Amethi Election Results 2024: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನಡೆ, ಕ್ಷೇತ್ರ ವಾಪಸ್ ಪಡೆಯುತ್ತಾ ಕಾಂಗ್ರೆಸ್..?
ಲಕ್ನೋ, ಜೂನ್. 04: 2019 ಕ್ಕೆ ಹೋಲಿಸಿದರೆ 2024 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರ ಭಾರಿ ಕುತೂಹಲ ಕೆರಳಿಸಿದೆ. ಕಳೆದ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದ ಸ್ಮೃತಿ ಇರಾನಿ ಮತ್ತೆ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್‌ನಿಂದ ಕಿಶೋರಿ ಲಾಲ್ ಶರ್ಮಾ ಕಣಕ್ಕಿಳಿದ್ದಿದ್ದಾರೆ. ಆರಂಭಿಕ ಓಟದಲ್ಲಿ ಸ್ಮೃತಿ ಇರಾನಿ ಹಿನ್ನಡೆ ಅನುಭವಿಸಿದ್ದಾರೆ. ಹೀಗಾಗಿ ಕ್ಷೇತ್ರ ವಾಪಸ್ ಪಡೆಯುತ್ತಾ ಕಾಂಗ್ರೆಸ್ ಎನ್ನುವ ಪ್ರಶ್ನೆ ಹೆಚ್ಚಾಗಿದೆ.
2019 ರಲ್ಲಿ ಸ್ಮೃತಿ ಇರಾನಿಯವರ ಗಮನಾರ್ಹ ಗೆಲುವು
ಅಮೇಥಿ ಲೋಕಸಭಾ ಕ್ಷೇತ್ರವು ಐತಿಹಾಸಿಕವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. 2019 ರಲ್ಲಿ, ಇರಾನಿ ಅಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು 50,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಗಮನಾರ್ಹ ಗೆಲುವು ಸಾಧಿಸಿದರು. ಈ ಬಾರಿ ಕಾಂಗ್ರೆಸ್‌ನಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಲಾಗಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ 2024, ಜೂನ್ 1 ರಂದು ಮತದಾನ ಮುಗಿದ ನಂತರ ಅಮೇಥಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ನಡುವೆ ನೆಕ್ ಟು ನೆಕ್ ಫೈಟ್ ಇರುವುದನ್ನು ಸೂಚಿಸಿದೆ. ಬಿಜೆಪಿ ತನ್ನ ಅಭ್ಯರ್ಥಿ ಸ್ಮೃತಿ ಇರಾನಿ ಗೆಲುವು ಸಾಧಿಸುವ ಮೂಲಕ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಸೂಚಿಸಿದೆ.
ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಅಮೇಥಿಯಲ್ಲಿ 2024 ರಲ್ಲಿ 54.08% ರಷ್ಟು ಮತದಾನವಾಗಿದೆ. ಇಷ್ಟು ವರ್ಷಗಳಲ್ಲಿ, ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಹಲವಾರು ಸದಸ್ಯರು ಸಂಸತ್ತಿನ ಕೆಳಮನೆಯಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.












Click it and Unblock the Notifications