Get Updates
Get notified of breaking news, exclusive insights, and must-see stories!

Tirupati Stampede: ತಿರುಪತಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ಪರಿಹಾರ, ಉದ್ಯೋಗ

ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ಗುತ್ತಿಗೆ ಉದ್ಯೋಗ ನೀಡುವುದಾಗಿಯೂ ಭರವಸೆ ಕೂಡ ನೀಡಿದ್ದಾರೆ.

ತಿರುಪತಿಯಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಭಕ್ತ ಸಾಗರವೇ ಹರಿದು ಬರುತ್ತಿದೆ. ಜನವರಿ 10ರಿಂದ ವೈಕುಂಠ ದ್ವಾರ ದರ್ಶನ ಪ್ರಾರಂಭವಾಗಿದ್ದು ಇದು 10 ದಿನಗಳವರೆಗೆ ನಡೆಯಲಿದೆ. ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಪಡೆಯಲು ಜನವರಿ 8ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತದಿಂದ ಆರು ಜನ ಮೃತಪಟ್ಟಿದ್ದಾರೆ. ಜೊತೆಗೆ 40 ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಂತ್ರಸ್ತರನ್ನು ಭೇಟಿ ಮಾಡಲು ಸಿಎಂ ಚಂದ್ರಬಾಬು ನಾಯ್ಡು ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪರಿಹಾರವನ್ನು ಫೋಷಣೆ ಮಾಡಿದ್ದಾರೆ.

andhra government providing 25 lakh rs compensation jobs to families of tirupati stampede victims

ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ಪರಿಹಾರ

ತಿರುಪತಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಮತ್ತು ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗುವುದು. ಗಾಯಗೊಂಡ 35 ಜನರಿಗೆ ಉಚಿತ ವೈಕುಂಠ ದ್ವಾರ ದರ್ಶನ ನೀಡಲಾಗುವುದು ಎಂದು ನಾಯ್ಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಸಿಎಂ ಹೇಳಿಕೆಯಂತೆ ಕಳೆದ ದಿನ ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡ 35 ಜನರಿಗೆ ವೈಕುಂಠ ದ್ವಾರ ದರ್ಶನ ನೀಡಲಾಗಿದೆ. ಜೊತೆಗೆ ಈ ದುರ್ಘಟನೆಗೆ ಟಿಟಿಡಿ ಕ್ಷಮೆ ಕೂಡ ಯಾಚಿಸಿದೆ.

ಘಟನೆ ಬಗ್ಗೆ ಮಾತನಾಡಿದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಅವರು ನಾಯ್ಡು ಅವರ ಸೂಚನೆಯಂತೆ, "ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಲು ನಾವು ನಿರ್ಧರಿಸಿದ್ದೇವೆ" ಎಂದು ಹೇಳಿದರು.

andhra government providing 25 lakh rs compensation jobs to families of tirupati stampede victims

ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆ

ಕಾಲ್ತುಳಿತದ ಕಾರಣಗಳನ್ನು ತನಿಖೆ ಮಾಡಲು ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭರವಸೆ ನೀಡಿದ್ದಾರೆ. ಘಟನೆಯ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು. ಜೊತೆಗೆ ಈ ಘಟನೆಗೆ ಸಂಬಂಧಿಸಿದಂತೆ ಗೋಶಾಲೆಯ ನಿರ್ದೇಶಕ ಅರುಣಾಧ್ ರೆಡ್ಡಿ ಮತ್ತು ಒಬ್ಬ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಎಸ್ಪಿ, ಎಇಒ ಗೌತಮಿ ಮತ್ತು ಇನ್ನೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಇನ್ನೂ ತಿರುಪತಿಯಲ್ಲಿ ಜನಸಂದಣಿ ನಿರ್ವಹಣೆಯಲ್ಲಿನ ಲೋಪಗಳು ಇವೆ ಎಂದು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. "ನಾನು ಯಾರನ್ನೂ ದೂಷಿಸುತ್ತಿಲ್ಲ. ನಾನು ಕಳೆದ 45 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ತಿರುಪತಿಯಲ್ಲಿ ಈಗಾಗಲೇ ಭದ್ರತೆಯನ್ನು ನಿಯೋಜಿಸಲಾಗಿತ್ತು, ಆದರೆ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಅದನ್ನು ಮಾಡಲು ನಿಯೋಜಿತ ಅಧಿಕಾರಿಗಳು ವಿಫಲರಾಗಿದ್ದಾರೆ. ಅವರು ಟಿಕೆಟ್‌ಗಾಗಿ ಕಾದು ನಿಂತಿದ್ದ ಜನರ ಗೇಟ್‌ ಅನ್ನು ಏಕಾಏಕಿ ತೆಗೆದಿದ್ದಾರೆ. ಇಲ್ಲದಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಉತ್ತಮ ಸಮನ್ವಯದ ಅಗತ್ಯವಿದೆ" ಎಂದು ಅವರು ಹೇಳಿದರು.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಕೂಡ ತಿರುಪತಿಯಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು. ಜೊತೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮ್ಮ ಸಂತಾಪ ಸೂಚಿಸಿದರು ಮತ್ತು ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 2 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+