯು 42 ದಿನಗಳ ಬದಲಿಗೆ 12 ದಿನಗಳು ಮಾತ್ರ ಇರಲಿವೆ ಎಂದು ಅಮರನಾಥ ಯಾತ್ರೆಯ ಮಂಡಳಿ ಸ್ಪಷ್ಟಪಡಿಸಿದೆ.

   ಜುಲೈ 21 ರಿಂದ ಅಗಸ್ಟ್ 3ರವರೆಗೆ ಯಾತ್ರೆ

   ಜುಲೈ 21 ರಿಂದ ಅಗಸ್ಟ್ 3ರವರೆಗೆ ಯಾತ್ರೆ

   ಹೀಗಾಗಿ, ಈ ಬಾರಿ ಜುಲೈ 21 ರಿಂದ ಶುರುವಾಗುವ ಯಾತ್ರೆ ಅಗಸ್ಟ್ 3ರವರೆಗೆ ಅನಂತ್ ನಾಗ್ ಜಿಲ್ಲೆಯ ಪಹಲ್ ಗಾಮ್ ನಿಂದ ಹಾಗೂ ಗಂದರ್ಬಾಲ್ ಜಿಲ್ಲೆಯ ಬಾಲ್ಟಲ್ ಎರಡು ಮಾರ್ಗಗಳಿಂದ ಮಾತ್ರ ತೆರಳಲು ಅನುಮತಿ ನೀಡಲಾಗಿದೆ. ದಕ್ಷಿಣ ಕಾಶ್ಮೀರದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಬರುವ ಸಮುದ್ರ ಮಟ್ಟದಿಂದ 3,880 ಮೀಟರ್ ಎತ್ತರದ ಅಮರನಾಥ ಗುಹಾಂತರ ದೇವಾಲಯಕ್ಕೆ ಈ ಭಕ್ತರು ಭೇಟಿ ನೀಡಬಹುದಾಗಿದೆ. ಯಾತ್ರೆ ತೆರಳಲಿರುವ ಜಮ್ಮು-ಪಹಲ್ಗಾಮ್ ಮಾರ್ಗ ಮತ್ತು ಜಮ್ಮು-ಬಲ್ತಾಲ್ ರಸ್ತೆಯ ದಾರಿಯುದ್ಧಕ್ಕೂ 40,000 ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಸಿಆರ್ ಪಿಎಫ್ ಮತ್ತು ರಾಜ್ಯ ಪೊಲೀಸರನ್ನು ಪಹರೆ ನಿಲ್ಲಿಸಲಾಗುತ್ತದೆ.

   ಅಮರನಾಥ ಯಾತ್ರೆ ನೋಂದಣಿ

   ಅಮರನಾಥ ಯಾತ್ರೆ ನೋಂದಣಿ

   ಅಮರನಾಥ ಯಾತ್ರೆ ನೋಂದಣಿ ಮಾರ್ಚ್​ನಲ್ಲಿ ಆರಂಭವಾಗುತ್ತದೆ. ಆದರೆ, ಕೊರೊನಾ ಭೀತಿಯಿಂದ ವಿಳಂಬವಾಗಿದೆ. ಪೂರ್ಣ ವೇಳಾಪಟ್ಟಿಯನ್ನು ಮಂಡಳಿ, ಪ್ರಕಟಿಸಬೇಕಾಗಿದೆ. ಒಟ್ಟಾರೆ, ಯಾತ್ರೆ ವ್ಯವಸ್ಥೆ ಕುರಿತು ದೇವಸ್ಥಾನ ಮಂಡಳಿಯ ನಿಯಂತ್ರಣ ಕೊಠಡಿ/ ಸಹಾಯವಾಣಿ ಸಂಖ್ಯೆ 0194-2501679 ಅಥವಾ 09469722210 ಕರೆ ಮಾಡಬಹುದು. ಶ್ರೀನಗರದ ವಿಮಾನ ನಿಲ್ದಾಣದಲ್ಲಿ ನೋಂದಣಿ ಕಚೇರಿ ಆರಂಭಿಸಲಾಗಿದೆ.

   ಯಾತ್ರೆಗೆ ಹೊರಡುವ ಮುನ್ನ ಸಂಪೂರ್ಣ ವೈದ್ಯಕೀಯ ಪರೀಕ್ಷೆ ಪ್ರಮಾಣ ಪತ್ರ ಪಡೆದಿರಬೇಕು. 13 ವರ್ಷವಯಸ್ಸಿಗಿಂತ ಚಿಕ್ಕವರು, 75 ವರ್ಷಕ್ಕೂ ಅಧಿಕ ವಯಸ್ಸಿನ ಹಿರಿಯರು, 6 ತಿಂಗಳ ಗರ್ಭಿಣಿಯರಿಗೆ ನೋಂದಣಿ ನಿರ್ಬಂಧಿಸಲಾಗಿದೆ ಎಂದು ಅಮರನಾಥ್ ಯಾತ್ರೆ ಮಂಡಳಿ ಪ್ರಕಟಿಸಿದೆ.

