Amit Shah: ಗಾಂಧಿನಗರದಲ್ಲಿ ನಾಮಪತ್ರ ಸಲ್ಲಿಸಿ ಅಮಿತ್ ಶಾ ಹೇಳಿದ್ದೇನು ಗೊತ್ತೇ?
ಗಾಂಧಿನಗರ, ಏಪ್ರಿಲ್, 19: ಲೋಕಸಭೆ ಚುನಾವಣೆ ಹಿನ್ನೆಲೆ ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ (ಏಪ್ರಿಲ್ 19) ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಈ ವೇಳೆ ಮಾತನಾಡಿದ ಅವರು ಏನೆಲ್ಲ ಹೇಳಿದ್ದಾರೇ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ಸಾರ್ವತ್ರಿಕ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿಯವರಿಗೆ ಮೂರನೇ ಅವಧಿಯನ್ನು ನೀಡುವುದಾಗಿದೆ ಎಂದರು. ಮಧ್ಯಾಹ್ನ 12:39ಕ್ಕೆ ಗಾಂಧಿನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಎಂ.ಕೆ.ದವೆ ಅವರಿಗೆ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಅಮಿತ್ ಶಾ ಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಾಥ್ ನೀಡಿದರು.

ಇನ್ನು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾ ಅವರು, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಈ ಸಾರ್ವತ್ರಿಕ ಚುನಾವಣೆಯು ಪ್ರಮುಖವಾಗಿದೆ. ಅಲ್ಲದೆ, ಪ್ರಧಾನಿ ಮೋದಿಗೆ ಮೂರನೇ ಅವಧಿಯನ್ನು ನೀಡುವುದಾಗಿದೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಮಾಡಿದ ತಪ್ಪುಗಳನ್ನು ಸರಿಪಡಿಸಲು ಮೋದಿಯವರ ಮೂರನೇ ಅವಧಿಯು ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
"ಈ ಚುನಾವಣೆಯು ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ನಮ್ಮ ಪ್ರಧಾನಿಯನ್ನಾಗಿ ಮಾಡುವ ಉದ್ದೇಶವಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನಕ್ಕೆ ತರಲು ಮೋದಿಜಿ ಸಂಕಲ್ಪ ಮಾಡಿದ್ದಾರೆ. ನಾವು ಅದನ್ನು ಸಾಧಿಸಲು ಬಯಸಿದರೆ ಮುಂದಿನ ಐದು ವರ್ಷಗಳು ನಿರ್ಣಾಯಕ. ಏಕೆಂದರೆ ಕಳೆದ ಹಿಂದಿನ ಯುಪಿಎ ಸರ್ಕಾರ ಮಾಡಿದ ಗುಂಡಿಗಳನ್ನು ತುಂಬಿಸಲು 10 ವರ್ಷಗಳು ಕಳೆದವು," ಎಂದು ಹೇಳಿದರು.
ಮುಂದಿನ ಐದು ವರ್ಷಗಳನ್ನು 'ವಿಕ್ಷಿತ್ ಭಾರತ್'ಗೆ ಬಲವಾದ ಅಡಿಪಾಯವನ್ನು ರಚಿಸಲು ಬಳಸಲಾಗುವುದು ಎಂದು ಅವರು ಹೇಳಿದರು. ಒಮ್ಮೆ ದಿಗ್ಗಜರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಪ್ರತಿನಿಧಿಸಿದ್ದ ಸ್ಥಾನದಿಂದ ತಮ್ಮನ್ನು ಮರುನಾಮಕರಣ ಮಾಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ. ಇನ್ನು ಪ್ರಧಾನಿ ಮೋದಿ ಅವರು ಇಲ್ಲಿಂದ ನೋಂದಾಯಿತ ಮತದಾರರಾಗಿರುವುದರಿಂದ ಈ ಕ್ಷೇತ್ರಕ್ಕೆ ಮಹತ್ವವಿದೆ ಎಂದು ಹೇಳಿದರು.
"ಕಳೆದ 30 ವರ್ಷಗಳಿಂದ ನಾನು ಈ ಕ್ಷೇತ್ರದೊಂದಿಗೆ ಉತ್ತಮ ಒಡನಾಟ ಹೊಂದಿದ್ದೇನೆ. ನಾನು ಸಂಸದನಾಗುವ ಮೊದಲು, ಈ ಕ್ಷೇತ್ರದ ಅಡಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದೆ. ನಿಮ್ಮ ಪ್ರೀತಿಯಿಂದ ನಾನು ಸಂಸತ್ ಸದಸ್ಯನಾಗಿದ್ದೇನೆ. ಇದೀಗ ಮತ ಗಾಂಧಿನಗರದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ ಎಂದರು.
ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ 22,000 ಕೋಟಿ ರೂಪಾಯಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು. ಇನ್ನು ಅಮಿತ್ ಶಾ ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಗಾಂಧಿನಗರ ಕ್ಷೇತ್ರದಿಂದ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಪ್ರತಿಪಕ್ಷ ಕಾಂಗ್ರೆಸ್‌ನಿಂದ ಗಾಂಧಿನಗರದಿಂದ ಕಾರ್ಯದರ್ಶಿ ಸೋನಾಲ್ ಪಟೇಲ್ ಅವರನ್ನು ಕಣಕ್ಕಿಳಿಸಿದ್ದು, ಇದೀಗ ಮತ್ತೆ ನಾವೇ ಗೆಲುವು ಸಾಧಿಸಲಿದ್ದೇವೆ ಎನ್ನುವ ವಿಶ್ವಾಸವನ್ನು ಕೂಡ ವ್ಯಕ್ತಪಡಿಸಿದ್ದಾರೆ. ಇನ್ನು ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ಅಮಿತ್ ಶಾ ಅವರು (ಏಪ್ರಿಲ್ 19) ಗುರುವಾರ ಗಾಂಧಿನಗರದಲ್ಲಿ ಸುಮಾರು 20 ಕಿಲೋ ಮೀಟರ್ ರೋಡ್ ಶೋಗಳನ್ನು ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಮಾಡಿದ್ದಾರೆ. ಈ ರೋಡ್‌ಶೋಗಳು ಅಹಮದಾಬಾದ್ ಮತ್ತು ಗಾಂಧಿನಗರ ಜಿಲ್ಲೆಗಳ ಸನಂದ್, ಕಲೋಲ್, ಸಬರಮತಿ, ಘಟ್ಲೋಡಿಯಾ, ನರನ್‌ಪುರ ಮತ್ತು ವೆಜಲ್‌ಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ನಡೆದವು. ಅಹಮದಾಬಾದ್‌ನಲ್ಲಿ ಕೊನೆಯ ರೋಡ್ ಶೋ ಅಂತ್ಯದಲ್ಲಿ ಅಮಿತ್ ಅವರು, ವೆಜಲ್‌ಪುರ ಪ್ರದೇಶದಲ್ಲಿ ದೊಡ್ಡ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಬಿಜೆಪಿಯನ್ನು ಈ ಬಾರಿಯೂ ಅಶಿಕಾರಿಗೆ ತನ್ನಿ ಎಂದು ಮತದಾರರಿಗೆ ಮನವಿ ಮಾಡಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications