ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂಪೇಂದ್ರ ಪಟೇಲ್‌ ಗುಜರಾತ್‌ ಸಿಎಂ ಅಭ್ಯರ್ಥಿ: ಕೇಂದ್ರ ಸಚಿವ ಅಮಿತ್‌ ಶಾ

|
Google Oneindia Kannada News

ಅಹಮದಾಬಾದ್, ನವೆಂಬರ್ 15: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಈ ಹೇಳಿಕೆಯಿಂದ ಪಟೇಲ್ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದು ಸ್ಪಷ್ಟವಾಗಿದೆ.

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ತವರು ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಅಧಿಕಾರವನ್ನು ಹಿಡಿಯಲು ಬಿಜೆಪಿ ಯತ್ನಿಸುತ್ತಿದೆ. "ಗುಜರಾತ್‌ನಲ್ಲಿ ಬಿಜೆಪಿ ಬಹುಮತ ಪಡೆದರೆ, ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ." ಎಂದು ಅಮಿರ್‌ ಶಾ ಹೇಳಿದ್ದಾರೆ. 2021ರ ಸೆಪ್ಟೆಂಬರ್‌ನಲ್ಲಿ ವಿಜಯ್ ರೂಪಾನಿ ಬದಲಿಗೆ ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

BTS 2022: 9 ಒಪ್ಪಂದಕ್ಕೆ ಸಾಕ್ಷಿಯಾಗಲಿರುವ 'ಬಿಟಿಎಸ್- 22' ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ BTS 2022: 9 ಒಪ್ಪಂದಕ್ಕೆ ಸಾಕ್ಷಿಯಾಗಲಿರುವ 'ಬಿಟಿಎಸ್- 22' ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

Amit Shahs statement that Bhupendra Patel is Gujarat CM candidate

ಪಟೇಲ್ ಘಟ್ಲೋಡಿಯಾ ಕ್ಷೇತ್ರದ ಅಭ್ಯರ್ಥಿ

ಬಿಜೆಪಿ ನಾಯಕತ್ವದ ಈ ಹೆಜ್ಜೆ ಅನೇಕರನ್ನು ಅಚ್ಚರಿಗೊಳಿಸಿದೆ. ಪಟೇಲ್ ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ.

ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು "ಸಾರ್ವಜನಿಕ ಸಮೀಕ್ಷೆ" ನಡೆಸಿದ ನಂತರ ಪಕ್ಷದ ನಾಯಕ ಇಸುದನ್ ಗಧ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತ್ತು.

Amit Shahs statement that Bhupendra Patel is Gujarat CM candidate

ಇಸುದನ್ ಗಧ್ವಿ ಪತ್ರಕರ್ತರಾಗಿದ್ದರು. ಗಧ್ವಿ ದೂರದರ್ಶನದಲ್ಲೂ ಕೆಲಸ ಮಾಡಿದ್ದಾರೆ. ಇದಲ್ಲದೇ ಆ್ಯಂಕರಿಂಗ್ ಕೂಡ ಮಾಡಿದ್ದಾರೆ. ಕಳೆದ ವರ್ಷವೇ ಇಸುದನ್ ಗಧ್ವಿ ಪತ್ರಿಕೋದ್ಯಮ ತೊರೆದು ರಾಜಕೀಯ ಪ್ರವೇಶಿಸಿದ್ದರು. ಇಸುದನ್ ಗಧ್ವಿ ರೈತ ಕುಟುಂಬದಿಂದ ಬಂದವರು ಅವರ ತಂದೆ ಈಗಲೂ ಕೃಷಿ ಮಾಡುತ್ತಿದ್ದಾರೆ. ಇನ್ನು ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂದು ಘೋಷಿಸಿಲ್ಲ. ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಗುಜರಾತ್‌ನಲ್ಲಿ ಒಟ್ಟು 182 ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ.

English summary
Bhupendra Patel will remain the chief minister of Gujarat if BJP secures a majority in the next month's Assembly elections, senior party leader and Union Home Minister Amit Shah told CNN-News18 in Ahemdabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X