ಎಲ್ಲ ರಾಜ್ಯದಲ್ಲಿರೋ ಪಾಕಿಸ್ತಾನಿಗಳ ಗಂಟುಮೂಟೆ ಕಟ್ಟಿಸಿ: ಸಿಎಂಗಳಿಗೆ ಅಮಿತ್‌ ಶಾ ಸೂಚನೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮುಂದಾಗಿದೆ. ಈಗಾಗಲೇ ಪಾಕಿಸ್ತಾನ ಜೊತೆಗಿನ ಎಲ್ಲ ಸಂಬಂಧವನ್ನು ಕಡಿದುಕೊಂಡಿದೆ. ಗಡಿಯಲ್ಲಿ ಎರಡೂ ದೇಶಗಳಲ್ಲಿ ಯುದ್ಧಕ್ಕೆ ಸನ್ನದ್ಧಗೊಂಡಿದ್ದು ಪಾಕ್‌ ಮತ್ತೆ ಗಡಿಯಲ್ಲಿ ಗುಂಡು ಹಾರಿಸಿ ಕೆಣಕುತ್ತಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಲ್ಲ ಭಾರತದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಖಡಕ್‌ ಆದೇಶವೊಂದನ್ನು ನೀಡಿದ್ದಾರೆ. ನಿಮ್ಮ ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಗಂಟು ಮೂಟೆ ಕಟ್ಟಿಸಿ ಎಂದು ಸೂಚನೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ವಿಷಯದ ಬಗ್ಗೆ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ, ಅವರು ಪಾಕಿಸ್ತಾನಕ್ಕೆ ಬೇಗನೆ ಮರಳುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕರ್ನಾಟಕದಲ್ಲಿರುವ ಎಲ್ಲ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಗುರುತಿಸಿ ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಪರಮೇಶ್ವರ ಅವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕೂಡ ಒತ್ತಾಯಿಸಿದ್ದಾರೆ. ಎಲ್ಲ ರೀತಿಯ ವೀಸಾಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತಕ್ಷಣದಿಂದ ಜಾರಿಗೆ ತರಲಾಗಿದೆ. ಜನರು ಪಾಕಿಸ್ತಾನಕ್ಕೆ ಬೇಗನೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಮಿತ್‌ ಶಾ ಕೇಳಿಕೊಂಡಿದ್ದಾರೆ.

Amit Shah Orders States To Identify And Deport Pakistan Nationals

ಕೇಂದ್ರ ಗೃಹ ಸಚಿವರು ತಮ್ಮ ನಿವಾಸದಲ್ಲಿ ಸಿಂಧೂ ಜಲ ಒಪ್ಪಂದದ ಕುರಿತು ಸಭೆ ನಡೆಸಲಿದ್ದಾರೆ. ಗೃಹ ಸಚಿವರು ಮತ್ತು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಲ್ಲದೆ, ಇತರ ಹಿರಿಯ ಸರ್ಕಾರಿ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ ಬಗ್ಗೆ ಭಾರತವು ಪಾಕಿಸ್ತಾನಕ್ಕೆ ಲಿಖಿತವಾಗಿ ಈಗಾಗಲೇ ತಿಳಿಸಿದೆ. ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇವಶ್ರೀ ಮುಖರ್ಜಿ ಅವರು ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಅವರಿಗೆ ಭಾರತ ಸರ್ಕಾರದ ಈ ನಿರ್ಧಾರದ ಬಗ್ಗೆ ಪತ್ರದ ಮೂಲಕ ತಿಳಿಸಿದ್ದಾರೆ.

Take a Poll

ಒಪ್ಪಂದದಲ್ಲಿನ ಬದಲಾವಣೆಗಳಿಗೆ ಭಾರತ ಸೂಚನೆ ನೀಡಿದೆ. ಒಪ್ಪಂದಕ್ಕೆ ತಿದ್ದುಪಡಿಗಳಿಗಾಗಿ ಭಾರತ ಸರ್ಕಾರ ಪಾಕಿಸ್ತಾನ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಒಪ್ಪಂದದ ಹಲವಾರು ಮೂಲಭೂತ ಅಂಶಗಳು ಬದಲಾಗಿವೆ. ಮರುಪರಿಶೀಲನೆಯ ಅಗತ್ಯವಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಜನಸಂಖ್ಯಾ ಬದಲಾವಣೆಗಳು, ಶುದ್ಧ ಇಂಧನ ಅಭಿವೃದ್ಧಿ ಮತ್ತು ಒಪ್ಪಂದದಲ್ಲಿ ವಿವರಿಸಿರುವಂತೆ ನೀರಿನ ವಿತರಣೆಗೆ ಸಂಬಂಧಿಸಿದ ವಿವಿಧ ಅಂಶಗಳು ಸಂಭವಿಸಿವೆ. ಯಾವುದೇ ಒಪ್ಪಂದವನ್ನು ಉತ್ತಮ ನಂಬಿಕೆಯಿಂದ ಜಾರಿಗೆ ತರಬೇಕು. ಆದರೆ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿಯಾಚೆಗಿನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಹೇಳಿದೆ.

Amit Shah Orders States To Identify And Deport Pakistan Nationals

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಮಹತ್ವದ ಹೆಜ್ಜೆ ಇಡುತ್ತಿದ್ದೆ. ಇಟ್ಟಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕರನ್ನು ಕೊಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+