Exit Poll Result 2024: ಆಂಧ್ರ ಪ್ರದೇಶದಲ್ಲಿ ಜಗನ್‌ಗೆ ಸೋಲು
ಅಮರಾವತಿ, ಜೂನ್ 01: ಲೋಕಸಭೆ ಚುನಾವಣೆ 2024ರ ಜೊತೆಗೆ ಆಂಧ್ರ ಪ್ರದೇಶದಲ್ಲಿ ಮೇ 13ರಂದು 175 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಆಂಧ್ರ ಪ್ರದೇಶ ರಾಜ್ಯ ಹೈ ವೋಲ್ಟೇಜ್ ಮತದಾನಕ್ಕೆ ಸಾಕ್ಷಿಯಾಗಿತ್ತು. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಎನ್‌ಡಿಎ ಮೈತ್ರಿಕೂಟ, ಕಾಂಗ್ರೆಸ್‌ನಿಂದ ಪ್ರತಿಸ್ಪರ್ಧೆ ಎದುರಿಸುತ್ತಿದ್ದಾರೆ. ಜೂನ್ 1ರ ಶನಿವಾರ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ.

ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 175. ರಾಜ್ಯದಲ್ಲಿ ಅಧಿಕಾರ ನಡೆಸಲು ಬೇಕಾದ ಮ್ಯಾಜಿಕ್ ನಂಬರ್ 88. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ತೀವ್ರ ಹಿನ್ನಡೆಯಾಗಲಿದೆ.
ವೈಎಸ್ಆರ್‌ಪಿ ಪಕ್ಷದ ಮುಖ್ಯಸ್ಥ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಒಂದಾಗಿ ಚುನಾವಣೆ ಎದುರಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟ ಇವರ ಬೆಂಬಲಕ್ಕಿದೆ.
ಸಮೀಕ್ಷೆಗಳ ಫಲಿತಾಂಶ: ಶನಿವಾರ ಪ್ರಕಟಗೊಂಡ ವಿವಿಧ ಸಮೀಕ್ಷೆಗಳ ಪ್ರಕಾರ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಮೈತ್ರಿಕೂಟ ಜಯಗಳಿಸಲಿದೆ. 175 ಸ್ಥಾನಗಳ ಪೈಕಿ ಮೈತ್ರಿಕೂಟ 160 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ.
ರೈಸ್ ನಡೆಸಿರುವ ಸಮೀಕ್ಷೆ ಪ್ರಕಾರ ಟಿಡಿಪಿ + ಮೈತ್ರಿಕೂಟ ರಾಜ್ಯದಲ್ಲಿ 92-102, ವೈಎಸ್ಆರ್‌ಪಿ ವೈಎಸ್ಆರ್‌ಪಿ 48-60 ಸ್ಥಾನಗಳಲ್ಲಿ ಜಯಗಳಿಸಲಿದೆ.
ಪೀಪಲ್ಸ್ ಪ್ಲಸ್, ಟಿವಿ 5 ತೆಲಗು ಸಮೀಕ್ಷೆಗಳ ಪ್ರಕಾರ ಟಿಡಿಪಿ +111-135 ಸೀಟುಗಳಲ್ಲಿ ಜಯಗಳಿಸಲಿದೆ. ವೈಎಸ್‌ಆರ್‌ಪಿ 45-60 ಸೀಟುಗಳಿಸಲಿದೆ.
ಆದರೆ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷದ ಬಗ್ಗೆ ಹೆಚ್ಚು ಒತ್ತು ನೀಡಿಲ್ಲ. ಕಾಂಗ್ರೆಸ್ ಪಕ್ಷ ಸಹ ಆಂಧ್ರ ಪ್ರದೇಶದ ಚುನಾವಣೆಗೆ ಬಗ್ಗೆ ಭಾರಿ ನಿರೀಕ್ಷೆ ಹೊಂದಿದೆ. ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷೆ ಜಗನ್ ಸಹೋದರಿ ವೈ. ಎಸ್. ಶರ್ಮಿಳಾ.
ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಸಹ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 21 ಸೀಟುಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications