Andhra Pradesh: ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿದ ದಾಳಿಕೋರರು!

ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ಗುಂಪು ದಲಿತ ವ್ಯಕ್ತಿಯೊಬ್ಬನನ್ನು ಥಳಿಸಿ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಆಂಧ್ರಪ್ರದೇಶದ ಓಂಗೋಲ್‌ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳು ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಪೈಕಿ ಹಲ್ಲೆಕೋರನೊಬ್ಬ ವಿಡಿಯೋವನ್ನು ರೆಕಾರ್ಡ್ ಮಾಡಿದ್ದು ಇದೀಗ ವಿಡಿಯೋ ಬಹಿರಂಗಗೊಂಡಿದೆ.

ಪೊಲೀಸರ ಪ್ರಕಾರ, ಬಲಿಪಶುವನ್ನು ಮೋಟಾ ನವೀನ್ (ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರು) ಎಂದು ಗುರುತಿಸಲಾಗಿದೆ. ಈತನ ಮೇಲೆ ಒಂಬತ್ತು ಜನರ ಗುಂಪು ಹಲ್ಲೆ ನಡೆಸಿದೆ. ಇಬ್ಬರು ಪುರುಷರು ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

Andhra Pradesh: Dalit man assaulted and urinated on

ಪ್ರಮುಖ ಆರೋಪಿಯನ್ನು ಮನ್ನೆ ರಾಮಾಂಜನೇಯಲು ಎಂದು ಗುರುತಿಸಲಾಗಿದ್ದು, ಗುಂಪಿನಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವೀನ್ ಮತ್ತು ರಾಮಾಂಜನೇಯುಲು ಬಾಲ್ಯದ ಗೆಳೆಯರಾಗಿದ್ದು, ಅವರ ವಿರುದ್ಧ ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ 50 ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋಟಾ ನವೀನ್ ಮತ್ತು ರಾಮಾಂಜನೇಯಲು ಅವರ ಸ್ನೇಹಿತರೊಬ್ಬರ ನಡುವೆ ಬಾಲಕಿ ವಿಚಾರವಾಗಿ ಜಗಳ ನಡೆದಿತ್ತು. ನಂತರ ರಾಮಾಂಜನೇಯುಲು ಅವರು ಜೂನ್ 19 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮದ್ಯ ಸೇವಿಸಿದ ನವೀನ್ ಅವರನ್ನು ಪ್ರತ್ಯೇಕ ಸ್ಥಳಕ್ಕೆ ಕರೆಸಿಕೊಂಡು ವಿಷಯ ಇತ್ಯರ್ಥಪಡಿಸಿದರು.

ಆದರೆ ರಾಮಾಂಜನೇಯಲು ಮತ್ತು ಇತರ ಎಂಟು ಮಂದಿ ನವೀನ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನಂತರ ಅವರಲ್ಲಿ ಇಬ್ಬರು ಅವನ ಮೇಲೆ ಮೂತ್ರ ವಿಸರ್ಜನೆ ಮಾಡಿದರು ಎಂದು ಓಂಗೋಲ್ ಎಸ್ಪಿ ಮಲಿಕಾ ಗಾರ್ಗ್ ಹೇಳಿದ್ದಾರೆ.

Andhra Pradesh: Dalit man assaulted and urinated on

"ಮೋಟಾ ನವೀನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಕೃತ್ಯದ ಬಗ್ಗೆ ಏನನ್ನೂ ಹೇಳಲಿಲ್ಲ. ಪೊಲೀಸರು ಆತನೊಂದಿಗೆ ಮಾತನಾಡುವ ಮೊದಲು ಅವರು ಡಿಸ್ಚಾರ್ಜ್ ಆಗಿದ್ದಾರೆ ಮತ್ತು ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಐದು ದಿನಗಳ ಹಿಂದೆಯೇ ಕೃತ್ಯದ ವಿಡಿಯೊವನ್ನು ಪಡೆದುಕೊಂಡಿದ್ದಾರೆ' ಎಂದು ಎಸ್ಪಿ ತಿಳಿಸಿದ್ದಾರೆ.

ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989 ರ ಅಡಿಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಒಂಬತ್ತು ಶಂಕಿತರ ಪೈಕಿ ಆರು ಮಂದಿಯನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿ ರಾಮಾಂಜನೇಯಲು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವಿಡಿಯೋವೊಂದು ಆಕ್ರೋಶಕ್ಕೆ ಕಾರಣವಾದ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕೂಲಿ ಕೆಲಸ ಮಾಡುತ್ತಿದ್ದ ಪಾಲೆ ಕೋಲ್ ಎಂಬ ಬುಡಕಟ್ಟು ಜನಾಂಗದ ವ್ಯಕ್ತಿ ಮೂತ್ರ ವಿಸರ್ಜನೆಗೆ ಒಳಗಾದ ವ್ಯಕ್ತಿ. ವಿಡಿಯೋದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+