ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ಆಮ್ನೆಸ್ಟಿ: ಆರೋಪವೇನು?

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 29: ಮಾನವ ಹಕ್ಕುಗಳ ಸಂಸ್ಥೆಯಾಗಿರುವ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಭಾರತದ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ.

ಭಾರತ ಸರ್ಕಾರ ಆಧಾರರಹಿತ ಮತ್ತು ಪ್ರೇರಿತ ಆರೋಪಗಳ ಮೇಲೆ ಮಾನವಹಕ್ಕುಗಳ ಸಂಸ್ಥೆಯೊಂದನ್ನು ಪರಿಶೋಧನೆಗೊಳಪಡಿಸಿದೆ ಎಂದು ಆಮ್ನೆಸ್ಟಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಲಾಭದ ಅಪೇಕ್ಷೆ ಇಲ್ಲದೆ ಕೆಲಸ ಮಾಡುತ್ತಿರುವ ಸಂಸ್ಥೆ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ವಿದೇಶಗಳಿಂದ ದೇಣಿಗೆ ಪಡೆಯುತ್ತಿದೆ ಎಂಬ ಆರೋಪದ ಮೇಲೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಆಮ್ನೆಸ್ಟಿಯ ಬೆಂಗಳೂರು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು.

ಇದೇ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಹ ಆಮ್ನೆಸ್ಟಿ ವಿರುದ್ಧ ವಿಚಾರಣೆ ನಡೆಸಿತ್ತು.

Amnesty Halts India Operations, Alleges Government Witch-Hunt

ಭಾರತ ಸರ್ಕಾರ ಆಮ್ನೆಸ್ಟಿಗೆ ಸಂಬಂಧಿಸಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವ ಹಿನ್ನೆಲೆಯಲ್ಲಿ ತಾನು ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಸಂಶೋಧನೆಯಲ್ಲಿ ತೊಡಗಿದ್ದ ಸಿಬ್ಬಂದಿಗಳನ್ನು ಮನೆಗೆ ಕಳಿಸಲೇಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಆಮ್ನೆಸ್ಟಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹೋರಾಟಗಾರರಾದ ಸುಧಾ ಭಾರದ್ವಾಜ್ , ರೋನಾ ವಿಲ್ಸನ್ ಹಾಗೂ ವರವರ ರಾವ್ ಅವರ ಬಂಧನ ಪ್ರಕರಣಗಳಲ್ಲಿ ಸರ್ಕಾರದ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿದ್ದ ಆಮ್ನೆಸ್ಟಿ ತನ್ನ ಟ್ರಸ್ಟ್ ಮೂಲಕವಿದೇಶಿ ದೇಣಿಗೆ ಪಡೆಯುವುದಕ್ಕೆ ಸರ್ಕಾರ ಅನುಮತಿ ನಿರಾಕರಿಸಿತ್ತು.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆಯಾಗಿರುವುದಾಗಿ ಜಾರಿ ನಿರ್ದೇಶನಾಲಯ ಕಳೆದ ವರ್ಷ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ನ ಬೆಂಗಳೂರು ಕಚೇರಿ ಮೇಲೆ ದಾಳಿ ನಡೆಸಿತ್ತು.

ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿರುವ ವಿಷಯ ಸೆ.10 ರಂದು ತಿಳಿದುಬಂದಿದೆ. ನಾವು ಭಾರತ ಸರ್ಕಾರ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿಯೇ ಕೆಲಸ ಮಾಡುತ್ತಿದ್ದರೂ ನಮ್ಮ ವಿರುದ್ಧ ಭಾರತ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಮ್ನೆಸ್ಟಿ ಅಸಮಾಧಾನ ಹೊರಹಾಕಿದೆ.

English summary
Amnesty International has halted its operations in India and said it had to let go of its staff after its accounts were frozen earlier this month as part of what it called a "witch-hunt" by the government over its adverse reports.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X