ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆಗೆ ಅಮಿತ್ ಶಾ ಸೂಚನೆ: ಸಿಎಂ

|
Google Oneindia Kannada News

ನವದೆಹಲಿ, ಡಿಸೆಂಬರ್ 14: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂರು ಸಚಿವರನ್ನು ನೇಮಿಸಿ ಸಮಿತಿ ರಚಿಸಬೇಕು. ಗಡಿ ವಿವಾದದ ವಿಷಯಗಳನ್ನು ಬಗ್ಗೆ ಆದಷ್ಟು ಬೇಗನೆ ಚರ್ಚಿಸಿ ಬಗೆಹರಿಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ನವದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಗೃಹ ಸಚಿವರು ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರು ಜತೆಗೆ ಸಭೆ ನಡೆಸಿದರು. ಅಲ್ಲಿ ಗಡಿವಿಚಾರದ ಬಗ್ಗೆ ಮಹಾರಾಷ್ಟ್ರದವರು ಸರ್ವೋಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಗ್ಗೆ ಹಾಗೂ ಇತ್ತೀಚಿನ ಬೆಳವಣಿಗೆ ಬಗ್ಗೆ ಚರ್ಚಿಸಲಾಯಿತು. ಎರಡೂ ಪಕ್ಷಗಳ ವಿಚಾರಗಳನ್ನು ಚರ್ಚಿಸಿದ ನಂತರ ಕೇಂದ್ರ ಗೃಹ ಸಚಿವರು ಶಾಂತಿ ಹದಗೆಡದಂತೆ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ ಎಂದರು.

ಗಡಿವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ

ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇದೆ. ಜನರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಗಡಿ ವಿಚಾರದ ಬಗ್ಗೆ ಸಂವಿಧಾನಬದ್ಧವಾಗಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದಾಗಲಿ, ಜನಸಾಮಾನ್ಯರಿಗೆ ತೊಂದರೆ ಕೊಡುವುದಾಗಲಿ, ವ್ಯಾಪಾರ ವಹಿವಾಟುಗಳಿಗೆ ತೊಂದರೆ ಕೊಡುವುದಾಗಲಿ ಮಾಡಬಾರದು. ಎರಡು ರಾಜ್ಯಗಳ ನಡುವೆ ಬರುವ ಸಣ್ಣಪುಟ್ಟ ವಿಚಾರಗಳ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರು ಸೇರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕು.

Amit Shah instructed to form a committee of ministers for maintenance of harmony CM said.

ಎರಡೂ ರಾಜ್ಯಗಳು ನಿರಂತರವಾಗಿ ಪರಸ್ಪರ ಸಂಪರ್ಕದಲ್ಲಿರಬೇಕು. ಗಡಿವಿಚಾರದ ವಾಸ್ತವಾಂಶ, ಪರ-ವಿರೋಧ ನಿಲುವುಗಳೇನೇ ಇದ್ದರೂ, ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಗಡಿವಿಚಾರದಲ್ಲಿ ಯಾವುದೇ ರಾಜಕಾರಣ ಮಾಡದೇ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಅಮಿತ್ ಶಾ ಅವರು ಸೂಚಿಸಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.

ಹಿರಿಯ ಪೊಲೀಸ್ ಅಧಿಕಾರಿ ನೇಮಕಕ್ಕೆ ಸೂಚನೆ

ಇಂತಹ ವಿಚಾರಗಳು ವ್ಯಾಪಿಸುತ್ತಿದ್ದಂತೆ ಸಾಮಾನ್ಯವಾಗಿ ಆಗುವ ಕಲ್ಲು ತೂರಾಟ ನಿಯಂತ್ರಿಸಬೇಕು. ಸಾಮಾನ್ಯ ಪೊಲೀಸರಿಗಿಂತಲೂ ಇದೇ ವಿಷಯದ ಬಗ್ಗೆ ಲಕ್ಷ್ಯ ನೀಡಲು ಹಿರಿಯ ಐ.ಪಿ.ಎಸ್ ಅಧಿಕಾರಿಯನ್ನು ನೇಮಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ಉಳಿದಂತೆ ಪಕ್ಷದ ಸಂಘಟನೆ, ಜನಸಂಕಲ್ಪ ಯಾತ್ರೆ, ಪ್ರಧಾನಿ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ದಿನಾಂಕಗಳ ಬಗ್ಗೆ ಚರ್ಚಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಇನ್ನುಮುಂದೆ ಹೆಚ್ಚಿನ ಸಮಯ ನೀಡಲಿದ್ದು, ಹಲವಾರು ಕಾರ್ಯಕ್ರಮಗಳು ಕರ್ನಾಟಕದಲ್ಲಿ ನಡೆಯಲಿವೆ ಎಂದು ತಿಳಿಸಿದರು.

Amit Shah instructed to form a committee of ministers for maintenance of harmony CM said.

ಜ. 12ಕ್ಕೆ ಯುವಜನೋತ್ಸವ

ಮುಂದಿನ ವರ್ಷ ಜನವರಿ 12 ರಂದು ಯುವಜನೋತ್ಸವವನ್ನು ಹಮ್ಮಿಕೊಳ್ಳಲು ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಚರ್ಚಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಪ್ರಧಾನಿಗಳನ್ನು ಆಹ್ವಾನಿಸುವ ಬಗ್ಗೆ ಮಾತುಕತೆ ನಡೆದಿದೆ. ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚಿಸಲು ಸಮಯ ಕೋರಲಾಗಿದೆ.

ಪೆನ್ನಾರ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನ್ಯಾಯಾಧಿಕರಣ 3 ತಿಂಗಳಲ್ಲಿ ರಚನೆ ಮಾಡಲು ಸುಪ್ರೀಂಕೋರ್ಟ್ ತಿಳಿಸಿದೆ. ಇದು ಸಣ್ಣ ವಿಚಾರವಾಗಿದ್ದು, ಪ್ರಾಧಿಕಾರ ರಚನೆ ಬೇಡ ಎಂದಿದ್ದೇವೆ. ನಮ್ಮ ನಿಲುವನ್ನು ಸುಪ್ರೀಂಕೋರ್ಟಿನಲ್ಲಿ ನಾವು ಮರುಪರಿಶೀಲನಾ ಅರ್ಜಿ ಸಲ್ಲಿಸಲಿದ್ದೇವೆ ಹಾಗೂ ಕೇಂದ್ರ ಸರ್ಕಾರಕ್ಕೆ ಆ ಬಗ್ಗೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

English summary
Amit Shah instructed to form a committee of ministers for maintenance of harmony CM said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X