ಗಡಿ ವಿವಾದ: ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅಮಿತ್ ಶಾ

ನವದೆಹಲಿ, ಡಿಸೆಂಬರ್ 14: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್‌ ಭೇಟಿ ಮಾಡಿದ್ದಾರೆ ಎಂದು 'ಎನ್‌ಡಿಟಿವಿ' ವರದಿ ಮಾಡಿದೆ.

ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ್‌ ಸಿಂಧೆ ಅವರ ಜೊತೆ ಅಮಿತ್‌ ಶಾ ಮಾತನಾಡಿದ್ದಾರೆ.

ಬೊಮ್ಮಾಯಿ ಅವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಿಂಧೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಸಾಥ್‌ ನೀಡಿದ್ದಾರೆ.

Amit Shah Meets Karnataka, Maharashtra Chief Ministers On Border Row

ಮಹಾರಾಷ್ಟ್ರದ ಗಡಿಯಲ್ಲಿರುವ ಕನ್ನಡ ಭಾಷಿಗರ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವ ವಿಚಾರ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದರು. ಬೆಳಗಾವಿ ಹಾಗೂ ಇತರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಹೋರಾಡುವುದಾಗಿ ಮಹಾರಾಷ್ಟ್ರದ ರಾಜಕಾರಣಿಗಳು ಹೇಳಿಕೆ ನೀಡಿದ್ದರು.

ಆ ನಂತರ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಸಂಘರ್ಷ ಭುಗಿಲೆದ್ದಿತು. ಮಹಾರಾಷ್ಟ್ರದ ಕರ್ನಾಟಕಕ್ಕೆ ಸೇರಿದ ಬಸ್‌ಗಳಿಗೆ ಕಪ್ಪು ಮಸಿ ಬಳಿಯಲಾಯಿತು. ಬೆಳಗಾವಿ ಜಿಲ್ಲೆಯ ಹೀರೇಬಾಗೇವಾಡಿಯಲ್ಲಿ ಕನ್ನಡ ಪರ ಸಂಘಟನೆಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ಈ ವಿವಾದ ತೀವ್ರ ಸ್ವರೂಪ ಪಡೆದಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ಮಾಡುವುದಾಗಿ ಘೋಷಿಸಿದರು. ಇದು ಮತ್ತಷ್ಟು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು.

ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರದ ರಾಜಕಾರಣಿಗಳು ಹಾಗೂ ಎಂಇಎಸ್‌ ಪುಂಡರು ಖ್ಯಾತೆ ತೆಗೆಯುತ್ತಲೇ ಬಂದಿದ್ದಾರೆ. ಬೆಳಗಾವಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದ್ದರೂ, ಮಹಾರಾಷ್ಟ್ರದ ರಾಜಕಾರಣಿಗಳು ಗಡಿಯಲ್ಲಿನ ಮರಾಠಿ ಭಾಷಿಗರನ್ನು ಎತ್ತಿ ಕಟ್ಟುತ್ತಲೇ ಇದ್ದಾರೆ. ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕೆಂದು ಎನ್‌ಸಿಪಿ ನಾಯಕ ಶರದ್‌ ಪವಾರ ಒತ್ತಾಯ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದ ಸಭೆಯಲ್ಲಿ ಏನು ಚರ್ಚೆ ನಡೆಯಿತೆಂಬ ಮಾಹಿತಿ ಇನ್ನಷ್ಟೇ ಬರಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+