Amarnath Yatra 2024: ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಶ್ರೀನಗರ, ಜುಲೈ. 06: ಜೂನ್ 29 ರಂದು ಆರಂಭವಾಗಿರುವ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಭಾರೀ ಮಳೆಯ ಕಾರಣ ಶನಿವಾರ (ಜುಲೈ 6) ಗುಹಾ ದೇಗುಲಕ್ಕೆ ತೆರಳುವ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಭಕ್ತಾದಿಗಳಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದ್ದು, ನಂತರ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನ ಪಡೆದ ಭಕ್ತರ ಸಂಖ್ಯೆ 1.50 ಲಕ್ಷ ದಾಟಿದೆ. ಅಮರನಾಥ ಯಾತ್ರೆಯು ಜೂನ್ 29 ರಂದು ಪ್ರಾರಂಭವಾಗಿದೆ. ಅನಂತನಾಗ್‌ನ ಸಾಂಪ್ರದಾಯಿಕ 48 ಕಿಮೀ ನುನ್ವಾನ್ ಪಹಲ್ಗಾಮ್ ಮಾರ್ಗದಿಂದ ಮತ್ತು 14 ಕಿಮೀ ಚಿಕ್ಕದಾದ ಕಡಿದಾದ ಬಾಲ್ಟಾಲ್ ಮಾರ್ಗವಾದ ಗಂದರ್‌ಬಾಲ್‌ನಿಂದ ಯಾತ್ರೆ ಪ್ರಾರಂಭವಾಗಿದೆ. ಈ ಅಮರನಾಥ ಯಾತ್ರೆಯು ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ. ಕಳೆದ ವರ್ಷ ಗುಹಾ ದೇವಾಲಯದಲ್ಲಿ 4.5 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಾರ್ಥನೆ ಸಲ್ಲಿಸಿದರು.
ಅಮರನಾಥ ಯಾತ್ರೆಯ ಹವಾಮಾನ ಮುನ್ಸೂಚನೆ
ಹವಾಮಾನ ಇಲಾಖೆಯ ಪ್ರಕಾರ, ಶನಿವಾರ ಜೋರು ಮಳೆಯ ಸಾಧ್ಯತೆಯಿಲ್ಲ. ಆದರೂ ಕೂಡ ಅಮರನಾಥ ಪವಿತ್ರ ಗುಹೆಗೆ ಕೆಲವು ಸ್ಥಳಗಳಲ್ಲಿ ಮಳೆಯು ಸುರಿಯಬಹುದು. ಜಮ್ಮು ಬಯಲು ಪ್ರದೇಶಗಳಲ್ಲಿ, ರಾತ್ರಿ ಅಥವಾ ಮುಂಜಾನೆ ಮಾನ್ಸೂನ್ ಮಳೆಯು ಮುಂದುವರಿಯುತ್ತದೆ. ಜಮ್ಮು ಮತ್ತು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುಗಳು ಮತ್ತು ಭೂಕುಸಿತಗಳು ಉಂಟಾಗುವ ಅಪಾಯವಿದೆ.

ಅಮರನಾಥ ಪವಿತ್ರ ಗುಹೆ ಮತ್ತು ಶೇಷನಾಗ್‌ನಲ್ಲಿ ತಾಪಮಾನವು ಸುಮಾರು 15 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಆದರೆ ರಾತ್ರಿಯಲ್ಲಿ, ಈ ತಾಪಮಾನವು 5 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ಚಂದನ್ವಾರಿ ಮತ್ತು ಬಾಲ್ಟಾಲ್‌ನಲ್ಲಿ ತಾಪಮಾನವು ಸುಮಾರು 24-25 ° C ಆಗಬಹುದು, ಆದರೆ ರಾತ್ರಿಯ ತಾಪಮಾನವು 12 ° C ಆಗಿರಬಹುದು. ಮುಂದಿನ 4 ದಿನಗಳಲ್ಲಿ ಯಾವುದೇ ಪ್ರಮುಖ ಮಳೆಯಾಗುವ ನಿರೀಕ್ಷೆಯಿಲ್ಲ. ಅಲ್ಪಾವಧಿಯ ಗುಡುಗು ಸಹಿತ ಮಳೆಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ" ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications