ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಕಿಪಾಕ್ಸ್ ಪ್ರಕರಣ ಹೆಚ್ಚಳ: ಹೆಲ್ತ್ ಎಮರ್ಜೆನ್ಸಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

|
Google Oneindia Kannada News

ನವದೆಹಲಿ, ಜುಲೈ 23: ಕೋವಿಡ್-19 ನಂತರ ಜಗತ್ತಿಗೆ ತಲೆನೋವಾಗಿ ಪರಿಣಮಿಸಿರುವ ಮಂಕಿಪಾಕ್ಸ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿ (ಹೆಲ್ತ್‌ ಎಮರ್ಜೆನ್ಸಿ) ಎಂದು ಘೋಷಿಸಿದೆ.

ಜಾಗತಿಕವಾಗಿ ಮಂಕಿಪಾಕ್ಸ್ ವೇಗವಾಗಿ ಹರಡುತ್ತಿದ್ದು ವಿಶ್ವ ಆರೋಗ್ಯ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ. ಆರೋಗ್ಯ ಸಂಸ್ಥೆಯ ಎಚ್ಚರಿಕೆಯು ಮಂಕಿಪಾಕ್ಸ್ ವಿರುದ್ಧ ಹೋರಾಡಲು ಜಾಗತಿಕ ಸಹಕಾರಕ್ಕಾಗಿ ಕರೆ ನೀಡಿದೆ.

Breaking: ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆBreaking: ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಸೋಂಕನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ವರ್ಗೀಕರಿಸಬೇಕೆ ಎಂದು ತಜ್ಞರು ಗುರುವಾರ ಚರ್ಚೆ ನಡೆಸಿದ್ದರು.

Amid Monkeypox Cases Rise World Health Organization Declared Global Health Emergency

ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರಿಗೆ ತಜ್ಞರ ಸಮಿತಿ ಸಲಹೆ ನೀಡಿತ್ತು.

ದುಬೈನಿಂದ ಮಂಗಳೂರಿಗೆ ಬಂದ ಕೇರಳದ ಯುವಕನಿಗೆ ಮಂಕಿಪಾಕ್ಸ್: ಮಂಗಳೂರಲ್ಲಿ ಕಟ್ಟೆಚ್ಚರದುಬೈನಿಂದ ಮಂಗಳೂರಿಗೆ ಬಂದ ಕೇರಳದ ಯುವಕನಿಗೆ ಮಂಕಿಪಾಕ್ಸ್: ಮಂಗಳೂರಲ್ಲಿ ಕಟ್ಟೆಚ್ಚರ

ಮಂಕಿಪಾಕ್ಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ 5 ವಿಷಯಗಳನ್ನು ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ (WHO) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, " ಜಾಗತಿಕ ಮಂಕಿಪಾಕ್ಸ್ ಸೋಂಕು ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಪ್ರತಿನಿಧಿಸುತ್ತದೆ ಎಂದು ನಾನು ನಿರ್ಧರಿಸಿದ್ದೇನೆ" ಎಂದು ಹೇಳಿದರು.

ಜಗತ್ತಿನಾದ್ಯಂತ ಏಕಾಏಕಿ ವೇಗವಾಗಿ ಹರಡುತ್ತಿರುವ ಮಂಕಿಪಾಕ್ಸ್ ಸೋಂಕನ್ನು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದರ ಮೂಲಕ ತಡೆಗಟ್ಟಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

Amid Monkeypox Cases Rise World Health Organization Declared Global Health Emergency

ಈವರೆಗೆ, ವಿಶ್ವ ಆರೋಗ್ಯ ಸಂಸ್ಥೆಯ 60 ಸದಸ್ಯ ರಾಷ್ಟ್ರಗಳಿಂದ 16,000 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ಮತ್ತು ಐದು ಸಾವುಗಳು ವರದಿಯಾಗಿವೆ.

ಮಂಕಿಪಾಕ್ಸ್ ಅನ್ನು ಎದುರಿಸಲು ಪರಿಣಾಮಕಾರಿ ಮಾಹಿತಿ ಮತ್ತು ಸೇವೆಗಳನ್ನು ವಿನ್ಯಾಸಗೊಳಿಸಲು ಮತ್ತು ನೀಡಲು ಎಲ್ಲಾ ದೇಶಗಳು ನಿಕಟವಾಗಿ ಕೆಲಸ ಮಾಡುವುದು ಅತ್ಯಗತ್ಯವಾದ ಕಾರಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗುತ್ತಿದೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

ಮಂಕಿಪಾಕ್ಸ್‌ಗೆ ಪ್ರಸ್ತುತ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗಿಗಳು ಸಾಮಾನ್ಯವಾಗಿ ತಜ್ಞ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ ಆದ್ದರಿಂದ ಸೋಂಕು ಹರಡುವುದಿಲ್ಲ ಮತ್ತು ಸಾಮಾನ್ಯ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಬಹುದು.

English summary
World Health Organization ( WHO) experts declared the monkeypox outbreak as a global health emergency. The health body's alert calls for global cooperation against monkeypox.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X