ಮೋದಿ ಅಧಿಕಾರದಿಂದ ಇಳಿವವರೆಗೆ ನಾನು ಸಾಯುವುದಿಲ್ಲ ಎಂದ ಕಾಂಗ್ರೆಸ್ ಪ್ರಭಾವಿ ನಾಯಕ
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಿಂದ ಕೆಳಗೆ ಇಳಿಸಿವವರೆಗೂ ನಾನು ಅಧಿಕಾರದಿಂದ ಕೆಳಗೆ ಇಳಿಯುವುದಿಲ್ಲ ಎಂದು ಕಾಂಗ್ರೆಸ್‌ನ ಪ್ರಮುಖ ನಾಯಕರೊಬ್ಬರು ಗುಡುಗಿದ್ದಾರೆ. ನಾನು ಆರೋಗ್ಯವಾಗಿಯೇ ಇದ್ದಾನೆ. ನಾನು ಇಷ್ಟೊಂದು ಬೇಗ ಸಾಯುವುದಿಲ್ಲ. ನಿಮ್ಮ ಕಷ್ಟಗಳಿಗೆ ಕಿವಿಯಾಗುತ್ತೇನೆ ನಿಮ್ಮ ಪರವಾಗಿ ಹೋರಾಡುತ್ತೇನೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯಲ್ಲ. ನನಗೀಗ 83 ವರ್ಷವಾಗಿದೆ ಇಷ್ಟೊಂದು ಬೇಗ ಸಾವನ್ನಪ್ಪುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾನುವಾರ ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಸಭೆಯಲ್ಲಿ ಭಾಷಣ ಮಾಡುವಾಗಲೇ ಅವರಿಗೆ ತಲೆ ತಿರುಗಿತ್ತು. ನನಗೆ ಮಾತನಾಡುವ ಆಸಕ್ತಿ ಇದೆ. ಆದರೆ, ತಲೆ ತಿರುಗಿದಂತಾಗುತ್ತಿದೆ. ಹೀಗಾಗಿ, ನನ್ನಿಂದ ಮಾತನಾಡಲು ಸಾಧ್ಯವಾಗುತ್ತಿಲ್ಲ ಕ್ಷಮಿಸಿ ಎಂದಿದ್ದಾರೆ.

ಅವರು ಕ್ಷೇಮವಾಗಿ ಇದ್ದಾರೆ: ಮಲ್ಲಿಕಾರ್ಜುನ ಖರ್ಗೆ ಅವರು ಈಗ ಕ್ಷೇಮವಾಗಿದ್ದಾರೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಖರ್ಗೆ ಅವರಿಗೆ ರಕ್ತದೊತ್ತಡ ಸ್ವಲ್ಪ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರ ತಪಾಸಣೆ ಮಾಡಿದ್ದು, ಈಗ ಅವರು ಕ್ಷೇಮವಾಗಿದ್ದಾರೆ ಎಂದು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಬ್ಯುಸಿ: ಅನಾರೋಗ್ಯದ ನಡುವೆಯೂ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿಲ್ಲ. ದೇಶದ ಪ್ರಮುಖ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಹಂತದ ಚುನಾವಣೆ ಮುಗಿದಿದೆ. ಇದೀಗ ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ದೆಹಲಿಯಲ್ಲೂ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಈ ರಾಜ್ಯಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಮುಂದಾಳತ್ವ ವಹಿಸಿದ್ದಾರೆ. ಈ ರಾಜ್ಯಗಳಲ್ಲೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆ ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅನುಕಂಪದ ಮತಕ್ಕಾಗಿ ಆಟ: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆರೋಗ್ಯ ಅಷ್ಟೊಂದು ಹದಗೆಟ್ಟಿದೆ ಎಂದಾದರೆ ಅವರಿಗೆ ವಿಶ್ರಾಂತಿ ಏಕೆ ನೀಡಬಾರದು ಎಂದು ಬಿಜೆಪಿ ಟ್ವೀಟ್ ಮಾಡಿದೆ. ಅವರಿಗೆ ಮನೆಯಲ್ಲಿ ಕೂರಿಸಿ ವಿಶ್ರಾಂತಿ ನೀಡಬಾರದೇಕೆ. ಖರ್ಗೆ ಅವರ ಆರೋಗ್ಯ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಅನುಕಂಪದ ಆಧಾರದ ಮೇಲೆ ಮತ ಪಡೆಯುವುದಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದೆ. ಮಲ್ಲಿಕಾರ್ಜುನ ಖರ್ಗೆಯವರ ಅನಾರೋಗ್ಯವೂ ಕಾಂಗ್ರೆಸ್‌ನ ಚುನಾವಣೆಯ ಹೊಸ ಅಸ್ತ್ರವಾಗುತ್ತಿದೆ ಎಂದೂ ಕೆಲವರು ಹೇಳಿದ್ದಾರೆ. ಉತ್ತರ ಭಾರತದಲ್ಲಿ ಒಂದೇ ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಇದೀಗ ಸಾಲು ಸಾಲು ಚುನಾವಣೆಗಳು ಬರುತ್ತಿದ್ದು, ಈ ಚುನಾವಣೆಗಳಲ್ಲಿ ಗೆಲ್ಲುವು ಸಾಧಿಸುವುದು ಕಾಂಗ್ರೆಸ್‌ಗೆ ಮಹತ್ವದ ವಿಷಯವಾಗಿದೆ. ಈ ಚುನಾವಣೆಗಳು ಕಾಂಗ್ರೆಸ್ ಪಾಲಿಗೆ ನಿರ್ಣಾಯಕವಾಗಿವೆ. ಹೀಗಾಗಿ, ಕಾಂಗ್ರೆಸ್‌ನ ಎಲ್ಲ ಪ್ರಮುಖ ನಾಯಕರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.












Click it and Unblock the Notifications