Allu Arjun: ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲು, ಹೆಚ್ಚಿನ ಮಾಹಿತಿ ಇಲ್ಲಿದೆ
ಅಮರಾವತಿ, ಮೇ. 12: ಪುಷ್ಪ: ದಿ ರೂಲ್ ಸಿನಿಮಾ ಹಾಡು ಬಿಡುಗಡೆಯಾಗಿದ್ದು, ಸಿನಿಮಾ ಬಿಡುಗಡೆಗಾಗಿ ಅಲ್ಲು ಅರ್ಜುನ್ ಅಭಿಮಾನಿಗಳ ಜೊತೆಗೆ ಇಡೀ ಚಿತ್ರರಂಗವೇ ಕಾದು ಕುಳಿತಿದೆ. ಇದರ ನಡುವೆ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಸಕತ್ ಜೋರಾಗಿದೆ. ಮೇ 13ರ ಸೋಮವಾರ ಚುನಾವಣೆ ನಡೆಯಲಿದ್ದು, ಅಲ್ಲು ಅರ್ಜುನ್ ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಹೌದು.. ನಟ ಅಲ್ಲು ಅರ್ಜುನ್ ಆಂಧ್ರಪ್ರದೇಶ ನಂದ್ಯಾಳದಲ್ಲಿ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ತಮ್ಮ ಆಪ್ತ ಸ್ನೇಹಿತನಿಗಾಗಿ ಪ್ರಚಾರ ನಡೆಸಿದ ನಟ ಅಲ್ಲು ಅರ್ಜುನ್ ಮೇಲೆ ಪ್ರಕರಣ ದಾಖಲಾಗಿದೆ.

ನಟ ಅಲ್ಲು ಅರ್ಜುನ್ ಮೇಲೆ ಪ್ರಕರಣ
ಚುನಾವಣಾ ಪ್ರಚಾರ ನಡೆಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ. ರವಿಚಂದ್ರ ಅವರ ನಿವಾಸದಲ್ಲಿ ಅಲ್ಲು ಅರ್ಜುನ್ ಅವರನ್ನು ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರ ಸಾಗರವೇ ಬಂದಿತು. ಇದು ಭಾರೀ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಟ್ರಾಫಿಕ್ ಜಾಮ್‌ಗೆ ಕಾರಣವಾಗಿದೆ.
ಆಂಧ್ರಪ್ರದೇಶ ಚುನಾವಣೆಗೆ ಮುನ್ನ ಶಾಸಕರ ನಿವಾಸದಲ್ಲಿ ಬೃಹತ್ ಸಾರ್ವಜನಿಕ ಸಭೆಗೆ ಅವಕಾಶ ಮಾಡಿಕೊಟ್ಟಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಅವರ ಮೇಲಿದೆ. ಶಾಸಕ ರವಿಚಂದ್ರ ರೆಡ್ಡಿ ಅವರು ಶನಿವಾರ ಸಭೆಗೆ ಅನುಮತಿ ಪಡೆಯದೇ ಅಲ್ಲು ಅರ್ಜುನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
నా మిత్రుడు, శ్రేయోభిలాషి ఐకాన్ స్టార్ @alluarjun గారు సతీ సమేతంగా నంద్యాల విచ్చేసి రానున్న ఎన్నికలకు శుభాకాంక్షలు తెలిపినందుకు మనస్ఫూర్తిగా ధన్యవాదాలు! pic.twitter.com/c2ti2efMmO
— Silpa Ravi Reddy (@SilpaRaviReddy) May 11, 2024
ನಟ ಅಲ್ಲು ಅರ್ಜುನ್ ಮತ್ತು ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಂಧ್ರಪ್ರದೇಶದ ನಂದ್ಯಾಲ ಕ್ಷೇತ್ರದ ಚುನಾವಣಾ ಉಸ್ತುವಾರಿಗಾಗಿ ನಿಯೋಜಿಸಲಾದ ನಂದ್ಯಾಲ ಗ್ರಾಮಾಂತರದ ಉಪ ತಹಸೀಲ್ದಾರ್ ಪಿ ರಾಮಚಂದ್ರರಾವ್ ಅವರು ಪ್ರಕರಣ ದಾಖಲಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಸೋಮವಾರ (ಮೇ 13) ನಡೆಯಲಿರುವ ಮತದಾನಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲು ಅರ್ಜುನ್ ಜೊತೆಗೆ, ಅವರ ಪತ್ನಿ ಸ್ನೇಹಾ ಕೂಡ ಬಂದಿದ್ದರು. ಸ್ಟಾರ್ ಹೀರೋ ತನ್ನ ಸ್ನೇಹಿತನಿಗಾಗಿ ಪ್ರಚಾರ ಮಾಡಿದ್ದು ನೋಡಿ ಅಭಿಮಾನಿಗಳು ಸೂಪರ್ ಥ್ರಿಲ್ ಆಗಿದ್ದಾರೆ.
ಮೊನ್ನೆ ಶನಿವಾರ, ಅಪಾರ ಅಭಿಮಾನಿಗಳ ನಡುವೆ ರವಿಚಂದ್ರ ಕಿಶೋರ್ ರೆಡ್ಡಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ, ಅಲ್ಲು ಅರ್ಜುನ್ ಅವರು ತಮ್ಮ ಸ್ನೇಹಿತರಿಗೆ ಸಹಾಯ ಮಾಡಲು ನಂದ್ಯಾಲಕ್ಕೆ ಭೇಟಿ ನೀಡಿದ್ದೇನೆ ಮತ್ತು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
" ನಾನೊಬ್ಬನೇ ಇಲ್ಲಿಗೆ ಬಂದಿದ್ದೇನೆ. ನನ್ನ ಸ್ನೇಹಿತರಲ್ಲಿ ಅವರು ಯಾವುದೇ ಕ್ಷೇತ್ರದಲ್ಲಿದ್ದರೂ ಅವರಿಗೆ ನನ್ನ ಸಹಾಯ ಬೇಕಾದರೆ ನಾನು ಅವರಿಗೆ ಸಹಾಯ ಮಾಡುತ್ತೇನೆ. ಇದು ನಾನು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತೇನೆಎಂದು ಅರ್ಥವಲ್ಲ" ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.












Click it and Unblock the Notifications