ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ!

By Gururaj
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10 : ಆಂಧ್ರಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂ. ಕಡಿಮೆಯಾಗಿದೆ. ಇಂಧನಗಳ ಮೇಲಿನ ವ್ಯಾಟ್ ಕಡಿಮೆ ಮಾಡಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದೇಶ ಹೊರಡಿಸಿದರು.

ಸೋಮವಾರ ಮಧ್ಯಾಹ್ನ ಚಂದ್ರಬಾಬು ನಾಯ್ಡು ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್) ಕಡಿತಗೊಳಿಸಿದರು. ಇದರಿಂದಾಗಿ ಇಂಧನ ದರ 2 ರೂ. ಕಡಿಮೆ ಆಗಿದೆ.

ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ಕುಮಾರಸ್ವಾಮಿ ಚಿಂತನೆಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ಕುಮಾರಸ್ವಾಮಿ ಚಿಂತನೆ

ರಾಜಸ್ಥಾನದ ಬಿಜೆಪಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್‌ ಅನ್ನು ಶೇ 4ರಷ್ಟು ಕಡಿತಗೊಳಿಸಿತ್ತು. ರಾಜಸ್ಥಾನದ ಬಳಿಕ ಆಂಧ್ರಪ್ರದೇಶ ಸರ್ಕಾರ ವ್ಯಾಟ್ ಕಡಿಮೆ ಮಾಡಿದೆ.

Andhra Pradesh announces reduction in VAT on petrol and diesel

'ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡುವ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ತಟ್ಟಲಿಲ್ಲ ಭಾರತ್ ಬಂದ್ ಬಿಸಿ!ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ತಟ್ಟಲಿಲ್ಲ ಭಾರತ್ ಬಂದ್ ಬಿಸಿ!

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಸೋಮವಾರ ಭಾರತ ಬಂದ್‌ಗೆ ಕರೆ ನೀಡಿತ್ತು. ಬಂದ್ ದಿನವೇ ಆಂಧ್ರ ಪ್ರದೇಶ ಮತ್ತು ರಾಜಸ್ಥಾನ ಇಂಧನ ದರಗಳನ್ನು ಕಡಿಮೆ ಮಾಡಿದೆ.

ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಕಡಿಮೆ ಮಾಡ್ತಾರಾ ಎಚ್ಡಿಕೆ?ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಕಡಿಮೆ ಮಾಡ್ತಾರಾ ಎಚ್ಡಿಕೆ?

ಅಂದಹಾಗೆ ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 83.36 ಮತ್ತು ಡೀಸೆಲ್ ದರ 75.18 ರೂ.ಗಳು.

English summary
Andhra Pradesh chief minister Chandrababu Naidu announced reduction in Value Added Tax (VAT) on petrol and diesel. After VAT reduction petrol and diesel pierce down to Rs 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X