8,000 ಕೋಟಿ ಮೌಲ್ಯದ 3 ವಿಪತ್ತು ನಿರ್ವಹಣಾ ಯೋಜನೆ ಘೋಷಿಸಿದ ಅಮಿತ್ ಶಾ
ನವದೆಹಲಿ, ಜೂನ್ 13: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ 8,000 ಕೋಟಿ ರೂ.ಗಳ ವಿಪತ್ತು ನಿರ್ವಹಣೆಗಾಗಿ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.
ಅಮಿತ್ ಶಾ ಅವರು ವಿಜ್ಞಾನ ಭವನದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಪತ್ತು ನಿರ್ವಹಣಾ ಇಲಾಖೆಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯಗಳಲ್ಲಿ ಅಗ್ನಿಶಾಮಕ ಸೇವೆಗಳನ್ನು ವಿಸ್ತರಿಸಲು ಮತ್ತು ಆಧುನೀಕರಿಸಲು ಒಟ್ಟು ರೂ 5,000 ಕೋಟಿ ಯೋಜನೆ, ನಗರ ಪ್ರವಾಹದ ಅಪಾಯವನ್ನು ಕಡಿಮೆ ಮಾಡಲು ಮುಂಬೈ, ಚೆನ್ನೈ, ಕೋಲ್ಕತ್ತಾ ಬೆಂಗಳೂರು, ಹೈದರಾಬಾದ್, ಅಹಮದಾಬಾದ್ ಮತ್ತು ಪುಣೆ - ಏಳು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮಹಾನಗರಗಳಿಗೆ ರೂ 2,500 ಕೋಟಿ ಯೋಜನೆ ಮತ್ತು ಭೂಕುಸಿತ ತಗ್ಗಿಸಲು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 825 ಕೋಟಿ ರೂಪಾಯಿ ರಾಷ್ಟ್ರೀಯ ಭೂಕುಸಿತ ಅಪಾಯ ತಗ್ಗಿಸುವ ಯೋಜನೆ ಘೋಷಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಪತ್ತು ನಿರ್ವಹಣಾ ಸಚಿವರ ಸಭೆಯ ನಂತರ, ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಈ ಕ್ಷೇತ್ರದಲ್ಲಿ ಸಾಕಷ್ಟು ಸಾಧಿಸಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಈ ಕ್ಷೇತ್ರದಲ್ಲಿ ಸಾಕಷ್ಟು ಸಾಧಿಸಿವೆ. ಯಾರೂ ಅದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಆದರೆ ವಿಪತ್ತುಗಳು ಅವುಗಳ ಸ್ವರೂಪವನ್ನು ಬದಲಾಯಿಸಿರುವುದರಿಂದ ಮತ್ತು ಅವುಗಳ ಆವರ್ತನ ಮತ್ತು ತೀವ್ರತೆ ಹೆಚ್ಚಿರುವುದರಿಂದ ನಾವು ಇನ್ನಷ್ಟು ವಿಸ್ತೃತ ಯೋಜನೆ ರೂಪಿಸಿ ಸುಮ್ಮನಿರಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದರು.
ಪರಮಾಣು ಶಕ್ತಿ ಕೇಂದ್ರಗಳನ್ನು ಸ್ಥಾಪಿಸುವ ರಾಜ್ಯಗಳಿಗೆ ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅನುಸರಿಸಲು ಕಟ್ಟುನಿಟ್ಟಾದ ಪ್ರೋಟೋಕಾಲ್ ನೀಡಲಾಗಿದೆ. ಅತ್ಯಂತ ತೀವ್ರವಾದ ಸೈಕ್ಲೋನಿಕ್ ಚಂಡಮಾರುತ ಬಿಪಾರ್ಜೋಯ್ ತೀವ್ರ ಚಂಡಮಾರುತವಾಗಿ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.












Click it and Unblock the Notifications