Jharkhand Election: ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ

ಜಾರ್ಖಂಡ್ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು ಎಲ್ಲಾ ಪಕ್ಷಗಳು ಕೊನೆಯ ಸುತ್ತಿನ ಪ್ರಚಾರ ನಡೆಸುತ್ತಿವೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ಜಾರ್ಖಂಡ್‌ ಚುನಾವಣೆ ಗೆಲ್ಲಲು ಭಾರಿ ಕಸರತ್ತು ನಡೆಸುತ್ತಿದ್ದು, ಆರೋಪ ಪ್ರತ್ಯಾರೋಪಗಳು ಜೋರಾಗಿದೆ. ಬಾಂಗ್ಲಾದೇಶಿ ನುಸುಳುಕೋರರ ಸಮಸ್ಯೆ ಕೂಡ ಪ್ರಮುಖ ಚುನಾವಣಾ ವಿಚಾರವಾಗಿದ್ದು, ಬಿಜೆಪಿ ಇದನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ರಾಜ್ಯದಿಂದ ಗರಿಪಾರು ಮಾಡುವುದಾಗಿ ಭರವಸೆ ನೀಡಿದ್ದಾರೆ.

Amit Shah Pledges to Expel Bangladeshi Intruders from Jharkhand

ಎಸ್‌ಟಿ, ಎಸ್‌ಸಿ ಮತ್ತು ಒಬಿಸಿಗಳಿಗೆ ಸಿಗಬೇಕಿದ್ದ ಮೀಸಲಾತಿಯಲ್ಲಿ ಶೇಕಡಾ 10ರಷ್ಟು ಮುಸ್ಲಿಮರಿಗೆ ಹಂಚಿಕೆ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು. ಮೋದಿ ಸರ್ಕಾರ ಇರುವವರೆಗೆ ನಾವು ಇದಕ್ಕೆಲ್ಲಾ ಅವಕಾಶ ನೀಡುವುದಿಲ್ಲ, ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡುವುದನ್ನು ಮೋದಿ ಸರ್ಕಾರ ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸಲು ಎಂದಿಗೂ ಸಾಧ್ಯವಿಲ್ಲ, ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಲಿ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಆರ್ಟಿಕಲ್ 370ಯನ್ನು ಮತ್ತೆ ಜಾರಿ ಮಾಡುವ ನಿರ್ಣಯ ಅಂಗೀಕರಿಸಲಾಗಿದೆ. ಆದರೆ ಇನ್ನು ನಾಲ್ಕು ಜನ್ಮ ಹೋದರು ಅಲ್ಲಿ ಆರ್ಟಿಕಲ್ 370ಯನ್ನು ಮತ್ತೆ ಜಾರಿ ಮಾಡಲು ಆಗುವುದಿಲ್ಲ ಎಂದು ಅಮಿತ್ ಶಾ ಹೇಳಿದರು.

ಜೆಎಂಎಂ ವಿರುದ್ಧ ವಾಗ್ದಾಳಿ

ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಕೊಟ್ಟಿದ್ದ ಭರವಸೆಯನ್ನು ಹೇಮಂತ್ ಸೊರೆನ್ ಸರ್ಕಾರ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಜಾರ್ಖಂಡ್‌ನಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ, ಅರ್ಹ ವಿದ್ಯಾವಂತ ಯುವಕರಿಗೆ ನಿರುದ್ಯೋಗ ಭತ್ಯೆಯಾಗಿ 2,000 ರೂಪಾಯಿ ನೀಡಲಿದ್ದು, ಜಾರ್ಖಂಡ್‌ನಲ್ಲಿ ಒಂದು ಲಕ್ಷ ಉದ್ಯೋಗವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಭರವಸೆ ನೀಡಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಶನಿವಾರ ಜಾರ್ಖಂಡ್‌ನ ಪಲಮು, ಹಜಾರಿಬಾಗ್ ಮತ್ತು ಪೊಟ್ಕಾದಲ್ಲಿ ಚುನಾವಣಾ ರ್‍ಯಾಲಿಗಳಲ್ಲಿ ಭಾಗವಹಿಸಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಮೊದಲ ಹಂತದ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಜಾರ್ಖಂಡ್‌ಗೆ ಭೇಟಿ ನೀಡಿದ್ದು, ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದ್ದು, ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+