ಕಾಶ್ಮೀರದಲ್ಲಿ ಒಳನುಸುಳುವಿಕೆ ತಡೆಯಲು ಅಮಿತ್ ಶಾ ತಂತ್ರ

Recommended Video

      ಬೇರು ಮಟ್ಟದಿಂದ ಶತ್ರುಗಳನ್ನು ಸದೆಬಡಿಯಲು ಪ್ಲ್ಯಾನ್ | Oneindia Kannada

      ನವದೆಹಲಿ, ಜೂನ್ 06 : ನೂತನ ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿ ಒಳನುಸುಳಿವಿಕೆ ತಡೆಯಲು ತಂತ್ರ ರೂಪಿಸುತ್ತಿದ್ದಾರೆ. ಬೇರು ಮಟ್ಟದಿಂದ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಭೆ ನಡೆಸುತ್ತಿದ್ದಾರೆ.

      ಗುರುವಾರ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೂಬ ಅವರ ಜೊತೆ ಸಭೆ ನಡೆಸಿದರು. ರಾಷ್ಟ್ರೀಯ ಭದ್ರತೆ ಚರ್ಚಿಸಲು ನಡೆಸಿದ ಸಭೆಯಲ್ಲಿ ಕಾಶ್ಮೀರದ ವಿಚಾರವೇ ಪ್ರಮುಖವಾಗಿ ಚರ್ಚೆಯಾಗಿದೆ.

      ಕಾಶ್ಮೀರದಲ್ಲಿ ಒಳನುಸುಳಿಕೆಯನ್ನು ಬೇರು ಮಟ್ಟದಿಂದ ಮಟ್ಟಹಾಕಬೇಕು ಎಂಬುದು ಅಮಿತ ಶಾ ಅವರ ನಿಲುವು. ಬಿಜೆಪಿ ಕಾಶ್ಮೀರದಲ್ಲಿ ಪಿಡಿಪಿ ಜೊತೆ ಯಾವುದೇ ಮೈತ್ರಿಯನ್ನು ಹೊಂದಿಲ್ಲ. ಆದ್ದರಿಂದ, ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೇ ಕೆಲಸ ಮಾಡಬಹುದಾಗಿದೆ.

      Amit Shah

      ಗುರುವಾರ ನಡೆದ ಮತ್ತೊಂದು ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಮಾತುಕತೆ ಇಲ್ಲ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಹೇಳಿದೆ. ಜೂನ್ 13, 14ರಂದು ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ಶೃಂಗ ಸಭೆ ನಡೆಯಲಿದೆ.

      ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+