ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಹೆಚ್ಚಿಸುವ ಆತಂಕ ಸೃಷ್ಟಿಸಿದ ಕುಂಭಮೇಳ!

|
Google Oneindia Kannada News

ನವದೆಹಲಿ, ಏಪ್ರಿಲ್ 12: ಕೊರೊನಾವೈರಸ್ ಎರಡನೇ ಅಲೆ ನಡುವೆ ಉತ್ತರಾಖಂಡ್ ಕುಂಭಮೇಳದಲ್ಲಿ ಸಾವಿರಾರು ಭಕ್ತಾದಿಗಳು ನೆರೆದಿದ್ದಾರೆ. ಸೋಮವಾರ ಹರಿದ್ವಾರದ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ಈ ವೇಳೆ ಕೊವಿಡ್-19 ಶಿಷ್ಟಾಚಾರದ ಉಲ್ಲಂಘನೆ ಸ್ಪಷ್ಟವಾಗಿದ್ದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.

ವಿಶ್ವದ ಪ್ರಸಿದ್ಧ ಧಾರ್ಮಿಕ ಆಚರಣೆಗಳಲ್ಲಿ ಕುಂಭಮೇಳ ಕೂಡಾ ಒಂದಾಗಿದೆ. ಲಕ್ಷಾಂತರ ಭಕ್ತಾದಿಗಳು ಸೇರುವ ಈ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ದೊಡ್ಡ ಸವಾಲಾಗಿದೆ. ಹರ್ ಕೀ ಪೌರ್ ಘಾಟ್ ಬಳಿ ಸಾವಿರಾರು ಭಕ್ತಾಧಿಗಳು ಶಾಹಿ ಸ್ನಾನ್(ಪುಣ್ಯ ಸ್ನಾನ) ಸಂದರ್ಭದಲ್ಲಿ ಕೊರೊನಾವೈರಸ್ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಕೊರೊನಾವೈರಸ್ ಹರಡುವಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕುಂಭಮೇಳಕ್ಕೆ ಆಗಮಿಸುವ ಭಕ್ತಾಧಿಗಳು ಮತ್ತು ಪ್ರವಾಸಿಗರು 72 ಗಂಟೆಗಳಿಗೂ ಮೊದಲು ಕೊವಿಡ್-19 ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಉತ್ತರಾಖಂಡ್ ಹೈಕೋರ್ಟ್ ಮೊದಲೇ ಆದೇಶ ನೀಡಿದೆ.

Amid Coronavirus Rise, Social Distancing Rules Violation At Haridwar Kumbh Mela

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸವಾಲು

ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿರಂತರವಾಗಿ ಭಕ್ತಾಧಿಗಳಲ್ಲಿ ಮನವಿ ಮಾಡಿಕೊಳ್ಳಲಾಗುತ್ತಿದೆ. ಹೀಗಿದ್ದರೂ ಕುಂಭ ಮೇಳದ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಿದ್ದು, ಸಾಮಾಜಿಕ ಅಂತರ ಕಾಪಾಡುವುದು ವಾಸ್ತವದಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಐಜಿ ಸಂಜಯ್ ಗುಂಜ್ಯಾಲ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇದೆಂಥಾ ದುಸ್ಥಿತಿ; ಕೊರೊನಾ ರೋಗಿಗಳಿಗೆ ಕುರ್ಚಿಯಲ್ಲೇ ಚಿಕಿತ್ಸೆ! ಮಹಾರಾಷ್ಟ್ರದಲ್ಲಿ ಇದೆಂಥಾ ದುಸ್ಥಿತಿ; ಕೊರೊನಾ ರೋಗಿಗಳಿಗೆ ಕುರ್ಚಿಯಲ್ಲೇ ಚಿಕಿತ್ಸೆ!

12 ವರ್ಷಗಳಿಗೆ ಒಂದು ಬಾರಿ ನಡೆಯುವ ಕುಂಭಮೇಳವು ಸಾಮಾನ್ಯವಾಗಿ 4 ತಿಂಗಳವರೆಗೂ ನಡೆಯುತ್ತದೆ. ಆದರೆ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಏಪ್ರಿಲ್ 1 ರಿಂದ 30ರವರೆಗೂ ಮಾತ್ರ ಕುಂಭಮೇಳ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ.

ಏನಿದು ಕುಂಭ ಮೇಳದ ಆಚರಣೆ?

ಹರಿದ್ವಾರ, ನಾಸಿಕ್, ಪ್ರಯಾಗ್ ರಾಜ್ ಮತ್ತು ಉಜ್ಜೈನಿ ಕ್ಷೇತ್ರಗಳಲ್ಲಿ ಪ್ರತಿ 12 ವರ್ಷಗಳಿಗೆ ಒಮ್ಮೆ ಈ ಕುಂಭ ಮೇಳವನ್ನು ಆಚರಿಸಲಾಗುತ್ತದೆ. 2021ನೇ ಸಾಲಿನಲ್ಲಿ ನಡೆಯುತ್ತಿರುವ ಕುಂಭ ಮೇಳವು 12 ವರ್ಷದ ಬದಲಿಗೆ 11ನೇ ವರ್ಷಕ್ಕೆ ನಡೆಯುತ್ತಿದೆ. ಈ ಕುಂಭದ ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಗುರು ಈ ಚಕ್ರವನ್ನು 11 ವರ್ಷಗಳಲ್ಲಿ ಪೂರ್ಣಗೊಳಿಸುತ್ತಾನೆ. 2021ರಲ್ಲಿ ಅಕ್ವೇರಿಯಸ್ ಚಿಹ್ನೆಯನ್ನು ಪ್ರವೇಶಿಸುತ್ತಾನೆ. 2022 ರಲ್ಲಿ ಸೂರ್ಯನು ಮೇಷ ರಾಶಿಯನ್ನು ಪ್ರವೇಶಿಸುವ ಹೊತ್ತಿಗೆ, ಗುರುವು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಗುರುವು ಅಕ್ವೇರಿಯಸ್ ಮತ್ತು 2021ರಲ್ಲಿ ಮೇಷ ರಾಶಿಯಲ್ಲಿ ಇರುತ್ತಾನೆ. ಆದ್ದರಿಂದ, 2021ರಲ್ಲಿ ಕುಂಭಮೇಳವನ್ನು ಆಯೋಜಿಸಲಾಗುವುದು ಎಂದು ಅಧಿಕೃತ ವೆಬ್‌ಸೈಟ್ ತಿಳಿಸಿದೆ.

English summary
Amid Coronavirus Rise, Social Distancing Rules Violation At Haridwar Kumbh Mela.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X