• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚುನಾವಣಾ ತಂತ್ರಗಾರಿಕೆ: ಅಮಿತ್ ಶಾ ಪ್ರಿನ್ಸಿಪಾಲ್, ಪ್ರಶಾಂತ್ ಕಿಶೋರ್ ಇನ್ನೂ ವಿದ್ಯಾರ್ಥಿ

|

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ನಡೆಸುತ್ತಿದ್ದರೆ, ಇನ್ನೊಂದೆಡೆ ಮುಂದಿನ ವರ್ಷ ನಡೆಯಲಿರುವ ಅಸೆಂಬ್ಲಿ ಚುನಾವಣಾ ಸಂಬಂಧ, ಈಗಲೇ ಮಾತಿನ ಚಕಮಕಿ ಮುಂದುವರಿದಿದೆ.

ಆಂಧ್ರಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ವೈ ಎಸ್ ಜಗನ್ಮೋಹನ್ ರೆಡ್ಡಿ ಪರ ಯಶಸ್ವೀ ತಂತ್ರಗಾರಿಕೆ ಹಣಿದಿದ್ದ ಪ್ರಶಾಂತ್ ಕಿಶೋರ್, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಕೆಲಸ ಮಾಡಲಿದ್ದಾರೆ ಎನ್ನುವ ಸುದ್ದಿಯ ಬಗ್ಗೆ ಬಿಜೆಪಿ ಹೇಳಿಕೆ ನೀಡಿದೆ.

ಜಗನ್ ದಿಗ್ವಿಜಯದ ಹಿಂದಿನ ಶಕ್ತಿ ಪ್ರಶಾಂತ್

ಚುನಾವಣಾ ತಂತ್ರಗಾರಿಕೆ ಎನ್ನುವ ಕಾಲೇಜು ಪಾಠದ ವಿಷಯದಲ್ಲಿ ನಮ್ಮ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಿನ್ಸಿಪಾಲ್, ಅವರ ಮುಂದೆ ಪ್ರಶಾಂತ್ ಕಿಶೋರ್ ಇನ್ನೂ ವಿದ್ಯಾರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ, ಇಬ್ಬರಿಗೂ ತುಲನೆ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ದೀದಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಕಳೆದ ಲೋಕಸಭಾ ಚುನಾವಣಾ ಫಲಿತಾಂಶವೇ ಸಾಕ್ಷಿ. ಇದನ್ನು ಸರಿಪಡಿಸಲು ಯಾವಾ ಚುನಾವಣಾ ತಜ್ಞರಿಗೂ ಸಾಧ್ಯವಿಲ್ಲ ಎಂದು ವಿಜಯವರ್ಗಿಯಾ ಹೇಳಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, ಇದಾದ ನಂತರ ಬಿಹಾರದಲ್ಲಿ ನಿತೀಶ್ ಕುಮಾರ್ ಜೊತೆ, ಆಂಧ್ರದಲ್ಲಿ ಜಗನ್ ಪರ ಕೆಲಸ ನಿರ್ವಹಿಸಿದ್ದರು.

ಐದು ವರ್ಷದ ಹಿಂದೆ ಅಂದರೆ 2014ರ ಲೋಕಸಭಾ ಚುನಾವಣೆಯ ಆಸುಪಾಸಿನಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ಪರಿಚಯಿಸಿದ್ದ ಅಮಿತ್ ಶಾ, ಇದಾದ ನಂತರ ನಡೆದ ಹಲವು ಅಸೆಂಬ್ಲಿ ಚುನಾವಣೆಯಲ್ಲಿ ಅವರ ಬೆಂಬಲವಿಲ್ಲದೇ ಚುನಾವಣೆ ಗೆದ್ದಿದ್ದನ್ನು ಸ್ಮರಿಸಿಕೊಳ್ಳಬಹುದಾಗಿದೆ.

English summary
BJP President Amit Shah is the principal and Prashant Kishor is still a student: BJP National general secretary Kailash Vijayvargiya statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X