   3 ಹಂತಗಳ ಭದ್ರತೆ ಒದಗಿಸಲಾಗುತ್ತದೆ

   3 ಹಂತಗಳ ಭದ್ರತೆ ಒದಗಿಸಲಾಗುತ್ತದೆ

   ಯಾತ್ರಿಕರ ಸುರಕ್ಷತೆಗಾಗಿ ಸೇನೆ, ಅರೆ ಸೇನಾಪಡೆ ಮತ್ತು ರಾಜ್ಯ ಪೊಲೀಸ್ ಪಡೆಗಳಿಂದ ಮೂರು ಹಂತಗಳ ಭದ್ರತೆ ಒದಗಿಸಲಾಗುತ್ತದೆ. ಮಾತ್ರವಲ್ಲದೆ ರಾಜ್ಯ ಮತ್ತು ಕೇಂದ್ರ ವಿಪತ್ತು ನಿರ್ವಹಣಾ ತಂಡಗಳನ್ನೂ ನಿಯೋಜಿಸಲಾಗುತ್ತದೆ. ಸುಮಾರು ಎರಡು ತಿಂಗಳ ಕಾಲ ನಡೆಯುತ್ತಿದ್ದ ಯಾತ್ರೆ ಈ ಬಾರಿ 14 ದಿನಗಳಿಗೆ ಸೀಮಿತವಾಗಿದ್ದರೂ ಸಾವಿರಾರು ಜನ ಭಕ್ತರು ಪಾಲ್ಗೊಂಡು ಹಿಮಲಿಂಗದ ದರ್ಶನ ಪಡೆದು ಪುನೀತರಾಗುತ್ತಾರೆ.

   ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಸಿಆರ್ ಪಿಎಫ್ ನೋಂದಣಿ ಕೇಂದ್ರವನ್ನು ತೆರೆದಿದ್ದು, ಅಲ್ಲೇ ಯಾತ್ರಿಗಳ ನೋಂದಣಿ ಮಾಡಿಕೊಂಡು, ಅವರ ವಾಹನಗಳಿಗೆ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ ಟ್ಯಾಗ್ ಗಳನ್ನು ಜೋಡಿಸಲಾಗುತ್ತದೆ.

   ಪ್ರತಿ ವಾಹನಕ್ಕೂ ಐಡಿ ಟ್ಯಾಗ್ ಅಳವಡಿಕೆ

   ಪ್ರತಿ ವಾಹನಕ್ಕೂ ಐಡಿ ಟ್ಯಾಗ್ ಅಳವಡಿಕೆ

   ಯಾತ್ರಾರ್ಥಿಗಳನ್ನು ಹೊತ್ತೊಯ್ಯುವ ಪ್ರತಿ ವಾಹನಕ್ಕೂ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ ಟ್ಯಾಗ್ ಗಳನ್ನು ಜೋಡಿಸಲಾಗಿದ್ದು, ನಿಯಂತ್ರಣ ಕೊಠಡಿಯಿಂದ ಇವುಗಳ ಮೇಲೆ ನಿಗಾ ಇಡಲಾಗುತ್ತದೆ. ಜೊತೆಗೆ ಎಲ್ಲಾ ವಾಹನಗಳನ್ನೂ ಬುಲೆಟ್ ಪ್ರೂಫ್ ಬೆಂಗಾವಲ ವಾಹನಗಳ ಮಧ್ಯದಲ್ಲಿ ಕೊಂಡೊಯ್ಯಲಾಗುತ್ತದೆ.

   ಯಾತ್ರಿಕರಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಎಲೆಕ್ಟ್ರೋಮ್ಯಾಗ್ನೆಟಿಕ್ ಚಿಪ್ ಇರುವ ವಾಹನಗಳು, ಬೈಕ್ ಗಳು, ಬುಲೆಟ್ ಪ್ರೂಫ್ ಎಸ್ ಯುವಿ ಪೊಲೀಸ್ ಬೆಂಗಾವಲು ವಾಹನಗಳು, ಬುಲೆಟ್ ಪ್ರೂಫ್ ಬಂಕರ್ ಗಳನ್ನು ಸ್ಥಾಪಿಸಲಾಗಿದೆ.

   ಅಮರನಾಥ ಯಾತ್ರಿಕರಿಗೆ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದ ಜಿಯೋ

   English summary
   “It signifies the commencement of the annual pilgrimage to the cave shrine of Shri Amarnath. The yatra, however, shall begin on July 21 for a shorter duration of 14 days and it will end on August 3,” official sources told.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more