ಅಂಡಮಾನ್ ನಿಕೋಬಾರ್ ನಲ್ಲಿ ಭೂಕಂಪ: 4.5 ತೀವ್ರತೆ ದಾಖಲು
ಅಂಡಮಾನ್, ಸೆಪ್ಟೆಂಬರ್ 16: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 4 ಗಂಟೆಯ ಸಮಯದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರೊಕ್ಟರ್ ಮಾಪನದಲ್ಲಿ 4.5 ತೀವ್ರತೆ ದಾಖಲಾಗಿದೆ.
10 ಕಿ.ಮೀ. ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications