ತರಗತಿಯಿಂದ ಹೊರಬಂದು ಮೂರನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ವೈರಲ್

ಕಾಲೇಜು ತರಗತಿಯಿಂದ ಹೊರ ಬಂದ ವಿದ್ಯಾರ್ಥಿಯೊಬ್ಬ ಮೂರನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿಯುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಆಂಧ್ರ ಪ್ರದೇಶದ ಅನಂತಪುರದ ನಾರಾಯಣ ಕಾಲೇಜಿನ ವಿದ್ಯಾರ್ಥಿ ಗುರುವಾರ ಬೆಳಿಗ್ಗೆ ಸುಮಾರು 10.15 ಗಂಟೆಯ ವೇಳೆಗೆ ತರಗತಿ ನಡೆಯುವ ಸಂದರ್ಭದಲ್ಲೇ ಹೊರಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಘಾತಕಾರಿ ಘಟನೆ ಕಾಲೇಜಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Andhra college student dies by suicide jumping off third floor

ತರಗತಿ ನಡೆಯುವಾಗಲೇ ಬಾಲಕ ಮೂರನೇ ಮಹಡಿಯಲ್ಲಿ ತರಗತಿ ಕೊಠಡಿಯಿಂದ ಹೊರಬರುವುದನ್ನು ವಿಡಿಯೋದಲ್ಲಿ ನೋಡಬಹುದು. ಹೊರ ಬಂದ ಬಳಿಕ ಅಲ್ಲಿಂದ ಕೆಳಗೆ ಜಿಗಿದಿದ್ದಾನೆ. ತಕ್ಷಣವೇ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕ ಮತ್ತು ಇತರೆ ವಿದ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಚರಣ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಚರಣ್ ಆತ್ಮಹತ್ಯೆ ಇಡೀ ತರಗತಿಯ ವಿದ್ಯಾರ್ಥಿಗಳಿಗೆ ದೊಡ್ಡ ಆಘಾತ ನೀಡಿದೆ. ಕಾಲೇಜು ಆವರಣದಲ್ಲೇ ಆತ್ಮಹತ್ಯೆ ಘಟನೆ ನಡೆದಿರುವುದು ಇಡೀ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿದೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+