ಜಿನ್ಹಾಗೆ ಜಿಂದಾಬಾದ್ ಎಂದ ಶತ್ರುಘ್ನ ಸಿನ್ಹಾಗೆ ಶಾ ಟಾಂಗ್
ಮೊರಾದಾ(ಒಡಿಶಾ), ಏಪ್ರಿಲ್ 27: ಮೊಹಮ್ಮದ್ ಅಲಿ ಜಿನ್ಹಾ ಅವರನ್ನು ಮಹಾತ್ಮಾ ಗಾಂಧಿ ಅವರಷ್ಟೇ ಮಹಾನ್ ವ್ಯಕ್ತಿ ಎಂದ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ಅವರನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಲೇವಡಿ ಮಾಡಿದ್ದಾರೆ.
"ತಮ್ಮ ಹೇಳಿಕೆಯ ಮೂಲಕ ತಮ್ಮ ವ್ಯಕ್ತಿತ್ವ ಎಂಥದ್ದು ಎಂಬುದನ್ನು ಶತ್ರುಘ್ನ ಸಿನ್ಹಾ ತೋರಿಸಿಕೊಟ್ಟಿದ್ದಾರೆ" ಎಂದು ಅಮಿತ್ ಶಾ ಹೇಳಿದರು.
ಒಡಿಶಾದಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ಟಿಕೆಟ್ ಸಿಗದ ಕಾರಣ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶತ್ರುಘ್ನ ಸಿನ್ಹಾ ಅವರನ್ನು ತರಾಟೆಗೆ ತೆಗೆದುಕೊಂಡರು.

"ಭಾರತವನ್ನು ಇಬ್ಭಾಗ ಮಾಡಿದ ಜಿನ್ಹಾ ಅವರನ್ನು ಮಹಾತ್ಮಾ ಗಾಂಧಿ ಅವರಂತೆಯೇ ಎಂದು ಸಿನ್ಹಾ ಹೇಳಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವ ಎಂಥದ್ದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ" ಎಂದು ಅವರು ಲೇವಡಿ ಮಾಡಿದರು.
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನ ಧೀಮಂತ ನಾಯಕ ಮೊಹಮ್ಮದ್ ಅಲಿ ಜಿನ್ನಾ ಅವರು ಭಾರೀ ಕೊಡುಗೆ ನೀಡಿದ್ದಾರೆ ಎಂದು ಶುಕ್ರವಾರ ಮಾತನಾಡುತ್ತಿದ್ದ ಸಿನ್ಹಾ ಹೇಳಿದ್ದರು.
ಬಿಹಾರದ ಪಾಟ್ನಾ ಸಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿನ್ಹಾ ಅವರನ್ನು, ಬಿಜೆಪಿ ನಾಯಕ, ಹಾಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಎದುರಿಸಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications