ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿರುವ ಅಮಿತ್ ಶಾ, ಸ್ಮೃತಿ
ಅಹ್ಮದಾಬಾದ್, ಜುಲೈ 28: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಗುಜರಾತಿನಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದು, ಇಂದು(ಜುಲೈ 28) ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ನಾಮ ಪತ್ರ ಸಲ್ಲಿಸಲಿರುವ ಅಮಿತ್ ಶಾ ಅವರ ರಾಜ್ಯ ಸಭಾ ಪ್ರವೇಶ ಬಿಜೆಪಿಗೆ ಮತ್ತಷ್ಟು ಬಲತುಂಬಲಿದೆ.

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾದ ನಂತರ ಶಾಸನಸಭೆಗಳಿಂದ ದೂರ ಉಳಿದಿದ್ದ ಗುಜರಾತ್ ಮಾಜಿ ಗೃಹ ಸಚಿವ ಅಮಿತ್ ಶಾ ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆ ನಿಭಾಯಿಸುತ್ತಿದ್ದರು. ಇದೀಗ ಗುಜರಾತಿನಿಂದ ರಾಜ್ಯಸಭೆಗೆ ಸ್ಪರ್ಧಿಸಿ ಅವರು ಮತ್ತೆ ಕಲಾಪಗಳಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವಷ್ಟು ಸಂಖ್ಯಾಬಲವನ್ನು ಬಿಜೆಪಿ ಹೊಂದಿದ್ದು ಇಬ್ಬರೂ ನಾಯಕರು ರಾಜ್ಯಸಭೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.












Click it and Unblock the Notifications