Breaking: ನವದೆಹಲಿಯಲ್ಲಿ 2.5 ತೀವ್ರತೆ ಲಘು ಭೂಕಂಪನ
ನವದೆಹಲಿ, ನವೆಂಬರ್ 29: ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ರಾತ್ರಿ 9.30ರ ಸುಮಾರಿಗೆ ನವದೆಹಲಿಯಿಂದ ಪಶ್ಚಿಮಕ್ಕೆ 8 ಕಿಮೀ ದೂರದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.
ಕಳೆದ ನವೆಂಬರ್ 12ರಂದು ನವದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ನಗರಗಳಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿತ್ತು. ಭೂಮಿ ಕಂಪಿಸಿದಂತೆ ಭಾಸವಾಗುತ್ತಿದ್ದಂತೆ ಜನರು ಮನೆಗಳು ಹಾಗೂ ಕಚೇರಿಗಳಿಂದ ಹೊರ ಓಡಿ ಬಂದಿದ್ದಾರೆ ಎಂದು ವರದಿಯಾಗಿತ್ತು.

ಒಂದು ವಾರದಲ್ಲಿ ಎರಡು ಬಾರಿ ಭೂಕಂಪನ:
ಕಳೆದೊಂದು ವಾರದಲ್ಲಿ ನವದೆಹಲಿಯಲ್ಲಿ ಈ ರೀತಿಯ ಭೂಕಂಪನದ ಅನುಭವ ಎರಡನೇ ಬಾರಿ ಆಗುತ್ತಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಿದೆ ಎಂದು ದೂರದರ್ಶನ ಸಾರ್ವಜನಿಕ ಪ್ರಸಾರಕ ವರದಿ ಮಾಡಿದೆ.
ಇದೇ ವಾರದ ಆರಂಭದಲ್ಲಿ ದೆಹಲಿ ಪ್ರದೇಶದಲ್ಲಿ ಅನುಭವಿಸಿದ ಭೂಕಂಪದ ತೀವ್ರತೆಗಿಂತ ಕಡಿಮೆಯಾಗಿದೆ. ಈ ಭೂಕಂಪನದ ಆಳ ಮತ್ತೆ ಭೂಮಿಯ ಮೇಲ್ಮೈಯಿಂದ 10 ಕಿಲೋ ಮೀಟರ್ ಕೆಳಗಿರುವ ಬಗ್ಗೆ ವರದಿಯಲ್ಲಿ ಹೇಳಲಾಗಿದೆ. ನೋಯ್ಡಾ ಮತ್ತು ಗುರುಗ್ರಾಮದಲ್ಲಿ ಭೂಕಂಪನದ ಅನುಭವ ಆಗಿರುವ ಬಗ್ಗೆ ವರದಿಯಾಗಿವೆ.
ಬುಧವಾರವೂ ದೆಹಲಿಯಲ್ಲಿ ನಡುಗಿದ ಭೂಮಿ:
ಬುಧವಾರ ನಸುಕಿನ ವೇಳೆ ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತು. ಇದರ ಬೆನ್ನಲ್ಲೇ ದೆಹಲಿ-ಎನ್‌ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಯಿತು. ಬುಧವಾರ ನಸುಕಿನ 1.57ರ ಸುಮಾರಿಗೆ ಭೂಕಂಪ ಸಂಭವಿಸಿತು, ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಪ್ರಕಾರ ನೇಪಾಳ ಭೂಕಂಪದ ಕೇಂದ್ರಬಿಂದುವಾಗಿತ್ತು.

ನೇಪಾಳದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದ್ದು, ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಮಾಹಿತಿಯ ಪ್ರಕಾರ, ನೇಪಾಳದಲ್ಲಿ ಮಂಗಳವಾರ ರಾತ್ರಿ 8.52 ಕ್ಕೆ 4.9 ತೀವ್ರತೆಯ ಮೊದಲ ಭೂಕಂಪವಾಗಿತ್ತು. ನಂತರ 9.41 ಕ್ಕೆ 3.5 ತೀವ್ರತೆಯ ಭೂಕಂಪ ದಾಖಲಾಯಿತು. ಬುಧವಾರ ಮುಂಜಾನೆ 1.57ಕ್ಕೆ 6.3 ತೀವ್ರತೆಯ ಮೂರನೇ ಭೂಕಂಪನ ಸಂಭವಿಸಿದ್ದು, ಇದರ ಕಂಪನವು ದೆಹಲಿಯಲ್ಲಿ ಅನುಭವವಾಯಿತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications