ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಜಪೇಯಿ ಆರೋಗ್ಯ ಸ್ಥಿತಿ ಮಾಹಿತಿ ಪಡೆದ ರಾಜನಾಥ್ ಸಿಂಗ್

By Mahesh
|
Google Oneindia Kannada News

ನವದೆಹಲಿ, ಆಗಸ್ಟ್ 12: ಬಿಜೆಪಿ ಹಿರಿಯ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಮತ್ತೊಮ್ಮೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ವಾಜಪೇಯಿ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಆಸ್ಪತ್ರೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡಾ ಭೇಟಿ ನೀಡಿದ್ದಾರೆ.

Amit Shah, Rajnath Singh Visit Atal Bihari Vajpayee At AIIMS

ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಶನಿವಾರದ ಸಂಜೆ ಅವರನ್ನು ಮತ್ತೊಮ್ಮೆ ಏಮ್ಸ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ಸೇರಿಸಲಾಯಿತು.

93 ವರ್ಷದ ವಾಜಪೇಯಿ ಕಳೆದ ಕೆಲ ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜೂನ್ 11 ರಂದು ಮೂತ್ರಪಿಂಡ ಸಂಬಂಧೀ ಕಾಯಿಲೆಯಿಂದ ವಾಜಪೇಯಿ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಡೆಮೆನ್ಷಿಯಾ ಮತ್ತು ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿರುವ ಅವರು ಸದ್ಯಕ್ಕೆ ಯಾರನ್ನೂ ಗುರುತು ಹಿಡಿಯುತ್ತಿಲ್ಲ. ಆದರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

English summary
Home Minister Rajnath Singh and BJP president Amit Shah visited AIIMS this evening to enquire about the health condition of former prime minister Atal Bihari Vajpayee, who has been undergoing treatment at the premier institute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X