ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂವಿಧಾನ ಬದಲಾವಣೆ ಹೇಳಿಕೆ : ಕ್ಷಮೆ ಕೋರಿದ ಅನಂತ್ ಕುಮಾರ್ ಹೆಗ್ಡೆ

|
Google Oneindia Kannada News

ನವದೆಹಲಿ, ಡಿಸೆಂಬರ್ 28 : 'ಸಂವಿಧಾನ ಬದಲಾವಣೆ ಮಾಡಲು ಅಧಿಕಾರಕ್ಕೆ ಬಂದಿದ್ದೇವೆ' ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಸಚಿವರು ಈಗ ಹೇಳಿಕೆ ಬಗ್ಗೆ ಕ್ಷಮೆ ಯಾಚನೆ ಮಾಡಿದ್ದಾರೆ.

ರಾಹುಲ್ ನೇತೃತ್ವದಲ್ಲಿ ಸಂಸದ ಅನಂತ್ ವಿರುದ್ಧ ಪ್ರತಿಭಟನೆರಾಹುಲ್ ನೇತೃತ್ವದಲ್ಲಿ ಸಂಸದ ಅನಂತ್ ವಿರುದ್ಧ ಪ್ರತಿಭಟನೆ

ಗುರುವಾರ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರು, 'ತಮ್ಮ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುವೆ' ಎಂದು ಹೇಳಿದರು.

ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಂಸತ್ತಿನಲ್ಲಿ ಕಿಡಿಕಾರಿದ ಕಾಂಗ್ರೆಸ್ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಂಸತ್ತಿನಲ್ಲಿ ಕಿಡಿಕಾರಿದ ಕಾಂಗ್ರೆಸ್

Ananthkumar Hegde apologizes for his statement on Indian constitution

'ಸಂವಿಧಾನ, ಸಂಸತ್ತು ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಇದರ ಬಗ್ಗೆ ಯಾವುದೇ ಪ್ರಶ್ನೆ ಬೇಡ. ದೇಶದ ಪ್ರಜೆಯಾಗಿ ನಾನು ಇದರ ವಿರುದ್ಧ ಹೋಗುವುದಿಲ್ಲ' ಎಂದು ಲೋಕಸಭೆಯಲ್ಲಿ ಸಚಿವರು ಹೇಳಿದರು.

'ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವೆ' ಎಂಬ ಸಚಿವರ ಹೇಳಿಕೆಗೆ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಜಾತ್ಯಾತೀತರು ಅಪ್ಪ- ಅಮ್ಮನ ರಕ್ತದ ಗುರುತಿಲ್ಲದವರು: ಅನಂತಕುಮಾರ್ ಹೆಗಡೆಜಾತ್ಯಾತೀತರು ಅಪ್ಪ- ಅಮ್ಮನ ರಕ್ತದ ಗುರುತಿಲ್ಲದವರು: ಅನಂತಕುಮಾರ್ ಹೆಗಡೆ

ಸಂಸತ್ ಭವನದ ಗಾಂಧಿ ಪ್ರತಿಮೆ ಮುಂದೆ ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರು ಪ್ರತಿಭಟನೆ ನಡೆಸಿದರು. ಅನಂತ್ ಕುಮಾರ್ ಹೆಗ್ಡೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಲಾಪಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಸಂವಿಧಾನ, ಸಂಸತ್ತು ನನಗೆ ಪವಿತ್ರವಾದದ್ದು' ಎಂದು ಹೇಳಿದರು.

ಡಿಸೆಂಬರ್ 24ರಂದು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರಿನಲ್ಲಿ ಬ್ರಾಹ್ಮಣ ಮಹಾಸಭಾದ ಯುವ ಸಮಾವೇಶ ಉದ್ದೇಶಿಸಿ ಮಾತನಾಡಿದ ಅನಂತ್ ಕುಮಾರ್ ಹೆಗ್ಡೆ, 'ಹಿಂದೂ ಒಂದು ಸಮಾಜದ ಸ್ವತ್ತಲ್ಲ. ಸಂವಿಧಾನ ಕಾಲ ಕಾಲಕ್ಕೆ ಬದಲಾಗಬೇಕು. ಸಂವಿಧಾನ ಬದಲಾಯಿಸುವುದಕ್ಕೆ ನಾವು ಅಧಿಕಾರಕ್ಕೆ ಬಂದಿರುವುದು' ಎಂದು ಹೇಳಿಕೆ ನೀಡಿದ್ದರು.

English summary
Minister of State for Employment and Skill Development Anantkumar Hegde on December 28, 2017 apologized for his statement of Constitution needs to be amended. In the lok sabha he said Constitution is supreme to me.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X