ನಗರ ನಕ್ಸಲ್ ಪ್ರಚಾರವನ್ನು ಗಂಭೀರವಾಗಿ ತೆಗೆದುಕೊಂಡ ಬಿಜೆಪಿ

ಬೆಂಗಳೂರು, ಸೆಪ್ಟೆಂಬರ್ 09 : ನಗರ ನಕ್ಸಲ್ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಮುಂಬರುವ ಲೋಕಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಲು ಪಕ್ಷ ಮುಂದಾಗಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈ ಕುರಿತು ಸೂಚನೆ ನೀಡಿದ್ದಾರೆ. 'ನಗರ ನಕ್ಸಲರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ವಿರುದ್ಧ ಹೋರಾಟ ಮಾಡುವಂತೆ' ಅವರು ಪಕ್ಷದ ನಾಯಕರಿಗೆ ನಿರ್ದೇಶನ ನೀಡಿದ್ದಾರೆ.

ನಕ್ಸಲರಿಗೆ ಬೆಂಬಲ ನೀಡುತ್ತಿದ್ದವರನ್ನು ಬಂಧಿಸಿದ್ದಕ್ಕಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಅಮಿತ್ ಶಾ ಅಭಿನಂದಿಸಿದ್ದಾರೆ.

 Amit Shah tells BJP to take opposition to the cleaners on urban naxals

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ನಕ್ಸಲ್ ಬೆಂಬಲಿಗರನ್ನು ವಿಪಕ್ಷಗಳು ಬೆಂಬಲಿಸಬಹುದು. ಆದ್ದರಿಂದ, ವಿಪಕ್ಷಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದಾಗಿ ಕ್ರಮ ಕೈಗೊಂಡು ಹತ್ಯೆ ಸಂಚು ರೂಪಿಸಿದ ಮಹಾರಾಷ್ಟ್ರ ಸರ್ಕಾರವನ್ನು ಎಲ್ಲರೂ ಅಭಿನಂದಿಸಬೇಕು ಎಂದು ಅಮಿತ್ ಶಾ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+