• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಹಿಸುದ್ದಿ: ದಸರಾ, ದೀಪಾವಳಿ ನಡುವೆಯೂ ತಗ್ಗಿದ ಕೊರೊನಾವೈರಸ್!

|

ನವದೆಹಲಿ, ಡಿಸೆಂಬರ್.02: ಭಾರತದಲ್ಲಿ ಕೊರೊನಾವೈರಸ್ ಕಾಟ ಕಡಿಮೆಯಾದಂತೆ ಕಾಣುತ್ತಿದೆ. ಕಳೆದ ಸಪ್ಟೆಂಬರ್ ತಿಂಗಳಿನಿಂದ ನಿರಂತರವಾಗಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಸತತ 25ನೇ ದಿನವೂ 50 ಸಾವಿರಕ್ಕಿಂತ ಕಡಿಮೆ ಕೊವಿಡ್-19 ಪ್ರಕರಣ ಪತ್ತೆಯಾಗಿವೆ.

ಭಾರತದಲ್ಲಿ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆಚರಣೆಗಳು ಬಂದಿದ್ದವು. ಸಮುದಾಯದ ಮಾರುಕಟ್ಟೆಗಳಲ್ಲಿ ಸಾರ್ವಜನಿಕರ ಓಡಾಟದ ಸಂಖ್ಯೆಯು ಎಂದಿಗಿಂತ ಹೆಚ್ಚಾಗಿದೆ. ಇದರ ನಡುವೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.

2020ರೊಳಗೆ ಯುರೋಪಿನಲ್ಲಿ ಕೊರೊನಾವೈರಸ್ ಲಸಿಕೆ ಬಿಡುಗಡೆ?

ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳಿಗೆ ಹೋಲಿಕೆ ಮಾಡಿದರೆ ಗುಣಮುಖ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಲ್ಲಿ ಒಟ್ಟು 94,99,414 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 5 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವೇ ಮಾಹಿತಿ ನೀಡಿದೆ.

ಕೊರೊನಾವೈರಸ್ ಪರೀಕ್ಷೆಯ ವೇಗದಲ್ಲಿ ಏರಿಕೆ

ಕೊರೊನಾವೈರಸ್ ಪರೀಕ್ಷೆಯ ವೇಗದಲ್ಲಿ ಏರಿಕೆ

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10,96,651 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 14,24,45,949 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

40 ಸಾವಿರದ ಆಸುಪಾಸಿನಲ್ಲೇ ಕೊರೊನಾವೈರಸ್ ಸಂಖ್ಯೆ

40 ಸಾವಿರದ ಆಸುಪಾಸಿನಲ್ಲೇ ಕೊರೊನಾವೈರಸ್ ಸಂಖ್ಯೆ

ಸಪ್ಟೆಂಬರ್ ತಿಂಗಳಿನಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ಇಡೀ ದೇಶವೇ ಬೆಚ್ಚಿ ಬೀಳುವಂತಾಗಿತ್ತು. ಅಲ್ಲಿಂದ ವಾರದಿಂದ ವಾರಕ್ಕೆ ಕೊವಿಡ್-19 ಪ್ರಕರಣಗಳ ಸಂಖ್ಯೆಯು ಇಳಿಮುಖವಾಗುತ್ತಾ ಸಾಗಿದೆ. ಸತತ 25 ದಿನ ದೇಶದಲ್ಲಿ 50 ಸಾವಿರಕ್ಕಿಂತ ಕಡಿಮೆ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 36604 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಸಾವಿನ ಸಂಖ್ಯೆಯಲ್ಲೂ ಗಣನೀಯ ಇಳಿಕೆ

ದೇಶದಲ್ಲಿ ಸಾವಿನ ಸಂಖ್ಯೆಯಲ್ಲೂ ಗಣನೀಯ ಇಳಿಕೆ

ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಒಂದು ಸಾವಿರದಿಂದ 800ಕ್ಕೆ ಇಳಿದ ಸಾವಿನ ಸಂಖ್ಯೆಯು ಇದೀಗ 500ಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 501 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,381,22ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 43,062 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 89,32,647 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 4,28,644 ಸಕ್ರಿಯ ಪ್ರಕರಣಗಳಿವೆ.

ವಿಶ್ವದಲ್ಲಿ ಕೊರೊನಾವೈರಸ್ ಅಟ್ಟಹಾಸದ ಚಿತ್ರಣ

ವಿಶ್ವದಲ್ಲಿ ಕೊರೊನಾವೈರಸ್ ಅಟ್ಟಹಾಸದ ಚಿತ್ರಣ

ವಿಶ್ವದಲ್ಲಿ 6,41,94,674 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,86,829 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,44,41,249 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತವು ಇದರಲ್ಲೂ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

English summary
Amid Festival Season Of Last Month, COVID-19 Cases In India Stay Below 50,000 For 25th Straight Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X